
ಚೆನ್ನೈ(ಮೇ.24): ಐಪಿಎಲ್ ಟೂರ್ನಿಯ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ರೋಚಕತೆ ಹೆಚ್ಚಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ರೀತಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್8 ವಿಕೆಟ್ ನಷ್ಟಕ್ಕೆ 182 ರನ್ ಸಿಡಿಸಿದೆ. ಇದೀಗ ಲಖನೌ ಸೂಪರ್ ಜೈಂಟ್ಸ್ ಚೇಸಿಂಗ್ ಸವಾಲಾಗಿ ಪರಿಣಮಿಸಿದೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿತ್ತು. ಆದರೆ ಈ ಮೊತ್ತ ಚೇಸ್ ಮಾಡಲು ಗುಜರಾತ್ ಟೈಟಾನ್ಸ್ ವಿಫಲವಾಗಿತ್ತು. ಇದೀಗ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಬೃಹತ್ ಮೊತ್ತ ಸಿಡಿಸಿವು ವಿಶ್ವಾಸದಲ್ಲಿತ್ತು. ಆದರೆ ಲಖನೌ ಸೂಪರ್ ಜೈಂಟ್ಸ್ ದಿಟ್ಟ ಬೌಲಿಂಗ್ ಪ್ರದರ್ಶನ ನೀಡಿತು. ಮುಂಬೈ ಇಂಡಿಯನ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ..
ನಾಯಕ ರೋಹಿತ್ ಶರ್ಮಾ ಮತ್ತೆ ನಿರಾಸೆ ಅನುಭವಿಸಿದರು. 10 ಎಸೆತದಲ್ಲಿ 11 ರನ್ ಸಿಡಿಸಿ ಔಟಾದರು. ಇತ್ತ ಇಶಾನ್ ಕಿಶನ್ 15 ರನ್ ಸಿಡಿಸಿ ನಿರ್ಗಮಿಸಿದರು. ಆರಂಭಿಕರ ವಿಕೆಟ್ ಪತನ ಮುಂಬೈ ತಂಡದ ಆತಂಕ ಹೆಚ್ಚಿಸಿತು. 38 ರನ್‌ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಕ್ಯಾಮರೂನ್ ಗ್ರೀನ್ ಹಾಗೂ ಸೂರ್ಯಕುಮಾರ್ ಯಾದವ್ ಜೊತೆಯಾಟದಿಂದ ಮುಂಬೈ ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸಿತು.
ಸೂರ್ಯಕುಮಾರ್ ಯಾದವ್ ಹಾಗೂ ಗ್ರೀನ್ ಹೋರಾಟ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ಆತಂಕ ಕಡಿಮೆ ಮಾಡಿತು. ಆದರೆ ಯಾದವ್ 20 ಎಸೆತದಲ್ಲಿ 33 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ 23 ಎಸೆತದಲ್ಲಿ 44 ರನ್ ಸಿಡಿಸಿದ ಕ್ಯಾಮರೂನ್ ಗ್ರೀನ್ ವಿಕೆಟ್ ಪತನಗೊಂಡಿತು. ಇವರಿಬ್ಬರ ವಿಕೆಟ್ ಪತನದಿಂದ ಮುಂಬೈ ಇಂಡಿಯನ್ಸ್ ಮತ್ತೆ ಕುಸಿತ ಕಂಡಿತು.
ತಿಲಕ್ ವರ್ಮಾ ಹಾಗೂ ಟಿಮ್ ಡೇವಿಡ್ ಹೋರಾಟ ನೀಡಿದರು. ಆದರೆ ಟಿಮ್ ಡೇವಿಡ್ 13 ರನ್ ಸಿಡಿಸಿ ಔಟಾದರು. ತಿಲಕ್ ವರ್ಮಾ 26 ರನ್ ಕಾಣಿಕೆ ನೀಡಿದರು. ಇತ್ತ ನೆಹಾಲ್ ವಧೇರಾ 23 ರನ್ ಸಿಡಿಸಿದರು. ಕ್ರಿಸ್ ಜೋರ್ಡಾನ್ 4 ರನ್ ಸಿಡಿಸಿದರು. ಮುಂಬೈ ಇಂಡಿಯನ್ಸ್ 8 ವಿಕೆಟ್ ನಷ್ಟಕ್ಕೆ 182 ರನ್ ಸಿಡಿಸಿತು.
ಇಂದಿನ ಪಂದ್ಯ ಪ್ಲೇಯಿಂಗ್ 11 :
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಕ್ರಿಸ್ ಜೋರ್ಡನ್, ಹೃತಿಕ್ ಶೊಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹೆನ್‌ಡ್ರಾಫ್, ಅಕಾಶ್ ಮಧ್ವಾಲ್
ಲಖನೌ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11
ಆಯುಷ್ ಬದೋನಿ, ದೀಪಕ್ ಹೂಡ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೊಯ್ನಿಸ್, ನಿಕೋಸಲ್ ಪೂರನ್, ಕ್ರುನಾಲ್ ಪಾಂಡ್ಯ(ನಾಯಕ), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್, ಮೊಹ್ಸಿನ್ ಖಾನ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.