
ಹೈದರಾಬಾದ್(ಏ.09): ಸತತ 2ಸೋಲಿನಿಂದ ಕಂಗೆಟ್ಟಿರುವ ಸನ್‌ರೈಸರ್ಸ್ ಹೈದರಾಬಾದ್ ಇದೀಗ ತವರಿನಲ್ಲಿ ಗೆಲುವಿನ ಲಯ ಕಂಡುಕೊಳ್ಳುವ ಪ್ರಯತ್ನದಲ್ಲಿದೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೈದರಾಬಾದ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಹೆನ್ರಿಚ್ ಕಾಲ್ಸೀನ್ ಹಾಗೂ ಮಯಾಂಕ್ ಮಾರ್ಕಂಡೆ ತಂಡ ಸೇರಿಕೊಂಡಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ಒಂದು ಬದಲಾವಣೆ ಮಾಡಿದೆ. ಭಾನುಕ ರಾಜಪಕ್ಸ್ ತಂಡದಿಂದ ಹೊರಬಿದ್ದಿದ್ದಾರೆ. ಭಾನುಕಾ ಬದಲು ಮ್ಯಾಥ್ಯೂ್ ಶಾರ್ಟ್ ತಂಡ ಸೇರಿಕೊಂಡಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಆ್ಯಡಿನ್ ಮರ್ಕ್ರಮ್(ನಾಯಕ), ಹೆನ್ರಿಚ್ ಕಾಲ್ಸೀನ್, ವಾಶಿಂಗ್ಟನ್ ಸುಂದರ್, ಮಾರ್ಕೋ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
IPL 2023: ವೆಂಕಟೇಶ್ ಅಯ್ಯರ್, ರಿಂಕು ಸಿಕ್ಸರ್ ಆರ್ಭಟಕ್ಕೆ ಶರಣಾದ ಹಾಲಿ ಚಾಂಪಿಯನ್ ಗುಜರಾತ್..!
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಶಿಖರ್ ಧವನ್(ನಾಯಕ), ಪ್ರಭಾಸಿಮ್ರನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕುರನ್, ನತನ್ ಎಲ್ಲಿಸ್, ಮೋಹಿತ್ ರಾಥಿ, ಹರ್ಪ್ರೀತ್ ಬ್ರಾರ್, ರಾಹುಲ್ ಚಹಾರ್, ಅರ್ಶದೀಪ್ ಸಿಂಗ್
ಸನ್‌ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ವಿರುದ್ದ ಆಡಿತ್ತು. ಮೊದಲ ಪಂದ್ಯದಲ್ಲಿ ಹೈದರಾಬಾದ್ 72 ರನ್ ಹೀನಾಯ ಸೋಲು ಕಂಡಿತ್ತು. ಈ ಪಂದ್ಯವನ್ನು ಸನ್‌ರೈಸರ್ಸ್ ತಂಡ, ತವರಿನಲ್ಲೇ ಆಡಿತ್ತು. ಎರಡನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಿತ್ತು. ಈ ಪಂದ್ಯದಲ್ಲೂ ಹೈದರಾಬಾದ್ 5 ವಿಕೆಟ್ ಸೋಲು ಕಂಡಿತ್ತು. ಕಳೆದ ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ಸನ್‌ರೈಸರ್ಸ್ ಹೈದರಾಬಾದ್ ಸಮತೋಲನ ಕಳೆದುಕೊಂಡಿದೆ. ಬ್ಯಾಟಿಂಗ್, ಬೌಲಿಂಗ್ ವೈಫಲ್ಯ ಅನುಭವಿಸುತ್ತಿದೆ. ಇದೀಗ 3ನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಅಬ್ಬರಿಸಿ ಗೆಲುವು ಸಾಧಿಸುವ ಪ್ರಯತ್ನದಲ್ಲಿದೆ.
ಮುಂಬೈ ಮಣಿಸಿದ ಧೋನಿ ಪಡೆಗೆ ಶಾಕ್, ಕೆಲ ಪಂದ್ಯಗಳಿಗೆ ಸ್ಟಾರ್ ಆಟಗಾರರು ಅಲಭ್ಯ..!
ಪಂಜಾಬ್ ಕಿಂಗ್ಸ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದೆ. ಸ್ವತಃ ನಾಯಕ ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್ ಮೂಲಕ ಉತ್ತಮ ಆರಂಭ ನೀಡುತ್ತಿದ್ದಾರೆ. ಪಂಜಾಬ್ ಬೃಹತ್ ಮೊತ್ತ ಕಲೆಹಾಕುವ ಮೂಲಕ ಯಶಸ್ಸು ಸಾಧಿಸುತ್ತಿದೆ. ಪಂಜಾಬ್ ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿತ್ತು ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೋರಾಟ ನಡೆಸಿತ್ತು. ಈ ಪಂದ್ಯಲ್ಲಿ 5 ರನ್ ರೋಚಕ ಗೆಲುವು ದಾಖಲಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.