
ನವದೆಹಲಿ(ಏ.20): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 35ನೇ ಪಂದ್ಯದಲ್ಲಿಂದು ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಡೆಲ್ಲಿ ಹಾಗೂ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಮೈದಾನ ಆತಿಥ್ಯ ವಹಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಸುಮಿತ್ ಬದಲಿಗೆ ಲಲಿತ್ ಯಾದವ್ ಹಾಗೂ ಇಶಾಂತ್ ಶರ್ಮಾ ಬದಲಿಗೆ ಏನ್ರಿಚ್ ನೋಕಿಯ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಂಪೈರಿಂಗ್ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಅಶುತೋಶ್, ಈಗ ಪಂಜಾಬ್ ಪಾಲಿನ ಆಪತ್ಬಾಂಧವ..!
ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ಆಡಿರುವ 6ರಲ್ಲಿ 4 ಪಂದ್ಯ ಗೆದ್ದಿದ್ದು, ಕಳೆದ 3 ಪಂದ್ಯಗಳಲ್ಲೂ ಜಯಗಳಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇನ್ನೊಂದೆಡೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ 7 ಪಂದ್ಯಗಲ್ಲಿ 3ರಲ್ಲಿ ಗೆದ್ದಿದ್ದು, ಪ್ಲೇ-ಆಫ್ ಹಾದಿ ಸುಗಮಗೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅಗತ್ಯ.
IPL ನಿಯಮದ ವಿರುದ್ಧವೇ ತಿರುಗಿ ಬಿದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..!
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಜೇಕ್ ಫ್ರೇಸರ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ರಿಷಭ್ ಪಂತ್(ನಾಯಕ), ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲ್ದೀಪ್ ಯಾದವ್, ಏನ್ರಿಚ್ ನೋಕಿಯ, ಮುಕೇಶ್ ಕುಮಾರ್, ಖಲೀಲ್ ಅಹಮದ್.
ಸನ್‌ರೈಸರ್ಸ್ ಹೈದ್ರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡನ್ ಮಾರ್ಕ್‌ರಮ್, ಹೆನ್ರಿಚ್ ಕ್ಲಾಸೆನ್, ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಾಬಾಜ್ ಅಹಮ್ಮದ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.
ಪಂದ್ಯ: ಸಂಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.