
ಧರ್ಮಶಾಲಾ(ಮೇ.05): ರವೀಂದ್ರ ಜಡೇಜಾ ಅಮೋಘ ಆಲ್ರೌಂಡ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡವು 28 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈ ಎದುರು ಸತತ 5 ಪಂದ್ಯ ಗೆದ್ದು ಬೀಗಿದ್ದ ಪಂಜಾಬ್ ತಂಡಕ್ಕೆ ಇದೀಗ ಧರ್ಮಶಾಲಾದಲ್ಲಿ ಬ್ರೇಕ್ ಬಿದ್ದಿದೆ. ಈ ಗೆಲುವಿನೊಂದಿಗೆ ಸಿಎಸ್‌ಕೆ ತಂಡವು ಲಖನೌ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ
ಇಲ್ಲಿನ ಹಿಮಾಚಲ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಗೆಲ್ಲಲು 168 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಆರಂಭದಲ್ಲೇ ಜಾನಿ ಬೇರ್‌ಸ್ಟೋವ್(7) ಹಾಗೂ ರಿಲೇ ರೂಸ್ಸೌ(0) ವಿಕೆಟ್ ಕಳೆದುಕೊಂಡಿತು. ಈ ಇಬ್ಬರನ್ನು ಒಂದೇ ಓವರ್‌ನಲ್ಲಿ ಪೆವಿಲಿಯನ್ನಿಗಟ್ಟುವಲ್ಲಿ ತುಷಾರ್ ದೇಶಪಾಂಡೆ ಯಶಸ್ವಿಯಾದರು. ಕೇವಲ 9 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಪಂಜಾಬ್ ತಂಡಕ್ಕೆ ಮೂರನೇ ವಿಕೆಟ್‌ಗೆ ಪ್ರಭ್‌ಸಿಮ್ರನ್ ಸಿಂಗ್ ಹಾಗೂ ಶಶಾಂಕ್ ಸಿಂಗ್ ಆಸರೆಯಾದರು. ಮೂರನೇ ವಿಕೆಟ್‌ಗೆ ಈ ಜೋಡಿ 53 ರನ್‌ಗಳ ಜತೆಯಾಟವಾಡಿದರು. ಶಶಾಂಕ್ ಸಿಂಗ್ 27 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಪ್ರಭ್‌ಸಿಮ್ರನ್ ಸಿಂಗ್ 30 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
"ನೀನ್ಯಾಕೆ ಮಾತಾಡ್ತೀ..?': ವಿರಾಟ್ ಕೊಹ್ಲಿ ಮೇಲೆ ಕಿಡಿಕಾರಿದ ಸನ್ನಿ..!
ಇನ್ನು ಈ ಜೋಡಿ ಬೇರ್ಪಡುತ್ತಿದ್ದಂತೆಯೇ ಪಂಜಾಬ್ ಕಿಂಗ್ಸ್ ತಂಡವು ನಾಟಕೀಯ ಕುಸಿತ ಕಂಡಿತು. ಒಂದು ಹಂತದಲ್ಲಿ 62 ರನ್‌ಗಳವರೆಗೆ ಕೇವಲ ಎರಡು ವಿಕೆಟ್ ಕಳೆದುಕೊಂಡಿದ್ದ ಪಂಜಾಬ್ ಆ ಬಳಿಕ 90 ರನ್ ಗಳಿಸುವಷ್ಟರಲ್ಲಿ 8 ಬ್ಯಾಟರ್‌ಗಳು ಪೆವಿಲಿಯನ್ ಸೇರಿದರು.
ಜಡೇಜಾ 20 ರನ್ ನೀಡಿ 3 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ ಹಾಗೂ ಸಿಮರ್‌ಜೀತ್ ಸಿಂಗ್ ತಲಾ 2 ವಿಕೆಟ್ ಪಡೆದರು. ಇನ್ನು ಮಿಚೆಲ್ ಸ್ಯಾಂಟ್ನರ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರಂಭಿಕ ಆಘಾತದ ಹೊರತಾಗಿಯೂ ಋತುರಾಜ್ ಗಾಯಕ್ವಾಡ್(32), ಡ್ಯಾರೆಲ್ ಮಿಚೆಲ್(30) ಹಾಗೂ ರವೀಂದ್ರ ಜಡೇಜಾ(43) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.