Shreyas Iyer: ಕೋಲ್ಕತಾ ನೈಟ್ ರೈಡರ್ಸ್‌ ತಂಡದ ನಾಯಕ ಪಟ್ಟ ಅಲಂಕರಿಸಿದ ಶ್ರೇಯಸ್‌ ಅಯ್ಯರ್..!

By Suvarna News  |  First Published Feb 16, 2022, 5:23 PM IST

2022ನೇ ಸಾಲಿನ ಐಪಿಎಲ್‌ ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಅವರನ್ನು 12.25 ಕೋಟಿ ರುಪಾಯಿ ನೀಡಿ ಕೋಲ್ಕತಾ ನೈಟ್‌ ರೈಡರ್ಸ್‌ ಫ್ರಾಂಚೈಸಿಯು ಖರೀದಿಸಿತ್ತು. ಈ ಮೊದಲು ಶ್ರೇಯಸ್ ಅಯ್ಯರ್, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.


ಬೆಂಗಳೂರು(ಫೆ.16): ಬಹುನಿರೀಕ್ಷಿತ 2022ನೇ ಸಾಲಿನ ಇಂಡಿಯನ್‌ ಪ್ರೀಮಿಯರ್‌ ಲೀಗ್ (Indian Premier League) ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಿರೀಕ್ಷೆಯಂತೆಯೇ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ಕೋಲ್ಕತಾ ನೈಟ್‌ ರೈಡರ್ಸ್ (Kolkata Knight Riders) ಫ್ರಾಂಚೈಸಿ ತನ್ನ ತಂಡದ ನಾಯಕರನ್ನಾಗಿ ಘೋಷಿಸಿದೆ. 15ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಮಾರ್ಚ್‌ ಅಂತ್ಯದ ವೇಳೆಗೆ ಆರಂಭವಾಗುವ ಸಾಧ್ಯತೆಯಿದೆ.

2022ನೇ ಸಾಲಿನ ಐಪಿಎಲ್‌ ಮೆಗಾ ಹರಾಜಿನಲ್ಲಿ (IPL Mega Auction) ಶ್ರೇಯಸ್ ಅಯ್ಯರ್ ಅವರನ್ನು 12.25 ಕೋಟಿ ರುಪಾಯಿ ನೀಡಿ ಕೋಲ್ಕತಾ ನೈಟ್‌ ರೈಡರ್ಸ್‌ ಫ್ರಾಂಚೈಸಿಯು ಖರೀದಿಸಿತ್ತು. ಈ ಮೊದಲು ಶ್ರೇಯಸ್ ಅಯ್ಯರ್, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಐಪಿಎಲ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿತ್ತು. 2020ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ (Mumbai India) ವಿರುದ್ದ ಮುಗ್ಗರಿಸುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. 

Latest Videos

undefined

ಇನ್ನು 2021ರ ಐಪಿಎಲ್‌ ಟೂರ್ನಿಗೂ ಮುನ್ನ ಶ್ರೇಯಸ್‌ ಅಯ್ಯರ್‌ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಷಭ್ ಪಂತ್‌ಗೆ (Rishabh Pant) ನಾಯಕ ಪಟ್ಟ ಕಟ್ಟಲಾಗಿತ್ತು. ಇನ್ನು 2022ರ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಫ್ರಾಂಚೈಸಿಯು ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ರಿಲೀಸ್‌ ಮಾಡಿತ್ತು. ಇನ್ನು 2021ರ ಐಪಿಎಲ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ನಾಯಕರಾಗಿ ಕೋಲ್ಕತಾ ನೈಟ್‌ ರೈಡರ್ಸ್ ತಂಡವನ್ನು ಫೈನಲ್‌ಗೇರಿಸಿದ್ದರು. ಆದರೆ ಬ್ಯಾಟಿಂಗ್‌ನಲ್ಲಿ ಇಯಾನ್‌ ಮಾರ್ಗನ್‌, ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರಿಂದ ಮಾರ್ಗನ್ ಅವರನ್ನು ಕೆಕೆಆರ್ ಫ್ರಾಂಚೈಸಿಯು ತಂಡದಿಂದ ಕೈಬಿಟ್ಟಿತ್ತು. 

