IPL 2023 ರಾಜಸ್ಥಾನ ರಾಯಲ್ಸ್ ವಿರುದ್ದ ಟಾಸ್ ಗೆದ್ದ ಸಿಎಸ್‌ಕೆ, ಧೋನಿ ಹೊಸ ಮೈಲಿಗಲ್ಲು!

By Suvarna NewsFirst Published Apr 12, 2023, 7:03 PM IST
Highlights

ಚೆನ್ನೈನ ಚಿಪಾಕ್ ಕ್ರೀಡಾಂಗಣ ಅಭಿಮಾನಿಗಳಿಂದ ತುಂಬಿದೆ. ಇದು ನಾಯಕ ಧೋನಿಗೆ ವಿಶೇಷ ಪಂದ್ಯ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಮಾಹಿತಿ ಇಲ್ಲಿದೆ.

ಚೆನ್ನೈ(ಏ.12); ಎಂ.ಎಸ್.ಧೋನಿಗೆ ಸಿಎಸ್‌ಕೆ ನಾಯಕನಾಗಿ ಇದು 200ನೇ ಐಪಿಎಲ್ ಪಂದ್ಯ. ಈ ವಿಶೇಷ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ದ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸಿಎಸ್‌ಕೆ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಮಿಚೆಲ್ ಸ್ಯಾಂಟ್ನರ್ ಹಾಗೂ ಪ್ರೆಟ್ರೋರಿಯಸ್ ಬದಲು ತೀಕ್ಷನಾ ಹಾಗೂ ಮೋಯಿನ್ ಆಲಿ ತಂಡ ಸೇರಿಕೊಂಡಿದ್ದಾರೆ. ಇತ್ತ ರಾಜಸ್ಥಾನ ರಾಯಲ್ಸ್ ತಂಡದಲ್ಲೂ ಬದಲಾವಣೆ ಮಾಡಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11
ಡೇವೋನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಆಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂ.ಎಸ್.ಧೋನಿ(ನಾಯಕ), ಸಿಸಾಂಡ ಮಗಲಾ, ಮಹೇಶ್ ತೀಕ್ಷನಾ, ತುಷಾರ್ ದೇಶಪಾಂಡೆ, ಅಕಾಶ್ ಸಿಂಗ್ 

Latest Videos

IPL 2023 ಕೊನೆಗೂ ಗೆಲುವಿನ ದಡ ಸೇರಿದ ಮುಂಬೈ, ಸೋಲಿನ ಸುಳಿಯಲ್ಲಿ ಡೆಲ್ಲಿ ವಿಲವಿಲ!

ರಾಜಸ್ಥಾನ ರಾಯಲ್ಸ್ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮನ್(ನಾಯಕ), ದೇವದತ್ ಪಡಿಕ್ಕಲ್, ಶಿವ್ರೊನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಕುಲ್ದೀಪ್ ಸೆನ್, ಸಂದೀಪ್ ಶರ್ಮಾ, ಯಜುವೇಂದ್ರ ಚಹಾಲ್ 

ಪಂದ್ಯಕ್ಕೂ ಮೊದಲು ಎಂಎಸ್ ಧೋನಿಗೆ ಗೌರವ ಸಲ್ಲಿಸಲಾಯಿತು. ಸಿಎಸ್‌ಕೆ ಮಾಲೀಕ ಎನ್ ಶ್ರೀನಿವಾಸನ್  ವಿಶೇಷ ಮೈಲಿಗಲ್ಲು ನಿರ್ಮಿಸಿದ ಧೋನಿಯನ್ನು ಸನ್ಮಾನಿಸಿದರು. ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಲಾ ಎರಡೆರಡು ಪಂದ್ಯ ಗೆದ್ದಿದೆ. ಆದರೆ ನೆಟ್ ರನ್‌ರೇಟ್ ಆಧಾರದಲ್ಲಿ ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 5ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಅಂಕಪಟ್ಟಿಯ ದೃಷ್ಟಿಯಿಂದ ಮಾತ್ರವಲ್ಲ, ಕೊನೆಯ ಕ್ಷಣದಲ್ಲಿ ಇಕ್ಕಟಿಗೆ ಸಿಲುಕುವ ಅಪಾಯದಿಂದ ಪಾರಾಗಲು ಉಭಯ ತಂಡಗಳಿಗೆ ಮುಖ್ಯವಾಗಿದೆ. ರಾಜಸ್ಥಾನ ರಾಯಲ್ಸ್ ಹಾಗೂ ಸಿಎಸ್‌ಕೆ ಉತ್ತಮ ಫಾರ್ಮ್‌ನಲ್ಲಿದೆ. 

ಗೆಲುವಿನ ಬಳಿಕ ಆರ್‌ಸಿಬಿ ಫ್ಯಾನ್ಸ್‌ಗೆ ಬಾಯಿ ಮುಚ್ಚಲು ಸೂಚಿಸಿದ ಗಂಭೀರ್, ಶುರುವಾಯ್ತು ಜಟಾಪಟಿ!

ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಪಂದ್ಯವನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿತ್ತು. ಈ ಪಂದ್ಯದಲ್ಲಿ ಗುಜರಾತ್ 5 ವಿಕೆಟ್ ಗೆಲುವು ಸಾಧಿಸಿತ್ತು. ಸೋಲಿನಿಂದ ಐಪಿಎಲ್ ಟೂರ್ನಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಎದುರಿಸಿತು. ಈ ಪಂದ್ಯದಲ್ಲಿ ಸಿಎಸ್‌ಕೆ 12 ರನ್ ಗೆಲುವು ದಾಖಲಿಸಿತು. ಇಷ್ಟೇ ಅಲ್ಲ ಗೆಲುವಿನ ಹಳಿಗೆ ಮರಳಿತು. ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೋರಾಟ ನಡೆಸಿ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿತ್ತು. ಆಡಿದ 3 ಪಂದ್ಯದಲ್ಲಿ 2 ಗೆಲುವು ಕಂಡಿದೆ.

ಇತ್ತ ರಾಜಸ್ಥಾನ ರಾಯಲ್ಸ್ ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೋರಾಟ ನಡೆಸಿ ಗೆಲುವಿನ ನಗೆ ಬೀರಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 72 ರನ್ ಗೆಲುವು ದಾಖಲಿಸಿತ್ತು. 

click me!