IPL 2023: ತಮ್ಮ ಸಕ್ಸಸ್ ಸೀಕ್ರೇಟ್‌ ಬಿಚ್ಚಿಟ್ಟ ರಿಂಕು ಸಿಂಗ್..!

By Naveen KodaseFirst Published May 15, 2023, 1:19 PM IST
Highlights

ಚೆನ್ನೈ ಸೂಪರ್ ಕಿಂಗ್ಸ್ ಎದುರು ಗೆದ್ದು ಬೀಗಿದ ಕೆಕೆಆರ್
ಕೆಕೆಆರ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರಿಂಕು ಸಿಂಗ್
ತಮ್ಮ ಯಶಸ್ಸಿನ ಸೀಕ್ರೇಟ್ ಬಿಚ್ಚಿಟ್ಟ ರಿಂಕು

ಚೆನ್ನೈ(ಮೇ.15): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಎದುರು ಕೋಲ್ಕತಾ ನೈಟ್ ರೈಡರ್ಸ್ 6 ವಿಕೆಟ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ನಿತೀಶ್ ರಾಣಾ ನೇತೃತ್ವದ ಕೆಕೆಆರ್ ತಂಡವು ತನ್ನ ಪ್ಲೇ ಆಫ್‌ ಪ್ರವೇಶದ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇನ್ನು ಚೇಸಿಂಗ್‌ ವೇಳೆ ಸ್ಥಿರ ಪ್ರದರ್ಶನ ತೋರುತ್ತಾ ಬಂದಿರುವ ರಿಂಕು ಸಿಂಗ್, ತಮ್ಮ ಯಶಸ್ಸಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

ದೇಶಿ ಕ್ರಿಕೆಟ್‌ನಲ್ಲಿ ಉತ್ತರ ಪ್ರದೇಶ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾ ಬಂದಿದ್ದು ತುಂಬಾ ಅನುಕೂಲವಾಯಿತು. ನಾನು ಹಾಗೂ ನಿತೀಶ್ ರಾಣಾ ಪಂದ್ಯವನ್ನು ಕೊನೆಯವರೆಗೂ ತೆಗೆದುಕೊಂಡು ಹೋಗಬೇಕು ಎಂದು ತೀರ್ಮಾನಿಸಿದೆವು ಎಂದು ಹೇಳಿದೆವು. ಮಹತ್ವದ ಘಟ್ಟದಲ್ಲಿ ಜತೆಯಾದ ನಿತೀಶ್ ರಾಣಾ ಹಾಗೂ ರಿಂಕು ಸಿಂಗ್ ಸಮಯೋಚಿತ ಅರ್ಧಶತಕ ಸಿಡಿಸುವ ಮೂಲಕ ಚೆನ್ನೈ ಎದುರು ಕೆಕೆಆರ್ ತಂಡವು ವಿಕೆಟ್ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ತಂಡದ ಪ್ಲೇ ಆಫ್‌ ಕನಸು ಜೀವಂತವಾಗಿರಿಸಿಕೊಂಡಿದೆ.

ನಾವು ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡೆವು, ಹೀಗಾಗಿ ನಾವು ಪಂದ್ಯವನ್ನು ಕೊನಯೆವರೆಗೂ ಕೊಂಡ್ಯೊಯ್ಯಬೇಕು ಎಂದು ತೀರ್ಮಾನಿಸಿದೆವು. ದೇಶಿ ಕ್ರಿಕೆಟ್‌ನಲ್ಲಿ ನಾನು 5,6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅನುಭವವಿರುವುದು ನನಗೆ ತುಂಬಾ ಅನುಕೂಲವಾಯಿತು. ನಾನು ಚೆನ್ನಾಗಿ ಬ್ಯಾಟಿಂಗ್ ಮಾಡಬೇಕು ಎಂದು ಸಾಕಷ್ಟು ಕಷ್ಟಪಟ್ಟು ಅಭ್ಯಾಸ ನಡೆಸಿದ್ದೇನೆ. ಇದರಿಂದ ನನಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ" ಎಂದು ರಿಂಕು ಸಿಂಗ್ ಹೇಳಿದ್ದಾರೆ.

'IPL 2023 ಧೋನಿಯಂತಹ ಆಟಗಾರರು ತಲೆಮಾರಿಗಲ್ಲ, ಶತಮಾನಕ್ಕೊಬ್ಬರು ಸಿಗುತ್ತಾರೆ'

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಿಂಕು ಸಿಂಗ್ ಸದ್ಯ 8ನೇ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ರಿಂಕು ಸಿಂಗ್ ಇದುವರೆಗೂ 13 ಐಪಿಎಲ್ ಪಂದ್ಯಗಳನ್ನಾಡಿ 50.87ರ ಬ್ಯಾಟಿಂಗ್ ಸರಾಸರಿಯಲ್ಲಿ 143.30 ಸ್ಟ್ರೈಕ್‌ರೇಟ್‌ನಲ್ಲಿ 407 ರನ್ ಬಾರಿಸಿದ್ದಾರೆ. ರಿಂಕು ಸಿಂಗ್ ಈ ಆವೃತ್ತಿಯ ಐಪಿಎಲ್‌ನಲ್ಲಿ 3 ಅರ್ಧಶತಕ ಸಿಡಿಸಿದ್ದಾರೆ. ಈ ಪೈಕಿ ಅಜೇಯ 58 ರನ್ ರಿಂಕು ಬಾರಿಸಿರುವ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿದೆ.

ಇನ್ನು ಕೆಕೆಆರ್ ಹಾಗೂ ಚೆನ್ನೈ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್‌, ನಿಗದಿತ 20 ಓವರ್‍‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 144 ರನ್‌ ಕಲೆಹಾಕಿತು. ಶಿವಂ ದುಬೆ ಅಜೇಯ 48 ರನ್ ಬಾರಿಸುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಕೆಕೆಆರ್ ಪರ ಮಾರಕ ದಾಳಿ ನಡೆಸಿದ ಸುನಿಲ್ ನರೈನ್ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದರೆ, ವೈಭವ್ ಅರೋರ, ಶಾರ್ದೂಲ್‌ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಇನ್ನು ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಕೇವಲ 33 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾದ ಬಳಿಕ ನಾಲ್ಕನೇ ವಿಕೆಟ್‌ಗೆ ನಿತೀಶ್ ರಾಣಾ ಹಾಗೂ ರಿಂಕು ಸಿಂಗ್ 99 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ಹಳಿಗೆ ಮರಳುವಂತೆ ಮಾಡಿದರು. ನಿತೀಶ್ ರಾಣಾ ಅಜೇಯ 57 ರನ್ ಬಾರಿಸಿದರೆ, ರಿಂಕು ಸಿಂಗ್ 54 ರನ್ ಸಿಡಿಸಿದರು. ಪರಿಣಾಮ ಕೆಕೆಆರ್ ತಂಡವು ಇನ್ನೂ 9 ಎಸೆತ ಬಾಕಿ ಇರುವಂತೆಯೇ ಭರ್ಜರಿ ಗೆಲುವು ಸಾಧಿಸಿತು.

click me!