
ಅಹಮ್ಮದಾಬಾದ್(ಏ.16); ಐಪಿಎಲ್ 2023 ಟೂರ್ನಿಯ ಮತ್ತೊಂದು ರೋಚಕ ಪಂದ್ಯಕ್ಕೆ ಅಭಿಮಾನಿಗಳು ಕಾತರರಾಗಿದ್ದಾರೆ. ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೋರಾಟಕ್ಕೆ ಅಹಮ್ಮದಾಬಾದ್ ರೆಡಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಜೇಸನ್ ಹೋಲ್ಡರ್ ಬದಲು ಟ್ರೆಂಟ್ ಬೋಲ್ಟ್ ತಂಡ ಸೇರಿಕೊಂಡಿದ್ದಾರೆ. ಇತ್ತ ಗುಜರಾತ್ ಟೈಟಾನ್ಸ್ ತಂಡದಲ್ಲಿ ವಿಜಯ್ ಶಂಕರ್ ಬದಲು ಅಭಿನವ್ ತಂಡ ಸೇರಿಕೊಂಡಿದ್ದಾರೆ.
ರಾಜಸ್ಥಾನ ರಾಯಲ್ಸ್ ಪ್ಲೇಯಿಂಗ್ 11
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಶಿಮ್ರೊನ್ ಹೆಟ್ಮೆಯರ್, ಧ್ರುವ್ ಜುರೆಲ್, ಆರ್ ಅಶ್ವಿನ್, ಟ್ರೆಂಟ್ ಬೋಲ್ಟ್, ಆ್ಯಡನ್ ಜಂಪಾ, ಸಂದೀಪ್ ಶರ್ಮಾ, ಯುಜುವೇಂದ್ರ ಚಹಾಲ್
IPL 2023 ಇಶಾನ್-ಸೂರ್ಯ ಮಿಂಚಿನ ಬ್ಯಾಟಿಂಗ್; ಕೆಕೆಆರ್ ಎದುರು ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ವೃದ್ಧಿಮಾನ್ ಸಾಹ, ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ
ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಐಪಿಎಲ್ 2023 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 72 ರನ್ ಭರ್ಜರಿ ಗೆಲುವು ದಾಖಲಿಸಿತ್ತು. 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಹೋರಾಡಿದ ರಾಜಸ್ಥಾನ ಸೋಲು ಅನುಭವಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 57 ರನ್ ಗೆಲುವು ದಾಖಲಿಸಿದ ರಾಜಸ್ಥಾನ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 3 ರನ್ ರೋಚಕ ಗೆಲುವು ಕಂಡಿತ್ತು.
ಗುಜರಾತ್ ಟೈಟಾನ್ಸ್ ಆಡಿದ 4 ಪಂದ್ಯದಲ್ಲಿ 3ರಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಲ್ಲಿ ಮೂರನೇ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್,ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗೆಲುವು ದಾಖಲಿಸಿತ್ತು. ಇತ್ತ 2ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧ 6 ವಿಕೆಟ್ ಗೆಲುವು ದಾಖಲಿಸಿತ್ತು. ಆದರೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಟೈಟಾನ್ಸ್ ಸೋಲಿನ ಕಹಿ ಅನುಭವಿಸಿತ್ತು. ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗೆಲುವು ದಾಖಲಿಸಿ ಮತ್ತೆ ಅಬ್ಬರಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.