IPL 2023 ಈ ಇಬ್ಬರ ಮೇಲೆ ಕಣ್ಣಿಡಿ; RCB vs CSK ಪಂದ್ಯದ ಭವಿಷ್ಯ ನುಡಿದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್..!

Published : Apr 17, 2023, 04:21 PM ISTUpdated : Apr 17, 2023, 04:34 PM IST
IPL 2023 ಈ ಇಬ್ಬರ ಮೇಲೆ ಕಣ್ಣಿಡಿ; RCB vs CSK ಪಂದ್ಯದ ಭವಿಷ್ಯ ನುಡಿದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್..!

ಸಾರಾಂಶ

ಆರ್‌ಸಿಬಿ-ಸಿಎಸ್‌ಕೆ ಪಂದ್ಯಕ್ಕೆ ಕ್ಷಣಗಣನೆ ಶುರು ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಆತಿಥ್ಯ ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ಭವಿಷ್ಯ ನುಡಿದ ಸಂಖ್ಯಾಶಾಸ್ತ್ರಜ್ಞ

ಬೆಂಗಳೂರು(ಏ.17): ಐಪಿಎಲ್ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುವ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್‌ ಇತಿಹಾಸದ ಬದ್ದ ಎದುರಾಳಿಗಳೆಂದೇ ಬಿಂಬಿತವಾಗಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಖ್ಯಾತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ, ಚೆನ್ನೈ-ಬೆಂಗಳೂರು ಪಂದ್ಯದ ಭವಿಷ್ಯ ನುಡಿದಿದ್ದಾರೆ.

ಹೌದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ತಂಡವು ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿತ್ತು. ಇದಾದ ಬಳಿಕ ಸತತ ಎರಡು ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿದ್ದ ಬೆಂಗಳೂರು ತಂಡವು, ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು ಸುಲಭ ಜಯ ದಾಖಲಿಸಿ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಇದೀಗ ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ಸವಾಲು ಮೆಟ್ಟಿ ನಿಲ್ಲಲು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಸಜ್ಜಾಗಿದೆ. ಇದರ ಬೆನ್ನಲ್ಲೇ ಬಿಗ್‌ಬಾಸ್ ಸ್ಪರ್ಧಾಳು ಹಾಗೂ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ, ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವಿನ ಪಂದ್ಯದ ಕುರಿತಂತೆ ಭವಿಷ್ಯ ನುಡಿದಿದ್ದಾರೆ.

ಸೌರವ್ ಗಂಗೂಲಿ ಅನ್‌ಫಾಲೋ ಮಾಡಿದ ವಿರಾಟ್ ಕೊಹ್ಲಿ..! ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ ಕೊಹ್ಲಿ ಜಿದ್ದು!

"ಇವತ್ತು ನನ್ನ ಬೆಂಬಲ RCB ಗೆ. ನನ್ನ ಪ್ರಕಾರ, ಇವತ್ತಿನ ಪಂದ್ಯದಲ್ಲಿ ವೆಯ್ನ ಪಾರ್ನೆಲ್ ಮೇಲೆ ತುಂಬಾ ಭರವಸೆ ಇಟ್ಟಿದ್ದಿನಿ. ಮ್ಯಾಕ್ಸವೇಲ್ ಸಹ ಇಂದಿನ ಪಂದ್ಯದಲ್ಲಿ ತುಂಬಾ ಒಳ್ಳೆಯ ಆಟ ಆಡಬಹುದು. ಇಂದಿನ ಪಂದ್ಯ ಬಹಳ ಕುತೂಹಲ ಪಂದ್ಯ, ಕೊನೆಯ ಓವರ್‌ವರೆಗೂ ಪಂದ್ಯ ಕುತೂಹಲವಾಗಿರಲಿದೆ" ಎಂದು ಆರ್ಯವರ್ಧನ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ (Chennai Super Kings) ತಂಡಗಳು ಒಟ್ಟಾರೆ 30 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಆರ್‌ಸಿಬಿ ಎದುರು ಸ್ಪಷ್ಟ ಮೇಲುಗೈ ಸಾಧಿಸಿದೆ. 30 ಪಂದ್ಯಗಳ ಪೈಕಿ ಧೋನಿ ನೇತೃತ್ವದ ಚೆನ್ನೈ 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನೊಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಹೊರಬಿದ್ದಿರಲಿಲ್ಲ.

