
ಅಹಮದಾಬಾದ್(ಮೇ.07): ಆರಂಭಿಕ ಬ್ಯಾಟರ್‌ಗಳಾದ ಶುಭ್‌ಮನ್ ಗಿಲ್(96*) ಹಾಗೂ ವೃದ್ದಿಮಾನ್ ಸಾಹ(81) ಸ್ಪೋಟಕ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಕೇವಲ 2 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿದ್ದು, ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಹಾಗೂ ಶುಭ್‌ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಶತಕದ ಜತೆಯಾಟವಾಡಿ ಭದ್ರಬುನಾದಿ ಹಾಕಿಕೊಟ್ಟರು. ಆರಂಭದಲ್ಲಿ ವೃದ್ದಿಮಾನ್ ಸಾಹ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಈ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಪರ ಅತಿವೇಗದ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಮೊದಲ 6 ಓವರ್‌ನಲ್ಲಿ ಗುಜರಾತ್ ತಂಡವು 78 ರನ್‌ಗಳ ಜತೆಯಾಟವಾಡಿತು. ಇದಾದ ಬಳಿಕವೂ ಈ ಜೋಡಿ ರನ್ ಗಳಿಸುವ ವೇಗದಲ್ಲಿ ಹಿಂದೆ ಉಳಿಯಲಿಲ್ಲ. ಮೊದಲ 10 ಓವರ್‌ಗಳಲ್ಲಿ ಟೈಟಾನ್ಸ್ ಪಡೆ ವಿಕೆಟ್ ನಷ್ಟವಿಲ್ಲದೇ 121 ರನ್ ಕಲೆಹಾಕಿತು. ಮೊದಲ ವಿಕೆಟ್‌ಗೆ ಗುಜರಾತ್ ಟೈಟಾನ್ಸ್ ತಂಡವು 12.1 ಓವರ್‌ಗಳಲ್ಲಿ 142 ರನ್‌ಗಳ ಜತೆಯಾಟವಾಡಿತು. ಕೊನೆಗೂ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಆವೇಶ್ ಖಾನ್ ಯಶಸ್ವಿಯಾದರು. ವೃದ್ದಿಮಾನ್ ಸಾಹ 43 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 81 ರನ್ ಬಾರಿಸಿ ಪ್ರೇರಕ್ ಮಂಕಡ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.
IPL 2023: ಗುಜರಾತ್ ಎದುರು ಟಾಸ್ ಗೆದ್ದ ಲಖನೌ ಬೌಲಿಂಗ್ ಆಯ್ಕೆ
ಇನ್ನು ಸಾಹ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ನಾಯಕ ಹಾರ್ದಿಕ್ ಪಾಂಡ್ಯ ಕೂಡಾ ಸ್ಪೋಟಕ ಬ್ಯಾಟಿಂಗ್ ನಡೆಸಿದರು. ಶುಭ್‌ಮನ್ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ ಜೋಡಿ ಎರಡನೇ ವಿಕೆಟ್‌ಗೆ ಕೇವಲ 23 ಎಸೆತಗಳಲ್ಲಿ 42 ರನ್‌ಗಳ ಜತೆಯಾಟ ನಿಭಾಯಿಸಿತು. ಸಾಹ ವಿಕೆಟ್ ಪತನದ ಬಳಿಕ ಶುಭ್‌ಮನ್ ಗಿಲ್ ಆಕ್ರಮಣಕಾರಿ ಆಟವಾಡಿದರು. ಹಾರ್ದಿಕ್ ಪಾಂಡ್ಯ 15 ಎಸೆತಗಳಲ್ಲಿ ಒಂದು ಬೌಂಡರಿ ಸಹಿತ ಎರಡು ಸಿಕ್ಸರ್ ಸಹಿತ 25 ರನ್ ಬಾರಿಸಿ ಮೊಯ್ಸಿನ್ ಖಾನ್‌ಗೆ ವಿಕೆಟ್ ಒಪ್ಪಿಸಿದರು.
ಗಿಲ್ ಶತಕ ಮಿಸ್: ಆರಂಭದಿಂದಲೂ ಮಿಂಚಿನ ಆಟವಾಡಿದ ಶುಭ್‌ಮನ್ ಗಿಲ್ ಕೊನೆಯ ತನಕ ಬ್ಯಾಟಿಂಗ್ ಮಾಡುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಶುಭ್‌ಮನ್ ಗಿಲ್ 51 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 7 ಮುಗಿಲೆತ್ತರದ ಶತಕದ ಸಹಿತ 94 ರನ್ ಬಾರಿಸಿ ಅಜೇಯ ರಾಗುಳಿದರು. ಇನ್ನು ಕೇವಲ 6 ರನ್ ಅಂತರದಲ್ಲಿ ಶತಕ ಸಿಡಿಸುವ ಅವಕಾಶದಿಂದ ವಂಚಿತರಾದರು. ಇನ್ನು ಕೊನೆಯಲ್ಲಿ ಡೇವಿಡ್ ಮಿಲ್ಲರ್ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 21 ರನ್ ಗಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.