IPL 2023 ಪ್ಲೇ ಆಫ್ ಕುತೂಹಲ, ಗುಜರಾತ್ ವಿರುದ್ದ ಟಾಸ್ ಗೆದ್ದ ಹೈದರಾಬಾದ್!

By Suvarna NewsFirst Published May 15, 2023, 7:04 PM IST
Highlights

ಪ್ಲೇ ಆಫ್ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಗುಜರಾತ್ ಟೈಟಾನ್ಸ್ ಪ್ಲೇ ಆಫ್ ಖಚಿತಪಡಿಸಿಕೊಳ್ಳಲು ಹೋರಾಟ ಮಾಡಿದರೆ, ಸನ್‌ರೈಸರ್ಸ್ ಪ್ಲೇ ಆಫ್ ರೇಸ್‌ನಲ್ಲಿ ಉಳಿಯಲು ಹೋರಾಟ ಮಾಡಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹಮ್ಮದಾಬಾದ್(ಮೇ.15): ಐಪಿಎಲ್ 2023 ಟೂರ್ನಿಯ ಪ್ಲೇ ಆಫ್ ರೇಸ್ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹಿಂದೆಂದೂ ಕಾಣದ ಪೈಪೋಟಿ ಎರ್ಪಟ್ಟಿದೆ. ಇದರ ನಡುವೆ ಮಹತ್ವದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೈದರಾಬಾದ್ ತಂಡದಲ್ಲಿ ಗ್ಲೆನ್ ಫಿಲಿಪ್ ಬದಲು ಮಾರ್ಕೊ ಜಾನ್ಸೆನ್ ತಂಡ ಸೇರಿಕೊಂಡಿದ್ದಾರೆ. ಗುಜರಾತ್ ತಂಡದಲ್ಲೂ 1 ಬದಲಾವಣೆ ಮಾಡಲಾಗಿದೆ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಆ್ಯಡಿನ್ ಮರ್ಕ್ರಮ್(ನಾಯಕ), ಹೆನ್ರಿಚ್ ಕಾಲ್ಸೀನ್, ಅಬ್ದುಲ್ ಸಮಾದ್, ಸನ್ವೀರ್ ಸಿಂಗ್, ಮಯಾಂಕ್ ಮಾರ್ಕಂಡೆ, ಮಾರ್ಕೋ ಜಾನ್ಸಿನ್, ಭುವನೇಶ್ವರ್ ಕುಮಾರ್, ಫಜಲಾಖ್ ಫಾರೂಖಿ, ಟಿ ನಟರಾಜನ್ 

IPL 2023 ರಾಯಲ್ಸ್ ಎದುರಿನ ಪಂದ್ಯದಲ್ಲಿ ಕೆಟ್ಟ ದಾಖಲೆ ಬರೆದ ದಿನೇಶ್ ಕಾರ್ತಿಕ್‌

ಈ ಬಾರಿಯ ಐಪಿಎಲ್ ಟೂರ್ನಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ಅಧಿಕೃತವಾಗಿ ಹೊರಬಿದ್ದಿದೆ. ಇನ್ನು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಪ್ಲೇ ಆಫ್ ರೇಸ್‌ನಲ್ಲಿ ಜೀವಂತವಾಗಿ ಉಳಿಯಬೇಕಾದರೆ ಇನ್ನುಳಿದ ಎಲ್ಲಾ ಪಂದ್ಯ ಗೆಲ್ಲಲೇಬೇಕು. ಕೇವಲ ಗೆಲುವು ಮಾತ್ರವಲ್ಲ, ಇತರ ತಂಡದ ಫಲಿತಾಂಶವೂ ಪರಿಣಾಮ ಬೀರಲಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ದಿಟ್ಟ ಹೋರಾಟದ ಮೂಲಕ ಪ್ಲೇ ಆಫ್ ರೇಸ್‌ನಲ್ಲಿ ಉಳಿಯುವ ಎಲ್ಲಾ ಪ್ರಯತ್ನ ಮಾಡಲಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡ ಆಡಿದ 11 ಪಂದ್ಯದಲ್ಲಿ 4 ಗೆಲುವು ಹಾಗೂ 7 ಸೋಲು ಕಂಡಿದೆ. 

