
ಅಹಮದಾಬಾದ್(ಏ.25): ಹ್ಯಾಟ್ರಿಕ್ ಗೆಲುವಿನ ಹುಮ್ಮಸ್ಸಿನಲ್ಲಿದ್ದರೂ ಪಂಜಾಬ್ ವಿರುದ್ಧ ಆಘಾತಕಾರಿ ಸೋಲುಂಡಿರುವ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಗೆಲುವಿನ ಹಳಿಗೆ ಮರಳಲು ಕಾಯುತ್ತಿದ್ದು, ಮಂಗಳವಾರ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸಾಡಲಿದೆ. ಈಗಾಗಲೇ ತವರಿನ ಕ್ರೀಡಾಂಗಣದಲ್ಲೇ ಸತತ 2 ಪಂದ್ಯ ಸೋತಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್, ಗೆಲುವಿನೊಂದಿಗೆ ಅಹಮದಾಬಾದ್ನ ಅಭಿಮಾನಿಗಳಿಗೆ ಉಡುಗೊರೆ ನೀಡಲು ಕಾಯುತ್ತಿದೆ.
ಮೊದಲೆರಡು ಪಂದ್ಯದ ಬಳಿಕ ತನ್ನ ಎಂದಿನ ಚಾಂಪಿಯನ್ ಆಟ ಪ್ರದರ್ಶಿಸಿದ್ದ ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ಮುಗ್ಗರಿಸಿತ್ತು. ಡೆತ್ ಬೌಲಿಂಗ್ನಲ್ಲಿ ಹೀನಾಯ ಪ್ರದರ್ಶನ ತಂಡಕ್ಕೆ ಮುಳುವಾಗಿತ್ತು. ಜೋಫ್ರಾ ಆರ್ಚರ್, ಜೇಸನ್ ಬೆಹ್ರನ್ಡ್ರಾಫ್, ಕ್ಯಾಮರೋನ್ ಗ್ರೀನ್ ಹಾಗೂ ಅರ್ಜುನ್ ತೆಂಡುಲ್ಕರ್ ಎಲ್ಲರೂ 40+ ರನ್ ನೀಡಿ ದುಬಾರಿಯಾಗಿದ್ದರು. ಬೌಲಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ತಂಡಕ್ಕೆ ಅಪಾಯ ತಪ್ಪಿದ್ದಲ್ಲ. ಆದರೆ ಬ್ಯಾಟಿಂಗ್ ವಿಭಾಗ ಲಯಕ್ಕೆ ಮರಳಿದ್ದು, ನಾಯಕ ರೋಹಿತ್ ಶರ್ಮಾ, ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್ ಮತ್ತೊಮ್ಮೆ ಅಬ್ಬರಿಸಲು ಕಾಯುತ್ತಿದ್ದಾರೆ.
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಉತ್ತಮ ಸಂಯೋಜನೆ ಹೊಂದಿದ್ದರೂ ನಿರ್ಣಾಯಕ ಘಟ್ಟದಲ್ಲಿ ಕೆಲ ಆಟಗಾರು ಕೈ ಕೊಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸಂಘಟಿತ ಪ್ರದರ್ಶನ ತೋರಿ ಕೊನೆ ಕ್ಷಣದಲ್ಲಿ ಗೆದ್ದಿದ್ದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ವೇಗಿಗಳಾದ ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ ಬೌಲಿಂಗ್ ವಿಭಾಗದಲ್ಲಿ ಮೊನಚು ದಾಳಿ ಸಂಘಟಿಸುತ್ತಿದ್ದು, ರಶೀದ್ ಖಾನ್ ಪ್ರದರ್ಶನ ತಂಡಕ್ಕೆ ಪ್ಲಸ್ ಪಾಯಿಂಟ್. ಬ್ಯಾಟಿಂಗ್ನಲ್ಲಿ ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್ ಅಬ್ಬರಿಸಿದರೆ ರನ್ ನಿಯಂತ್ರಿಸುವುದು ಮುಂಬೈ ಇಂಡಿಯನ್ಸ್ ಬೌಲರ್ಗಳಿಗೆ ಕಷ್ಟವಾಗಬಹುದು.
WTC Final: ಬಲಿಷ್ಠ ಟೀಂ ಇಂಡಿಯಾ ಪ್ರಕಟ; ಸೂರ್ಯ, ಶ್ರೇಯಸ್‌ಗಿಲ್ಲ ಸ್ಥಾನ..! CSK ಆಟಗಾರನಿಗೆ ಜಾಕ್‌ಪಾಟ್
ಮುಖಾಮುಖಿ: 01
ಮುಂಬೈ: 01
ಗುಜರಾತ್: 00
ಸಂಭವನೀಯ ಆಟಗಾರರ ಪಟ್ಟಿ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡುಲ್ಕರ್, ಹೃತ್ತಿಕ್ ಶೊಕೀನ್, ಜೋಫ್ರಾ ಆರ್ಚರ್, ಜೇಸನ್ ಬೆಹ್ರನ್ಡ್ರಾಫ್, ಪೀಯೂಸ್ ಚಾವ್ಲಾ.
ಗುಜರಾತ್ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಮೊಹಮ್ಮದ್ ಶಮಿ.
ಪಿಚ್ ರಿಪೋರ್ಟ್
ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಇಲ್ಲಿ ಈ ವರ್ಷ ನಡೆದ 3 ಪಂದ್ಯಗಳ 6 ಇನ್ನಿಂಗ್್ಸಗಳಲ್ಲೂ 175+ ರನ್ ದಾಖಲಾಗಿವೆ. 3 ಪಂದ್ಯಗಳಲ್ಲೂ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಹೀಗಾಗಿ ಟಾಸ್ ಗೆಲ್ಲುವ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳಬಹುದು.
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.