IPL 2023 ಮುಂಬೈ ಅದೃಷ್ಠದ ಬಾಗಿಲು ಒಪನ್, ಲಖನೌ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ!

Published : May 24, 2023, 07:18 PM ISTUpdated : May 24, 2023, 07:40 PM IST
IPL 2023 ಮುಂಬೈ ಅದೃಷ್ಠದ ಬಾಗಿಲು ಒಪನ್, ಲಖನೌ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ!

ಸಾರಾಂಶ

ಅದೃಷ್ಠದ ಮೂಲದ ಪ್ಲೇ ಆಫ್ ಪ್ರವೇಶಿಸಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಲಿಮಿನೇಟರ್ ಪಂದ್ಯದಲ್ಲೂ ಲಕ್ ಖುಲಾಯಿಸಿದೆ. ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈ(ಮೇ.24): ಐಪಿಎಲ್ ಟೂರ್ನಿಯ ಪ್ಲೇ ಆಫ್ ಹೋರಾಟ ಕುತೂಹಲ ಹೆಚ್ಚಾಗಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದೆ. ಇದೀಗ ಎಲಿಮಿನೇಟರ್ ಹೋರಾಟ. ಈ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಆರ್‌ಸಿಬಿ ಮುಗ್ಗರಿಸಿದ ಕಾರಣ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶಿಸಿತ್ತು. ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆಲ್ಲುವ ಮೂಲಕ ಆರಂಭಿಕ ಮೇಲುಗೈ ಸಾಧಿಸಿದೆ. ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿತ್ತು. ಇದೀಗ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಕ್ರಿಸ್ ಜೋರ್ಡನ್, ಹೃತಿಕ್ ಶೊಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹೆನ್‌ಡ್ರಾಫ್, ಅಕಾಶ್ ಮಧ್ವಾಲ್

IPL ಫೈನಲ್‌ಗೆ ಲಗ್ಗೆಯಿಟ್ಟ CSK, ಧೋನಿ ಮುಟ್ಟಿದ್ದೆಲ್ಲ ಚಿನ್ನ: ಸುರೇಶ್ ರೈನಾ

ಲಖನೌ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11
ಆಯುಷ್ ಬದೋನಿ, ದೀಪಕ್ ಹೂಡ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೊಯ್ನಿಸ್, ನಿಕೋಸಲ್ ಪೂರನ್, ಕ್ರುನಾಲ್ ಪಾಂಡ್ಯ(ನಾಯಕ), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್, ಮೊಹ್ಸಿನ್ ಖಾನ್

ಇಂದಿನಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ, ಎರಡನೇ ಕ್ವಾಲಿಫೈಯರ್ ಪಂದ್ಯ ಆಡಬೇಕು. ಆದರೆ ಇಂದು ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಮೇ.26 ರಂದು ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಗ್ಗರಿಸಿ ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ಸೋತ ತಂಡ ಹೋರಾಟ ನಡೆಸಲಿದೆ.

ಮೇ.28 ರಂದು ಅಹಮ್ಮಾದಾಬಾದ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ನೇರವಾಗಿ ಫೈನಲ್ ಪ್ರವೇಶಿಸಿದೆ. ಈ ಮೂಲಕ 10ನೇ ಬಾರಿಗೆ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. 

ಧೋನಿಯಿಂದ ಮಾತ್ರ ಚೆನ್ನೈಯನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯ: ಸೆಹ್ವಾಗ್

ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ವಿರುದ್ಧ ಪ್ಲೇ-ಅಫ್‌ನ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ 15 ರನ್‌ ಗೆಲುವು ಸಾಧಿಸಿದ ಚೆನ್ನೈ 14 ಆವೃತ್ತಿಗಳಲ್ಲಿ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿ ಈ ಮೈಲಿಗಲ್ಲು ತಲುಪಿದ ಮೊದಲ ತಂಡ ಎನ್ನುವ ದಾಖಲೆ ಬರೆಯಿತು.ಮೊದಲು ಬ್ಯಾಟ್‌ ಮಾಡಿದ ಚೆನ್ನೈ 20 ಓವರಲ್ಲಿ 7 ವಿಕೆಟ್‌ ನಷ್ಟಕ್ಕೆ 172 ರನ್‌ ಕಲೆಹಾಕಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಗುಜರಾತ್‌ 20 ಓವರಲ್ಲಿ 157 ರನ್‌ ಗಳಿಸಿ ಆಲೌಟ್‌ ಆಯಿತು. ಗುಜರಾತ್‌ಗೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ಚೆನ್ನೈನ ಬೌಲಿಂಗ್‌ ದಾಳಿಯ ಎದುರು ಶುಭ್‌ಮನ್‌ ಗಿಲ್‌(38 ಎಸೆತದಲ್ಲಿ 42 ರನ್‌) ಸಹ ರನ್‌ ಕಲೆಹಾಕಲು ಕಷ್ಟಪಟ್ಟರು. 15ನೇ ಓವರಲ್ಲಿ 98 ರನ್‌ಗೆ 6 ವಿಕೆಟ್‌ ಕಳೆದುಕೊಂಡ ತಂಡ ಸೋಲಿನತ್ತ ಮುಖ ಮಾಡಿತು. ವಿಜಯ್‌ ಶಂಕರ್‌ ಹಾಗೂ ರಶೀದ್‌ ಖಾನ್‌ ಹೆಚ್ಚು ಅಪಾಯ ತಂದೊಡ್ಡದಂತೆ ಚೆನ್ನೈ ಬೌಲರ್‌ಗಳು ಎಚ್ಚರಿಕೆ ವಹಿಸಿದರು. ಕ್ಷೇತ್ರರಕ್ಷಕರ ಬದಲಾವಣೆ, ಬೌಲರ್‌ಗಳ ನಿರ್ವಹಣೆಯಲ್ಲಿ ಧೋನಿ ತೋರಿದ ಚಾಣಾಕ್ಷತನ, ಗುಜರಾತ್‌ಗೆ ಗುರಿ ಇನ್ನಷ್ಟುದೊಡ್ಡದಾಗಿ ಕಾಣುವಂತೆ ಮಾಡಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?