
ಮುಂಬೈ(ಮೇ.09): ಐಪಿಎಲ್ 2023 ಟೂರ್ನಿಯಲ್ಲಿ ಆರ್‌ಸಿಬಿ 10 ಪಂದ್ಯಗಳನ್ನಾಡಿದರೂ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ. ಸೋಲು ಗೆಲುವಿನ ಮಿಶ್ರಣದಲ್ಲಿರುವ ಆರ್‌ಸಿಬಿಗೆ ಇನ್ನುಳಿದಿರುವ 4 ಪಂದ್ಯಗಳು ಅತ್ಯಂತ ಮಹತ್ವದ್ದಾಗಿದೆ. ಪ್ಲೇ ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಎಲ್ಲಾ ಪಂದ್ಯ ಗೆಲ್ಲಲೇಬೇಕು. ಇಂದು ಬೆಂಗಳೂರು ವಿರುದ್ಧ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈ ಇಂಡಿಯನನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಾಧೇರಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮದ್ವಾಲ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹನ್‌ಡ್ರಾಫ್
3 ಓವರ್‌ನಲ್ಲಿ 50 ರನ್ ನೀಡಿದರೂ 4ನೇ ಓವರ್‌ನಲ್ಲಿ ಪಂದ್ಯ ಗೆಲ್ಲಿಸುತ್ತೇನೆ: ಹರ್ಷಲ್ ಪಟೇಲ್
ಆರ್‌ಸಿಬಿ ಪ್ಲೇಯಿಂಗ್ 11
ವಿರಾಟ್ ಕೊಹ್ಲಿ, ಪಾಫ್ ಡುಪ್ಲೆಸಿಸ್(ನಾಯಕ), ಅನೂಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್, ವಾನಿಂಡು ಹಸರಂಗ, ಹರ್ಷಲ್ ಪಟೇಲ್, ವಿಜಯ್ ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್‌ವುಡ್
ಮುಂಬೈನ ವಾಂಖೆ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆಲುವಿಗಾಗಿ ಎಲ್ಲಾ ಪ್ರಯತ್ನ ಮಾಡಲಿದೆ. ಅಂಕಪಟ್ಟಿಯಲ್ಲಿ ಆರ್‌ಸಿಬಿ 6ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 8ನೇ ಸ್ಥಾನದಲ್ಲಿದೆ. ಆರ್‌ಸಿಬಿ ಹಾಗೂ ಮುಂಬೈ ಎರಡೂ ತಂಡಗಳು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಆದರೆ ಈ ಹಿಂದಿನ ಹಲವು ಟೂರ್ನಿಗಳಲ್ಲಿ ಮುಂಬೈ ಅಂತಿಮ ಹಂತದಲ್ಲಿ ಗೇರ್ ಬದಲಾಯಿಸಿ ಪ್ಲೇ ಆಫ್ ಹಂತಕ್ಕೇರಿದ ಉದಾಹರಣೆ ಇದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ದಿಟ್ಟ ಹೋರಾಟ ನೀಡಬೇಕಾಗಿದೆ.
ಆರ್‌ಸಿಬಿ 10 ಪಂದ್ಯದಲ್ಲಿ 5 ಗಲುವು 5 ಸೋಲು ಅನುಭವಿಸಿದ್ದರೆ, ಮುಂಬೈ ಕೂಡ 10ರಲ್ಲಿ 5 ಗೆಲುವು 5 ಸೋಲು ಕಂಡಿದೆ. ಇಂದು ಗೆದ್ದ ತಂಡ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟರೆ ಸೋತ ತಂಡ 8ನೇ ಸ್ಥಾನಕ್ಕೆ ಕುಸಿತ ಕಾಣಲಿದೆ. ಹೀಗಾಗಿ ಪ್ರತಿ ಪಂದ್ಯಗಳು ಉಭಯ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್‌ಸಿಬಿ 3 ಬಾರಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
ಮುಂಬೈ ಮೇಲೆ ಮತ್ತೆ ಅಬ್ಬರಿಸ್ತಾರಾ ಕೊಹ್ಲಿ..? ಇಲ್ಲಿದೆ ಇಂಟ್ರೆಸ್ಟಿಂಗ್ ಅಂಕಿ ಅಂಶ
ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ 11ರಲ್ಲಿ 8 ಪಂದ್ಯ ಗೆದ್ದು ಮೊದಲ ಸ್ಥಾನದಲ್ಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ 11ರಲ್ಲಿ 6 ಪಂದ್ಯ ಗೆದ್ದ 2ನೇ ಸ್ಥಾನದಲ್ಲಿದೆ. ಲಖನೌ ಸೂಪರ್ ಜೈಂಟ್ಸ್ 11ರಲ್ಲಿ 5 ಪಂದ್ಯ ಗೆದ್ದು 3ನೇ ಸ್ಥಾನದಲ್ಲಿದೆ. ರಾಜಸ್ಥಾನ ರಾಯಲ್ಸ್ ಕೂಡ 11ರಲ್ಲಿ 5 ಪಂದ್ಯ ಗೆದ್ದಿದೆ. ಆದರೆ ನೆಟ್ ರನ್ ರೇಟ್ ಆಧಾರದಲ್ಲಿ 4ನೇ ಸ್ಥಾನದಲ್ಲಿದೆ. 11ರಲ್ಲಿ 5 ಪಂದ್ಯ ಗೆದ್ದಿರುವ ಕೋಲ್ಕತಾ ನೈಟ್ ರೈಡರ್ಸ್ 5ನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ 6ನೇ ಸ್ಥಾನದಲ್ಲಿದೆ. ಇನ್ನು ಪಂಜಾಬ್ ಕಿಂಗ್ಸ್ 7, ಮುಂಬೈ ಇಂಡಿಯನ್ಸ್ 8, ಸನ್‌ರೈಸರ್ಸ್ ಹೈದರಾಬಾದ್ 9 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 10ನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.