IPL 2023: ರಾಯಲ್ಸ್‌ ಬೋನಿಗೆ ಬಿದ್ದ ಸೂಪರ್‌ ಕಿಂಗ್ಸ್‌!

Published : Apr 27, 2023, 11:29 PM IST
 IPL 2023: ರಾಯಲ್ಸ್‌ ಬೋನಿಗೆ ಬಿದ್ದ ಸೂಪರ್‌ ಕಿಂಗ್ಸ್‌!

ಸಾರಾಂಶ

ಯಶಸ್ವಿ ಜೈಸ್ವಾಲ್‌ ಆಡಿದ ಸ್ಪೋಟಕ ಇನ್ನಿಂಗ್ಸ್‌ ಹಾಗೂ ಆಡಂ ಜಂಪಾ ಅವರ ಭರ್ಜರಿ ಬೌಲಿಂಗ್‌ ಸಾಹಸದಿಂದ ರಾಜಸ್ಥಾನ ರಾಯಲ್ಸ್‌ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು 32 ರನ್‌ಗಳಿಂದ ಮಣಿಸಿದೆ. ಆ ಮೂಲಕ ಹಾಲಿ ಆವೃತ್ತಿಯಲ್ಲಿ ಚೆನ್ನೈ ವಿರುದ್ಧ ಆಡಿದ ಎರಡೂ ಪಂದ್ಯ ಗೆದ್ದಂತಾಗಿದೆ.  

ಜೈಪುರ (ಏ.27): ಐಪಿಎಲ್‌ನ ತನ್ನ 200ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಗೆಲುವಿನ ಸಂಭ್ರಮ ಕಂಡಿದೆ. ಸತತ ಮೂರನೇ ಗೆಲುವಿನ ಗುರಿಯಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ರಾಜಸ್ಥಾನ ರಾಯಲ್ಸ್‌ 32 ರನ್‌ಗಳಿಂದ ಸೋಲಿಸಿದೆ. ಆ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಹಾಲಿ ಆವೃತ್ತಿಯಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್‌ ತಂಡ ಗೆಲುವು ಸಾಧಿಸಿದಂತಾಗಿದೆ. ಇದಕ್ಕೂ ಮುನ್ನ ಚೆನ್ನೈನಲ್ಲಿ ನಡೆದಿದ್ದ ಪಂದ್ಯದಲ್ಲೂ ರಾಜಸ್ಥಾನ ಗೆಲುವು ಕಂಡಿತ್ತು. ಯಶಸ್ವಿ ಜೈಸ್ವಾಲ್‌ (77ರನ್‌, 43 ಎಸೆತ, 8 ಬೌಂಡರಿ, 4 ಸಿಕ್ಸರ್‌) ಹಾಗೂ ಇನ್ನಿಂಗ್ಸ್‌ನ ಕೊನೆಯಲ್ಲಿ ಧ್ರುವ್‌ ಜುರೇಲ್‌ ಆಡಿದ ಕೇವಲ 15 ಎಸೆತಗಳ 34 ರನ್‌ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್‌ ತಂಡ 5 ವಿಕೆಟ್‌ಗೆ 202 ರನ್‌ ಕಲೆಹಾಕಿತ್ತು. ಪ್ರತಿಯಾಗಿ ಅಡಂ ಜಂಪಾ (22ಕ್ಕೆ 3) ಮಾರಕ ಬೌಲಿಂಗ್‌ ದಾಳಿಗೆ ಮುಗ್ಗರಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 6 ವಿಕೆಟ್‌ಗೆ 170 ರನ್‌ ಬಾರಿಸಿ ಸೋಲು ಕಂಡಿತು.  ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಪರವಾಗಿ ಮಧ್ಯಮ ಕ್ರಮಾಂಕದ ಆಲ್‌ರೌಂಡರ್‌ ಶಿವಂ ದುಬೆ 33 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 2 ಬೌಂಡರಿಗಳಿದ್ದ 52 ರನ್‌ ಬಾರಿಸಿ ಹೋರಾಟ ತೋರಿದರಾದರೂ ಅದು ಗೆಲುವಿಗೆ ಸಾಧ್ಯವಾಗಲಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್