
ಮೊಹಾಲಿ(ಏ.13): ಐಪಿಎಲ್ ಟೂರ್ನಿಯಲ್ಲಿ ಇಂದು ಮಹತ್ವದ ಹೋರಾಟ. ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಹೋರಾಟಕ್ಕೆ ಮೊಹಾಲಿ ಕ್ರೀಡಾಂಗಣ ಸಜ್ಜಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ನಥನ್ ಎಲ್ಲಿಸ್ ಬದಲು, ಕಾಗಿಸೋ ರಬಾಡ ತಂಡ ಸೇರಿಕೊಂಡಿದ್ದಾರೆ. ಇತ್ತ ರಾಜಾ ಬದಲು ಭಾನುಕಾ ತಂಡ ಸೇರಿಕೊಂಡಿದ್ದಾರೆ.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ವೃದ್ಧಿಮಾನ್ ಸಾಹ, ಶುಬಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಮೊಹಿತ್ ಶರ್ಮಾ, ಜೋಶುವಾ ಲಿಟಲ್
ಮೊಣಕಾಲಿನ ನೋವಿನ ಹೊರತಾಗಿಯೂ ಗರ್ಜಿಸಿದ ಎಂ ಎಸ್ ಧೋನಿ..! ಕೋಚ್ ಫ್ಲೆಮಿಂಗ್ ಹೇಳಿದ್ದೇನು?
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಪ್ರಭಾಸಿಮ್ರನ್ ಸಿಂಗ್, ಶಿಖರ್ ಧವನ್(ನಾಯಕ), ಮ್ಯಾಥ್ಯೂ ಶಾರ್ಟ್, ಭಾನುಕಾ ರಾಜಪಕ್ಸ್, ಜಿತೇಶ್ ಶರ್ಮಾ, ಸ್ಯಾಮ್ ಕುರನ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕಾಗಿಸೋ ರಬಾಡಾ, ರಿಶಿ ಧವನ್, ಅರ್ಶದೀಪ್ ಸಿಂಗ್
ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ 4ನೇ ಸ್ಥಾನದಲ್ಲಿದೆ. ಆಡಿದ 3 ಪಂದ್ಯದಲ್ಲಿ 2 ಗೆಲುವು ದಾಖಲಿಸಿದೆ. ಇತ್ತ ಪಂಜಾಬ್ ಕಿಂಗ್ಸ್ 6ನೇ ಸ್ಥಾನದಲ್ಲಿದೆ. ಪಂಜಾಬ್ ಕೂಡ 3 ಪಂದ್ಯದಲ್ಲಿ 2 ಗೆಲುವು ಕಂಡಿದೆ.
ಗುಜರಾತ್ ಟೈಟಾನ್ಸ್ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಿತ್ತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 5 ವಿಕೆಟ್ ಗೆಲುವು ದಾಖಲಿಸಿ ಶುಭಾರಂಭ ಮಾಡಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದಧ 2ನೇ ಪಂದ್ಯದಲ್ಲಿ 6 ವಿಕೆಟ್ ಗೆಲುವು ದಾಖಲಿಸಿ ಸತತ 2ನೇ ಗೆಲುವಿನ ಸಂಭ್ರಮ ಆಚರಿಸಿತ್ತು. ಆದರೆ 3ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈರ್ಸ್ ಬ್ಯಾಟಿಂಗ್‌ಗೆ ಲೆಕ್ಕಾಚಾರ ಉಲ್ಟಾ ಆಗಿತ್ತು. ಅಂತಿಮ 5 ಎಸೆತದಲ್ಲಿ 5 ಸಿಕ್ಸರ್ ಸಿಡಿಸಿದ ರಿಂಕು ಸಿಂಗ್, ಗುಜರಾತ್ ಟೈಟಾನ್ಸ್‌ಗೆ ಸೋಲುಣಿಸಿದ್ದರು.
IPL 2023: ಐತಿಹಾಸಿಕ ದಾಖಲೆ ಬರೆದ ಜಡೇಜಾ, ಕ್ರಿಕೆಟ್ ದಿಗ್ಗಜರ ಸಾಲಿಗೆ ಸಿಎಸ್‌ಕೆ ಸ್ಟಾರ್ ಸೇರ್ಪಡೆ..!
ಪಂಜಾಬ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ದಿಟ್ಟ ಹೋರಾಟ ನೀಡುತ್ತಿದೆ. ನಾಯಕ ಶಿಖರ್ ಧವನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಪಂಜಾಬ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಹೋರಾಟ ಮಾಡಿತ್ತು. ಈ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿತ್ತು. ಆದರೆ ಡಕ್‌ವರ್ತ್ ನಿಯಮದನ್ವಯ 7 ರನ್ ಗೆಲುವು ದಾಖಲಿಸಿತು. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ 5 ರನ್ ಗೆಲುವು ದಾಖಲಿಸಿದ್ದರೆ, 3ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಗ್ಗರಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.