IPL 2023: ಇಂದು ರಾಯಲ್ ಚಾಲೆಂಜರ್ಸ್‌ ಬೆಂಗ​ಳೂ​ರು - ಚೆನ್ನೈ ಸೂಪರ್ ಕಿಂಗ್ಸ್‌ ಮೆಗಾ ಫೈಟ್‌

ಟಿಕೆಟ್‌ ಇಲ್ಲ​ದಿ​ದ್ದ​ರೂ ಅಭಿ​ಮಾ​ನಿ​ಗಳ ಕ್ಯೂ!

ಆರ್‌​ಸಿ​ಬಿ-ಚೆನ್ನೈ ಪಂದ್ಯದ ಟಿಕೆಟ್‌ ಈಗಾ​ಗಲೇ ಸೋಲ್ಡ್‌ಔಟ್‌ ಆಗಿದ್ದರೂ ಭಾನುವಾರವೂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಟಿಕೆಟ್‌ಗಾಗಿ ನೂರಾರು ಮಂದಿ ಅಭಿ​ಮಾ​ನಿ​ಗಳು ಸೇರಿ​ದ್ದರು. ಅಧಿ​ಕಾ​ರಿ​ಗ​ಳು ಟಿಕೆಟ್‌ ಈಗಾ​ಗಲೇ ಮುಗಿ​ದಿದೆ ಎಂದು ಹೇಳಿ​ದರೂ ಸ್ಥಳ​ದಿಂದ ತೆರ​ಳ​ಲಿಲ್ಲ. ಗೇಟ್‌ ಬಳಿ ನೆರೆ​ದಿದ್ದ ಪ್ರೇಕ್ಷ​ಕ​ರನ್ನು ಅಲ್ಲಿಂದ ಹೊರ​ಕ​ಳು​ಹಿ​ಸ​ಲು ಪೊಲೀ​ಸರು ಹರ​ಸಾ​ಹಸ ಪಡ​ಬೇ​ಕಾ​ದ ಪರಿಸ್ಥಿತಿ ಕಂಡು ಬಂದಿತು.

ಸಂಭವನೀಯ ಆಟಗಾರರ ಪಟ್ಟಿ

ಆರ್‌​ಸಿ​ಬಿ: ಫಾಫ್ ಡು ಪ್ಲೆಸಿಸ್​(​ನಾ​ಯ​ಕ), ವಿರಾಟ್‌ ಕೊಹ್ಲಿ, ಮಹಿಪಾಲ್ ಲೊಮ್ರೊರ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ದಿನೇಶ್ ಕಾರ್ತಿಕ್‌, ಶಾಬಾಜ್‌ ಅಹಮ್ಮದ್, ವನಿಂದು ಹಸ​ರಂಗ, ವೇಯ್ನ್‌ ಪಾರ್ನೆಲ್‌, ಹರ್ಷಲ್‌ ಪಟೇಲ್, ಮೊಹಮ್ಮದ್ ಸಿರಾಜ್‌, ವೈಶಾಕ್ ವಿಜಯ್‌ಕುಮಾರ್.

ಚೆನ್ನೈ: ಋತುರಾಜ್‌ ಗಾಯ​ಕ್ವಾಡ್‌, ಡೆವೊನ್‌ ಕಾನ್‌ವೇ, ಅಜಿಂಕ್ಯ ರಹಾನೆ, ಮೋಯಿನ್‌ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಎಂ ಎಸ್ ಧೋನಿ(​ನಾ​ಯ​ಕ),ಪತಿರಣ, ಮಹೀಶ್ ತೀಕ್ಷಣ, ತುಷಾರ್ ದೇಶ​ಪಾಂಡೆ, ಆಕಾ​ಶ್‌ ಸಿಂಗ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