
ಮುಂಬೈ(ಮೇ.09): ಆರಂಭದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಪತನ, ಬಳಿಕ ಅನೂಜ್ ರಾವತ್ ನಿರ್ಗಮನ ಆರ್‌ಸಿಬಿ ತಂಡದ ಆತ್ಮವಿಶ್ವಾಸವನ್ನೇ ಕಸಿದುಕೊಂಡಿತು. ಆದರೆ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಆತ್ಮವಿಶ್ವಾಸ ಕುಗ್ಗಿರಲಿಲ್ಲ. ಪ್ರತಿ ಎಸೆತಕ್ಕೂ ಆರ್‌ಸಿಬಿ, ಆರ್‌ಸಿಬಿ ಕೂಗು ಜೋರಾಗಿತ್ತು. ಇತ್ತ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಹೋರಾಟದಿಂದ ಆರ್‌ಸಿಬಿ ಮತ್ತೆ ಅಬ್ಬರಿಸಿತು. ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್‌ನಿಂದ ಆರ್‌ಸಿಬಿ 6 ವಿಕೆಟ್ ನಷ್ಟಕ್ಕೆ 199 ರನ್ ಸಿಡಿಸಿತು.
ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ ನಿರೀಕ್ಷಿತ ಆರಂಭ ಪಡೆಯಲಿಲ್ಲ. ವಿರಾಟ್ ಕೊಹ್ಲಿ ಕೇವಲ 1 ರನ್ ಸಿಡಿಸಿ ಔಟಾದರು. ಇತ್ತ ಅನೂಜ್ ರಾವತ್ 6 ರನ್ ಸಿಡಿಸಿ ಔಟಾದರು. 16 ರನ್‌ಗೆ ಪ್ರಮುಖ 2 ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ಆದರೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಹೋರಾಟದಿಂದ ಆರ್‌ಸಿಬಿ ಚೇತರಿಸಿಕೊಂಡಿತು. ಇವರಿಬ್ಬರ ಜೊತೆಯಾಟ ಮುಂಬೈ ತಂಡದ ಲೆಕ್ಕಾಚಾರ ಉಲ್ಟಾ ಮಾಡಿತು.
ಮತ್ತೆ KKR ಗೆಲ್ಲಿಸಿದ ರಿಂಕು; ಕೊನೆಯ 2 ಎಸೆತದ ಇಂಟ್ರೆಸ್ಟಿಂಗ್ ಸಂಭಾಷಣೆ ಹಂಚಿಕೊಂಡ ಆ್ಯಂಡ್ರೆ ರಸೆಲ್..!
ಫಾಫ್ ಹಾಗೂ ಮ್ಯಾಕ್ಸ್‌ವೆಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. 200ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಮ್ಯಾಕ್ಸ್‌ವೆಲ್ 8 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿ ಅಬ್ಬರಿಸಿದರು. ಮ್ಯಾಕ್ಸ್‌ವೆಲ್ 33 ಎಸೆತದಲ್ಲಿ 68 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಮಹಿಪಾಲ್ ಲೊಮ್ರೊರ್ ವಿಕೆಟ್ ಪತನಗೊಂಡಿತು. ಇತ್ತ ಫಾಫ್ ಡುಪ್ಲೆಸಿಸ್ 41 ಎಸೆತದಲ್ಲಿ5 ಬೌಂಡರಿ ಹಾಗೂ 3 ಸಿಕ್ಸರ್ ಮೂಲಕ 65 ರನ್ ಸಿಡಿಸಿ ಔಟಾದರು.
ಅಂತಿಮ ಹಂತದಲ್ಲಿ ಕೇದಾರ್ ಜಾಧವ್ ಹಾಗೂ ದಿನೇಶ್ ಕಾರ್ತಿಕ್ ಹೋರಾಟದ ಸೂಚನ ನೀಡಿದರು. ದಿನೇಶ್ ಕಾರ್ತಿಕ್ 17 ಎಸೆತದಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 30 ರನ್ ಸಿಡಿಸಿದರು. ವಾನಿಂಡು ಹಸರಂಗ 8 ಎಸೆತದಲ್ಲಿ ಅಜೇಯ 12 ರನ್ ಸಿಡಿಸಿದರು. ಕೇದಾರ್ ಜಾದವ್ ಅಜೇಯ 10 ಎಸೆತದಲ್ಲಿ ಅಜೇಯ 12 ರನ್ ಸಿಡಿಸಿದರು. ಈ ಮೂಲಕ ಆರ್‌ಸಿಬಿ 6 ವಿಕೆಟ್ ನಷ್ಟಕ್ಕೆ 199 ರನ್ ಸಿಡಿಸಿತು.
'ಹೆಂಡತಿ ಜತೆಗಿದ್ದರೇ..': ಆ್ಯಂಡ್ರೆ ರಸೆಲ್ ಪತ್ನಿಯ ಬಗ್ಗೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ಸಂಗತಿಗಳಿವು..!
ಕಳೆದ ಹಲವು ಪಂದ್ಯಗಳಲ್ಲಿ ನಿರಾಸೆ ಅನುಭವಿಸಿದ್ದ ದಿನೇಶ್ ಕಾರ್ತಿಕ್ ಇಂದು ಅಬ್ಬರಿಸಿದರು. 30 ರನ್ ಸಿಡಿಸಿ ಮಿಂಚಿದರು. ಆರಂಭಿಕ ಕುಸಿತ ಕಂಡರೂ ಆರ್‌ಸಿಬಿ ವಾಂಖೆಡೆ ಕ್ರೀಡಾಂಗಣದಲ್ಲಿ 199 ರನ್ ಸಿಡಿಸುವಲ್ಲಿ ಯಶಸ್ವಿಯಾಗಿದೆ. 200 ರನ್ ಟಾರ್ಗೆಟ್ ಚೇಸ್ ಮುಂಬೈಗೆ ಸವಾಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.