IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ರಾಜಸ್ಥಾನ ರಾಯಲ್ಸ್‌ ಪಂದ್ಯ ಗೆಲ್ಲೋರು ಯಾರು..?

By Naveen KodaseFirst Published Apr 5, 2022, 5:21 PM IST
Highlights

* ರಾಜಸ್ಥಾನ ರಾಯಲ್ಸ್‌ಗಿಂದು ಆರ್‌ಸಿಬಿ ಸವಾಲು

* ಹೈವೋಲ್ಟೇಜ್‌ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ

* ರಾಯಲ್ಸ್ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕುತ್ತಾ ಆರ್‌ಸಿಬಿ?

ಬೆಂಗಳೂರು(ಏ.05): ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್‌ (Rajasthan Royals) ಹಾಗೂ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡಗಳಿಂದು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಈ ತಂಡಗಳ ನಡುವಿನ ಈ ಜಿದ್ದಾಜಿದ್ದಿನ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದ್ದು, ತಮ್ಮ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿವೆ. ಸಂಜು ಸ್ಯಾಮ್ಸನ್ (Sanju Samson) ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ತಾನಾಡಿದ ಮೊದಲ ಎರಡು ಪಂದ್ಯಗಳಲ್ಲೂ ಅಮೋಘ ಪ್ರದರ್ಶನ ತೋರುವ ಮೂಲಕ ಎರಡು ಗೆಲುವುಗಳೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು 205 ರನ್ ಬಾರಿಸಿದ್ದರೂ ಸಹಾ ಆಘಾತಕಾರಿ ಸೋಲು ಕಂಡಿತ್ತು. ಇನ್ನು ಕಳೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವಿನ ರುಚಿ ಕಂಡಿತ್ತು.

Latest Videos

ಕಳೆದ ಪಂದ್ಯದಲ್ಲಿ ಜೋಸ್ ಬಟ್ಲರ್ (Jos Buttler) ವಿಸ್ಪೋಟಕ ಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ ಎದುರು ರಾಜಸ್ಥಾನ ರಾಯಲ್ಸ್‌ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬಟ್ಲರ್ ಮೊದಲೆರಡು ಪಂದ್ಯಗಳಿಂದ ಒಟ್ಟು 193 ರನ್ ಬಾರಿಸಿದ್ದು, ಸದ್ಯ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಇದರ ಜತೆಗೆ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಹಾಗೂ ದೇವದತ್ ಪಡಿಕ್ಕಲ್ ಕೂಡಾ ಭರ್ಜರಿ ಫಾರ್ಮ್‌ನಲ್ಲಿರುವುದು ರಾಯಲ್ಸ್ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. 

ಇನ್ನೊಂದೆಡೆ ಈ ಪಂದ್ಯಕ್ಕೂ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅಲಭ್ಯರಾಗಿರುವುದರಿಂದ ಫಾಫ್ ಡು ಪ್ಲೆಸಿಸ್‌ ಹಾಗೂ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ. ಇನ್ನು ದಿನೇಶ್ ಕಾರ್ತಿಕ್ ಮ್ಯಾಚ್‌ ಫಿನಿಶರ್ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದು, ಆರ್‌ಸಿಬಿ ಅಭಿಮಾನಿಗಳು ಡಿಕೆಯಿಂದ ದೊಡ್ಡ ಇನಿಂಗ್ಸ್‌ ನಿರೀಕ್ಷಿಸುತ್ತಿದ್ದಾರೆ.

IPL 2022: ಆರ್‌ಸಿಬಿ ತಂಡಕ್ಕಿಂದು ಬಲಿಷ್ಠ ರಾಜಸ್ಥಾನ ರಾಯಲ್ಸ್‌ ಸವಾಲು..!

ಆರ್‌ಸಿಬಿ ಮಾಜಿ ಆಟಗಾರರ ಭೀತಿಯಲ್ಲಿ ಬೆಂಗಳೂರು: ಈ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಯುಜುವೇಂದ್ರ ಚಹಲ್, ನವದೀಪ್ ಸೈನಿ ಹಾಗೂ ದೇವದತ್ ಪಡಿಕ್ಕಲ್ ಇದೇ ಮೊದಲ ಬಾರಿಗೆ ಆರ್‌ಸಿಬಿ ಎದುರು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಲ್ಲೂ ರಾಯಲ್ಸ್‌ ಸ್ಪಿನ್ ಅಸ್ತ್ರ ಯುಜುವೇಂದ್ರ ಚಹಲ್ 

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು ಒಟ್ಟು 24 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಂಚ ಮೇಲುಗೈ ಸಾಧಿಸಿದೆ. 24 ಪಂದ್ಯಗಳ ಪೈಕಿ ಆರ್‌ಸಿಬಿ ತಂಡವು 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಜಸ್ಥಾನ ರಾಯಲ್ಸ್ ತಂಡವು 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿತ್ತು. ಇನ್ನು 2 ಪಂದ್ಯಗಳಲ್ಲಿ ಫಲಿತಾಂಶ ಹೊರಬಿದ್ದಿರಲಿಲ್ಲ. 

ಇಂದಿನ ಪಂದ್ಯ ಗೆಲ್ಲೋರು ಯಾರು..? ವಾಂಖೆಡೆ ಮೈದಾನದಲ್ಲಿ ಕಳೆದ ಮೂರು ಪಂದ್ಯಗಳಲ್ಲೂ ಚೇಸಿಂಗ್ ಮಾಡಿದ ತಂಡವೇ ಗೆಲುವಿನ ನಗೆ ಬೀರಿದೆ. ಇಂದಿನ ಪಂದ್ಯದಲ್ಲಿ ಒಂದು ವೇಳೆ ಆರ್‌ಸಿಬಿ ಟಾಸ್ ಗೆದ್ದು, ರಾಜಸ್ಥಾನ ರಾಯಲ್ಸ್‌ ತಂಡವನ್ನು 160 ರನ್‌ಗಳೊಳಗಾಗಿ ನಿಯಂತ್ರಿಸಿದರೆ, ಫಾಫ್ ಡು ಪ್ಲೆಸಿಸ್ ಪಡೆ ಗೆಲುವಿನ ನಗೆ ಬೀರಬಹುದಾಗಿದೆ.

ಸಂಭಾವ್ಯ ತಂಡಗಳು ಹೀಗಿವೆ ನೋಡಿ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್‌ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್‌, ಶೆರ್ಫಾನೆ ರುಥರ್‌ಫೋರ್ಡ್‌, ಶಾಬಾಜ್ ಅಹಮ್ಮದ್‌, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್‌, ಆಕಾಶ್‌ ದೀಪ್‌, ಮೊಹಮ್ಮದ್ ಸಿರಾಜ್‌.

ರಾಜಸ್ಥಾನ ರಾಯಲ್ಸ್‌: ಜೋಸ್ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌(ನಾಯಕ), ದೇವದತ್ ಪಡಿಕ್ಕಲ್‌, ಶಿಮ್ರೊನ್ ಹೆಟ್ಮೇಯರ್‌, ರಿಯಾನ್ ಪರಾಗ್‌, ನವದೀಪ್ ಸೈನಿ, ರವಿಚಂದ್ರನ್ ಅಶ್ವಿನ್‌, ಯುಜುವೇಂದ್ರ ಚಹಲ್‌, ಟ್ರೆಂಟ್ ಬೌಲ್ಟ್‌, ಪ್ರಸಿದ್ಧ್ ಕೃಷ್ಣ.

ಸ್ಥಳ: ಮುಂಬೈ, ವಾಂಖೇಡೆ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

click me!