ಇತ್ತ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 12 ಪಂದ್ಯದಲ್ಲಿ 8 ಗೆಲುವು 4 ಸೋಲಿನ ಮೂಲಕ 16 ಅಂಕ ಸಂಪಾದಿಸಿದೆ. ಇಂದಿನ ಪಂದ್ಯದ ಗೆಲುವು ಗುಜರಾತ್ ಟೈಟಾನ್ಸ್ ಪ್ಲೇ ಆಫ್ ಸ್ಥಾನ ಖಚಿತಪಡಿಸಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಉಳಿಸಿಕೊಳ್ಳು ಪ್ರಯತ್ನದಲ್ಲಿದೆ.

ಈ ಬಾರಿಯ ವಿಶೇಷ ಅಂದರೆ ಐಪಿಎಲ್ 2023 ಲೀಗ್ ಹಂತದ ಪಂದ್ಯ ಅಂತಿಮ ಘಟ್ಟ ತಲುಪಿದೆ. ಆದರೆ ಪ್ಲೇ ಆಫ್ ರೇಸ್‌ನಿಂದ ಡೆಲ್ಲಿ ಕ್ಯಾಪಿಟಲ್ಸ್ ಮಾತ್ರ ಟೂರ್ನಿಯಿಂದ ಹೊರಬಿದ್ದಿದೆ. ಇನ್ನುಳಿದ 9 ತಂಡಗಳು ಪ್ಲೇ ಆಫ್ ರೇಸ್‌ನಲ್ಲಿದೆ. ಹೀಗಾಗಿ ಅಂತಿಮ ನಾಲ್ಕರ ಘಟ್ಟದಲ್ಲಿ ಉಳಿಯುವ ತಂಡ ಯಾವುದು ಅನ್ನೋ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತ ರಾಜಸ್ಥಾನ ರಾಯಲ್ಸ್ ವಿರುದ್ದದ ಭರ್ಜರಿ ಗೆಲುವಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ರೇಸ್‌ನಲ್ಲಿ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದೆ. 

RCB ಗೆಲುವಿನ ಬಗ್ಗೆ ಲಖನೌ ಟ್ವೀಟ್‌..! ಉರಿತಾ ಇದೆಯೇ ಎಂದ ಫ್ಯಾನ್ಸ್

ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 13 ಪಂದ್ಯದಲ್ಲಿ 7 ಗೆಲುವು ದಾಖಿಲಿಸಿ 2ನೇ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ 12ರಲ್ಲಿ 7 ಪಂದ್ಯ ಗೆದ್ದು 3ನೇ ಸ್ಥಾನದಲ್ಲಿದೆ. ಇನ್ನು ಲಖನೌ ಸೂಪರ್ ಜೈಂಟ್ಸ್ 12ರಲ್ಲಿ 6 ಪಂದ್ಯ ಗೆದ್ದುಕೊಂಡು 4ನೇ ಸ್ಥಾನದಲ್ಲಿದೆ. ಆರ್‌ಸಿಬಿ 12ರಲ್ಲಿ 6 ಪಂದ್ಯ ಗೆದ್ದು 5ನೇ ಸ್ಥಾನದಲ್ಲಿದೆ. ರಾಜಸ್ಥಾನ ರಾಯಲ್ಸ್ 6, ಕೋಲ್ಕತಾ ನೈಟ್ ರೈಡರ್ಸ್ 7, ಪಂಜಾಬ್ ಕಿಂಗ್ಸ್ 8, ಹೈದರಾಬಾದ್ 9 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 10ನೇ ಸ್ಥಾನದಲ್ಲಿದೆ.

click me!