🚨 Ladies and gentlemen, boys and girls, say hello 👋 to the NEW SKIPPER of the

অধিনায়ক pic.twitter.com/veMfzRoPp2

— KolkataKnightRiders (@KKRiders)

ಇದೀಗ ಎರಡು ಬಾರಿಯ ಐಪಿಎಲ್ ಚಾಂಪಿಯನ್‌ ಕೆಕೆಆರ್ ತಂಡವು ತನ್ನ ಹೆಡ್‌ ಕೋಚ್‌ ಬ್ರೆಂಡನ್ ಮೆಕ್ಕಲಂ ಮಾರ್ಗದರ್ಶನದಲ್ಲಿ ನೂತನ ನಾಯಕ ಶ್ರೇಯಸ್ ಅಯ್ಯರ್ ಹೊಸ ಗುರಿಯತ್ತ ಚಿತ್ತ ನೆಟ್ಟಿದೆ. 

ಭಾರತದ ಪ್ರತಿಭಾನ್ವಿತ ಭವಿಷ್ಯದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ತಂಡದ ತೆಕ್ಕೆಗೆ ಸೆಳೆದುಕೊಂಡಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಶ್ರೇಯಸ್ ಅಯ್ಯರ್ ಅವರ ಆಟ ಹಾಗೂ ನಾಯಕತ್ವ ಗುಣವನ್ನು ನಾನು ಸಾಕಷ್ಟು ಎಂಜಾಯ್ ಮಾಡಿದ್ದೇನೆ. ಇದೀಗ ಶ್ರೇಯಸ್ ಅಯ್ಯರ್ ಜತೆ ಕೆಲಸ ಮಾಡಲು ಕಾತರನಾಗಿದ್ದೇನೆ ಎಂದು ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಕೋಚ್‌ ಬ್ರೆಂಡನ್ ಮೆಕ್ಕಲಂ ಹೇಳಿದ್ದಾರೆ.

IPL Auction 2022 ಹರಾಜಿನ ಬಳಿಕ ಹೀಗಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ!

ಕೆಕೆಆರ್ ತಂಡದ ನಾಯಕನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ಪ್ರತಿಷ್ಠಿತ ಐಪಿಎಲ್‌ ತಂಡಗಳಲ್ಲಿ ಒಂದು ಎನಿಸಿರುವ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ನಾಯಕನಾಗಿ ನೇಮಕವಾಗಿರುವುದು ನನ್ನ ಸೌಭಾಗ್ಯ ಎಂದು ಭಾವಿಸುತ್ತೇನೆ. ಐಪಿಎಲ್‌ ಟೂರ್ನಿಯು ವಿವಿಧ ದೇಶದ ಅತ್ಯುತ್ತಮ ಆಟಗಾರರನ್ನು ಒಂದೆಡೆ ಸೇರಿ ಆಡುವ ಪ್ರತಿಷ್ಠಿತ ಟೂರ್ನಿಯಾಗಿದೆ. ಪ್ರತಿಭಾನ್ವಿತ ಆಟಗಾರರ ದಂಡನ್ನೇ ಹೊಂದಿರುವ ತಂಡವನ್ನು ಮುನ್ನಡೆಸಲು ನಾನೂ ಕಾತರನಾಗಿದ್ದೇನೆ. ನನ್ನ ಮೇಲೆ ವಿಶ್ವಾಸವಿಟ್ಟು ನಾಯಕ ಸ್ಥಾನ ನೀಡಿದ ಕೆಕೆಆರ್ ಮಾಲೀಕರಿಗೆ, ಆಡಳಿತ ಮಂಡಳಿಗೆ ಹಾಗೂ ಸಹಾಯಕ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ತಂಡವು 2012 ಹಾಗೂ 2014ರಲ್ಲಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದಾದ ಬಳಿಕ ಕೆಕೆಆರ್ ತಂಡವು ಕಪ್‌ ಗೆಲ್ಲಲು ಸಾಧ್ಯವಾಗಿಲ್ಲ.

click me!