
ಬೆಂಗಳೂರು (ಏ.21): ರನ್ ಗಳಿಸಲು ಬಹಳ ಕಠಿಣವಾಗಿದ್ದ ಪಿಚ್‌ನಲ್ಲಿ ಅಷ್ಟೇ ಬಿಗಿ ದಾಳಿ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್‌ಗೆ ಕಡಿವಾಣ ಹೇರಲು ಯಶಸ್ವಿಯಾಗಿದೆ. ಶುಕ್ರವಾರ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ರವೀಂದ್ರ ಜಡೇಜಾ ನೇತೃತ್ವದ ಮಾರಕ ದಾಳಿಗೆ ನಲುಗಿ 134 ರನ್ ಬಾರಿಸಲಷ್ಟೇ ಶಕ್ತವಾಯಿತು. ಅರಂಭಿಕ ಆಟಗಾರ ಅಭಿಷೇಕ್ ಶರ್ಮ ಬಾರಿಸಿದ 34 ರನ್‌ಗಳೇ ತಂಡದ ಗರಿಷ್ಠ ರನ್ ಆಗಿತ್ತು. ಇನ್ನಿಂಗ್ಸ್‌ನ ಮೊದಲ ಎಸೆತದಿಂದಲೇ ಚೆನ್ನೈ ತಂಡದ ಬೌಲರ್‌ಗಳ ಮುಂದೆ ಪರದಾಡಲು ಆರಂಭಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಯಾವ ಹಂತದಲ್ಲೂ ಮೈಚಳಿ ಬಿಟ್ಟು ಬ್ಯಾಟಿಂಗ್ ಮಾಡುವ ಪ್ರಯತ್ನ ಮಾಡಲಿಲ್ಲ. ಆದರೆ, ಸಲ್ಪ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ಸನ್‌ರೈಸರ್ಸ್ ತಂಡ ಹೆಸರುವಾಸಿಯಾಗಿರುವ ಕಾರಣ, ಚೆನ್ನೈ ತಂಡದ ಚೇಸಿಂಗ್ ಕೂಡ ಕುತೂಹಲ ಕೆರಳಿದೆ. ಆರು ಮಂದಿ ಬೌಲರ್‌ಗಳನ್ನು ಬಳಸಿಕೊಂಡು ಎಂಎಸ್ ಧೋನಿ ಅತ್ಯಂತ ಚಾಣಾಕ್ಷತನದ ಬೌಲಿಂಗ್ ದಾಳಿ ನಡೆಸುವ ಮೂಲಕ ಸನ್‌ರೈಸರ್ಸ್ ತಂಡವನ್ನು ಕಟ್ಟಿಹಾಕಲು ಯಶಸ್ವಿಯಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.