
ಮುಂಬೈ(ಏ.16): 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ 22ನೇ ಪಂದ್ಯದಲ್ಲಿಂದು ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ.
ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಅನಾರೋಗ್ಯದಿಂದ ಬಳಲುತ್ತಿದ್ದು, ರೋಹಿತ್ ಬದಲಿಗೆ ಸೂರ್ಯಕುಮಾರ್ ಯಾದವ್ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಡುಯಾನ್ ಜಾನ್ಸನ್ ತಂಡ ಕೂಡಿಕೊಂಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಇದುವರೆಗೂ 31 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಕೋಲ್ಕತಾ ನೈಟ್ ರೈಡರ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. 31 ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಕೆಕೆಆರ್ ಗೆಲುವು ಸಾಧಿಸಿದ್ದರೆ, ಮುಂಬೈ ಇಂಡಿಯನ್ಸ್ 09 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.
ಧೋನಿಗೆ RCB 'ಅಚ್ಚುಮೆಚ್ಚು', ಬೆಂಗಳೂರು ವಿರುದ್ದ ಮಹಿ ಚಚ್ಚಿದ್ದೇ ಹೆಚ್ಚು..!
ಮುಂಬೈ ವುಮೆನ್ಸ್ ತಂಡದ ಜೆರ್ಸಿ ತೊಟ್ಟು ಕಣಕ್ಕಿಳಿದ ಮುಂಬೈ ಇಂಡಿಯನ್ಸ್:
ಹೌದು, ಮುಂಬೈ ಇಂಡಿಯನ್ಸ್ ತಂಡವು ಇಂದು ಕೆಕೆಆರ್ ಎದುರಿನ ಪಂದ್ಯದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ತೊಟ್ಟ ಜೆರ್ಸಿಯನ್ನು ತೊಟ್ಟು ಕಣಕ್ಕಿಳಿಯುವ ಮೂಲಕ ವಿಶೇಷ ಸಂದೇಶವನ್ನು ಸಾರಿದೆ. ಎಲ್ಲರಿಗೂ ಶಿಕ್ಷಣ ಮತ್ತು ಕ್ರೀಡೆ ಎನ್ನುವ ಘೋಷವಾಕ್ಯದೊಂದಿಗೆ ಮುಂಬೈ ತಂಡವು ಈ ಪಂದ್ಯದಲ್ಲಿ ಕಣಕ್ಕಿಳಿದಿದೆ. ರಿಲಯನ್ಸ್ ಫೌಂಡೇಶನ್ ಅವರ ಮುತುವರ್ಜಿಯಿಂದ ಈ ಕ್ರಮಕ್ಕೆ ಮುಂದಾಗಿದ್ದು, ಸುಮಾರು 19 ಸಾವಿರ ಬಾಲಕಿಯರು ಮುಂಬೈನ ವಾಂಖೇಡೆ ಮೈದಾನದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ವೀಕ್ಷಿಸಲಿದ್ದಾರೆ.
ತಂಡಗಳು ಹೀಗಿವೆ ನೋಡಿ
ಕೋಲ್ಕತಾ ನೈಟ್ ರೈಡರ್ಸ್: ರೆಹಮನುಲ್ಲಾ ಗುರ್ಬಾಜ್, ಎನ್ ಜಗದೀಶನ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೇನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫಗ್ರ್ಯೂಸನ್, ವರುಣ್ ಚಕ್ರವರ್ತಿ.
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್, ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಡೇರಾ, ಅರ್ಜುನ್ ತೆಂಡುಲ್ಕರ್, ರಿಲೆ ಮೆರಿಡಿತ್ , ಹೃತ್ತಿಕ್ ಶೊಕೀನ್, ಡುಯಾನ್ ಜಾನ್ಸನ್, ಪೀಯೂಸ್ ಚಾವ್ಲಾ.
ಪಂದ್ಯ: ಮ. 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.