
ಕೋಲ್ಕತಾ(ಏ.06): ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದ ಆರ್‌ಸಿಬಿ ತಂಡಕ್ಕೆ ಶಾರ್ದೂಲ್ ಠಾಕೂರ್ ಅಂತಿಮ ಹಂತದಲ್ಲಿ ಲೆಕ್ಕಾಚಾರ ಬದಲಾಯಿಸಿತು. ಆರಂಭಿಕ ರಹಮಾನುಲ್ಹಾ ಗುರ್ಬಾಜ್ ಹಾಫ್ ಸೆಂಚುರಿ ಸಿಡಿಸಿ ನೆರವಾದರೂ, ಕೆಕೆಆರ್ ಕುಸಿತ ಕಂಡಿತ್ತು. ಆದರೆ ಅಂತಿಮ ಹಂತದಲ್ಲಿ ಶಾರ್ದೂಲ್ ಠಾಕೂರ್ ಸ್ಫೋಟಕ ಬ್ಯಾಟಿಂಗ್ ಕೋಲ್ಕತಾ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ಇದರ ಪರಿಣಾಮ ಕೆಕೆಆರ್ ವಿಕೆಟ್ ನಷ್ಟಕ್ಕೆ ರನ್ ಸಿಡಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ರಹಮಾನುಲ್ಹಾ ಗುರ್ಬಾಜ್ ಉತ್ತಮ ಆರಂಭ ನೀಡಿದರೆ, ಮತ್ತೊಂದೆಡೆ ವಿಕೆಟ್ ಪತನ ಆರಂಭಗೊಂಡಿತು. ವೆಂಕಟೇಶ್ ಅಯ್ಯರ್ ಕೇವಲ 3 ರನ್ ಸಿಡಿಸಿ ಔಟಾದರು. ಇತ್ತ ಮನ್ದೀಪ್ ಸಿಂಗ್ ಡಕೌಟ್ ಆದರು. 26 ರನ್‌ಗೆ 2 ವಿಕೆಟ್ ಕಳೆದುಕೊಂಡಿತು. ನಾಯಕ ನಿತೀಶ್ ರಾಣಾ ಕೇವಲ 1 ರನ್ ಸಿಡಿಸಿ ಔಟಾದರು.ರಿಂಕು ಸಿಂಗ್ ಜೊತೆ ಸೇರಿದ ಗುರ್ಬಾಜ್ ಬ್ಯಾಟಿಂಗ್ ಮುಂದುವರಿಸಿದರು. ಗುರ್ಬಾಜ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.
ಗುರ್ಬಾಜ್ 44 ರನ್‌ಗೆ 57 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಆ್ಯಂಡ್ರೆ ರೆಸೆಲ್ ವಿಕೆಟ್ ಪತನಗೊಂಡಿತು. ರಸೆಲ್ ವಿಕೆಟ್ ಪತನ ಕೆಕೆಆರ್ ತಂಡಕ್ಕೆ ತೀವ್ರ ಆಘಾತ ನೀಡಿತು. ರಿಂಕು ಸಿಂಗ್ ಹಾಗೂ ಶಾರ್ದೂಲ್ ಠಾಕೂರ್ ಜೊತೆಯಾಟ ಕೆಕೆಆರ್ ತಂಡಕ್ಕೆ ಹೊಸ ಚೈತನ್ಯ ನೀಡಿತು. ಬೌಂಡರಿ ಹಾಗೂ ಸಿಕ್ಸರ್ ಮೂಲಕ ಅಬ್ಬರಿಸಿದ ಠಾಕೂರ್ ಹಾಫ್ ಸೆಂಚುರಿ ಸಿಡಿಸಿದರು. ಕೇವಲ 20 ಎಸೆತದಲ್ಲಿ ಠಾಕೂರ್ ಅರ್ಧಶತಕ ಸಿಡಿಸಿದರು.
ರಿಂಕು ಸಿಂಗ್ ಹಾಗೂ ಠಾಕೂರ್ ಅಬ್ಬರಕ್ಕೆ ಆರ್‌ಸಿಬಿ ಪ್ರಯತ್ನ ನೀರುಪಾಲಾಯಿತು. ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಆರ್‌ಸಿಬಿ ಪಂದ್ಯದ ಮೇಲೆ ನಿಯಂತ್ರಣ ಕಳೆದುಕೊಂಡಿತು. ಇದರ ನಡುವೆ ರಿಂಕು ಸಿಂಗ್ 33 ಎಸೆತದಲ್ಲಿ 46 ರನ್ ಸಿಡಿಸಿ ನಿರ್ಗಮಿಸಿದರು. ಆದರೆ ಶಾರ್ದೂಲ್ ಠಾಕೂರ್ ಅಬ್ಬರ ಮುಂದುವರಿಯಿತು.
ಠಾಕೂರ್ 29 ಎಸೆತದಲ್ಲಿ ಅಜೇಯ 68 ರನ್ ಸಿಡಿಸಿದರು. ಈ ಮೂಲಕ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 204 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.