
ಬೆಂಗಳೂರು(ಮಾ.26): ಮೊಣಕಾಲಿನ ಗಾಯದಿಂದ ಇನ್ನಷ್ಟೇ ಸಂಪೂರ್ಣ ಚೇತರಿಸಿಕೊಳ್ಳಬೇಕಿರುವ ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ರ ಸೇವೆ ಈ ಬಾರಿ ಐಪಿಎಲ್ನಲ್ಲಿ ಆರ್ಸಿಬಿಗೆ ಸಂಪೂರ್ಣವಾಗಿ ಲಭ್ಯವಾಗುವುದು ಅನುಮಾನವೆನಿಸಿದೆ. ಆರ್ಸಿಬಿಯ ವಿಡಿಯೋದಲ್ಲಿ ತಮ್ಮ ಗಾಯದ ಪ್ರಮಾಣದ ಬಗ್ಗೆ ಮಾಹಿತಿ ನೀಡಿರುವ ಮ್ಯಾಕ್ಸ್‌ವೆಲ್, ‘ಸಂಪೂರ್ಣ ಫಿಟ್ ಆಗಲು ತಿಂಗಳುಗಳು ಬೇಕಾಗಬಹುದು. ಆದರೆ ಟೂರ್ನಿಯಲ್ಲಿ ಆಡಲು ತೊಂದರೆಯಿಲ್ಲ’ ಎಂದಿದ್ದಾರೆ.
ಈಗಾಗಲೇ ಅವರು ತಂಡ ಸೇರಿಕೊಂಡಿದ್ದರೂ ಟೂರ್ನಿಯ ಆರಂಭಿಕ ಕೆಲ ಪಂದ್ಯಗಳಿಗೆ ಗೈರಾಗಬಹುದು ಎಂದು ಹೇಳಲಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಕಾಲಿನ ಗಾಯಕ್ಕೆ ತುತ್ತಾಗಿರುವ ಮ್ಯಾಕ್ಸ್‌ವೆಲ್ ಇತ್ತೀಚೆಗಷ್ಟೇ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಿದ್ದರು. ಆದರೆ ಭಾರತ ವಿರುದ್ಧ ಮೊದಲ ಏಕದಿನ ಪಂದ್ಯವಾಡಿದ ಬಳಿಕ ಮತ್ತೆರಡು ಪಂದ್ಯದಿಂದ ಹೊರಗುಳಿದಿದ್ದರು.
ಕಳೆದ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಆಟಗಾರರ ಮಿನಿ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು, ರೀಸೆ ಟೋಪ್ಲೆ, ವಿಲ್ ಜ್ಯಾಕ್ಸ್ ಅವರಂತಹ ತಾರಾ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಖರೀದಿಸಿತ್ತು. ಆದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ವಿಲ್ ಜ್ಯಾಕ್ಸ್, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ವಿಲ್ ಜ್ಯಾಕ್ಸ್ ಬದಲಿಗೆ ನ್ಯೂಜಿಲೆಂಡ್ ತಾರಾ ಆಲ್ರೌಂಡರ್ ಮಿಚೆಲ್ ಬ್ರೇಸ್‌ವೆಲ್‌ಗೆ ಆರ್‌ಸಿಬಿ ತಂಡದಲ್ಲಿ ಮಣೆಹಾಕಿದೆ.
IPL 2023 'ಎಂಟರ್‌ಟೈನ್‌ಮೆಂಟ್ ಅಧಿಕೃತ ಆರಂಭ': ಆರ್‌ಸಿಬಿ ಕೂಡಿಕೊಂಡ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್..!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಪ್ರಿಲ್ 02ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಐಪಿಎಲ್ ಅಭಿಯಾನವನ್ನು ಆರಂಭಿಸಲಿದೆ.
ಕಳೆದೆರಡು ಐಪಿಎಲ್ ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ ಆಫ್‌ಗೇರುವಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಮಹತ್ತರ ಪಾತ್ರವನ್ನು ನಿಭಾಯಿಸಿದ್ದಾರೆ. ಈ ಬಾರಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಟ್ರೋಫಿ ಬರವನ್ನು ನೀಗಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
16ನೇ ಆವೃತ್ತಿಯ ಐಪಿಎಲ್‌ಗೆ ಆರ್‌ಸಿಬಿ ತಂಡ ಹೀಗಿದೆ ನೋಡಿ:
ಫಾಫ್ ಡುಪ್ಲಸಿಸ್(ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಗ್ಲೆನ್ ಮ್ಯಾಕ್ಸ್‌ವೆಲ್, ಹರ್ಷಲ್ ಪಟೇಲ್, ವಾನಿಂಡು ಹಸರಂಗ, ದಿನೇಶ್ ಕಾರ್ತಿಕ್, ಶಹಬಾಜ್ ಅಹಮ್ಮದ್, ಅನೂಜ್ ರಾವತ್, ಅಕಾಶ್ ದೀಪ್, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಕರಣ್ ಶರ್ಮಾ, ಸಿದ್ದಾರ್ಥ್ ಕೌಲ್, ಡೇವಿಡ್ ವಿಲೆ, ರಜತ್ ಪಾಟಿದಾರ್, ಮಿಚೆಲ್ ಬ್ರೇಸ್‌ವೆಲ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ಮನೋಜ್ ಬಾಂಡಗೆ, ರಾಜನ್ ಕುಮಾರ್, ಸೋನು ಯಾದವ್, ಅವಿನಾಶ್ ಸಿಂಗ್,
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.