
ಹೈದರಾಬಾದ್(ಏ.18): ಐಪಿಎಲ್ ಟೂರ್ನಿಗೆ 16ನೇ ಹುಟ್ಟು ಹಬ್ಬ. 2008ರ ಎಪ್ರಿಲ್ 18 ರಂದು ಮೊದಲ ಐಪಿಎಲ್ ಆವೃತ್ತಿಯ ಮೊದಲ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಅಬ್ಬರಿಸಿದ ಕೆಕೆಆರ್ ಬ್ಯಾಟ್ಸ್‌ಮನ್ ಬ್ರೆಂಡೆನ್ ಮೆಕಲಮ್ ಅಜೇಯ 158 ರನ್ ಸಿಡಿಸಿದ್ದರು. ಮೊದಲ ಪಂದ್ಯದಲ್ಲೇ ದಾಖಲೆ ನಿರ್ಮಾಣವಾಗಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ 82 ರನ್‌ಗೆ ಆಲೌಟ್ ಆಗಿತ್ತು. ಈ ಮೂಲಕ ಕೆಕೆಆರ್ 140 ರನ್ ಗೆಲುವು ದಾಖಲಿಸಿತ್ತು. ಇದೀಗ ಐಪಿಎಲ್ ಹುಟ್ಟಿದ ದಿನ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕೆಕೆಆರ್ ಪರ ಬ್ರೆಂಡೆನ್ ಮೆಕಲಂ ದಾಖಲೆಯ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪರ ಇದೇ ದಾಖಲೆ ಸೃಷ್ಟಿಬಲ್ಲರೇ ಅನ್ನೋ ಕುತೂಹಲ ಮನೆ ಮಾಡಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಆರ್‌ಸಿಬಿ ವಿರುದ್ಧ ಗೆಲುವಿನ ಬಳಿಕ ಫಾಫ್ ಮ್ಯಾಕ್ಸ್‌ವೆಲ್ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಧೋನಿ!
ಮುಂಬೈ ಇಂಡಿಯನ್ಸ್:
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶಾನ್, ತಿಲಕ್ ವರ್ಮಾ, ಸೂರ್ಯಕುಮಾರ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ಅರ್ಜುನ್ ತೆಂಡುಲ್ಕರ್, ನೆಹಾಲ್ ವಾಧರಾ, ಹೃತಿಕ್ ಶೋಕಿನ್, ಪಿಯೂಷ್ ಚಾವ್ಲಾ, ಜೇಸನ್ ಬೆಹನ್‌ಡ್ರಾಫ್
ಹೈದರಾಬಾದ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಆ್ಯಡಿನ್ ಮರ್ಕ್ರಮ್(ನಾಯಕ), ಹೆನ್ರಿಚ್ ಕಾಲ್ಸೀನ್, ಅಭಿಷೇಕ್ ಶರ್ಮಾ, ವಾಶಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್
RCB vs CSK: ಖುಷಿ ಪಡಿ, ವಿಶಲ್ ಹೊಡಿ, ಆದ್ರೆ ರೇಗಿಸೋಕೆ ಬರಬೇಡಿ; CSK ಫ್ಯಾನ್ಸ್‌ಗೆ ಸಿಂಪಲ್ ಸುನಿ ತಿರುಗೇಟು
ಐಪಿಎಲ್ ಅಂಕಪಟ್ಟಿ: ರಾಜಸ್ಥಾನ ರಾಯಲ್ಸ್ ಆಡಿದ 5 ಪಂದ್ಯದಲ್ಲಿ 4 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ರಾಜಸ್ಥಾನ ಕೇವಲ 1 ಸೋಲು ಕಂಡಿದೆ. ಇನ್ನು 2ನೇ ಸ್ಥಾನದಲ್ಲಿರುವ ಲಖನೌ ಸೂಪರ್ ಜೈಂಟ್ಸ್ 5 ಪಂದ್ಯದಲ್ಲಿ 3 ಗೆಲುವು 2 ಸೋಲು ಕಂಡಿದೆ. ಆರ್‌ಸಿಬಿ ವಿರುದ್ಧದ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಚೆನ್ನೈ ಕೂಡ 5 ಪಂದ್ಯದಲ್ಲಿ 3 ಗೆಲುವು ಕಂಡಿದೆ. ಗುಜರಾತ್ ಟೈಟಾನ್ಸ್ 5 ರಲ್ಲಿ 3 ಗೆಲುವು ದಾಖಲಿಸಿ 4ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 5 ಪಂದ್ಯದಲ್ಲಿ 3 ರಲ್ಲಿ ಗೆಲುವು ದಾಖಲಿಸಿ 5ನೇ ಸ್ಥಾನದಲ್ಲಿದೆ. ಕೋಲ್ಕತಾ ನೈಟ್ ರೈಡರ್ಸ್ 5ರಲ್ಲಿ 3 ಪಂದ್ಯ ಸೋತು, 2 ಗೆಲುವಿನ ಮೂಲಕ 6ನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯದಲ್ಲಿ 2 ಗೆಲುವು 3 ಸೋಲು ಅನುಭವಿಸಿ 7ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಆಡುತ್ತಿರುವ ಮುಂಬೈ ಇಂಡಿಯನ್ಸ್ 4 ಪಂದ್ಯದಿಂದ 2 ಪಂದ್ಯದಲ್ಲಿ ಗೆಲುವು ದಾಖಲಿಸಿ 8ನೇ ಸ್ಥಾನದಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್ 4 ಪಂದ್ಯದಲ್ಲಿ 2 ಪಂದ್ಯದಲ್ಲಿ ಗೆಲುವು ಸಾಧಿಸಿ 9ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿದ 5ರಲ್ಲೂ ಸೋಲು ಅನುಭವಿಸಿ ಕೊನೆಯ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.