ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಒಟ್ಟು 3 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಗುಜರಾತ್ ಟೈಟಾನ್ಸ್ ತಂಡವು ಎರಡು ಬಾರಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಬಾರಿ ಗೆಲುವಿನ ನಗೆ ಬೀರಿದೆ.
ಅಹಮದಾಬಾದ್(ಏ.17): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 32ನೇ ಪಂದ್ಯದಲ್ಲಿಂದು ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಡೆಲ್ಲಿ ಹಾಗೂ ಗುಜರಾತ್ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಡೇವಿಡ್ ವಾರ್ನರ್ ಬದಲಿಗೆ ಸುಮಿತ್ ಕುಮಾರ್ ತಂಡ ಕೂಡಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ವೃದ್ದಿಮಾನ್ ಸಾಹ, ಡೇವಿಡ್ ಮಿಲ್ಲರ್ ಹಾಗೂ ಸಂದೀಪ್ ವಾರಿಯರ್ ತಂಡಕೂಡಿಕೊಂಡಿದ್ದಾರೆ. ಸಂದೀಪ್ ವಾರಿಯರ್ ಐಪಿಎಲ್‌ಗೆ ಗುಜರಾತ್ ಪರ ಪಾದಾರ್ಪಣೆ ಮಾಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ನೋಡುವುದಕ್ಕಿಂತ ಫ್ಲೈಟ್‌ನಲ್ಲಿ ಫಾರಿನ್ ಟೂರ್ ಹೋಗೋದೇ ಚೀಪ್..!
ಶುಭ್‌ಮನ್ ಗಿಲ್ ನಾಯಕತ್ವದೊಂದಿಗೆ ಕಣಕ್ಕಿಳಿದಿರುವ ಗುಜರಾತ್ ಟೈಟಾನ್ಸ್ 6ರಲ್ಲಿ ತಲಾ 3 ಗೆಲುವು, ಸೋಲು ಕಂಡಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿದೆ.
🚨 Toss Update 🚨
Delhi Capitals win the toss and elect to bowl against Gujarat Titans.
Follow the Match ▶️ https://t.co/SxAzZl3Jf6 | pic.twitter.com/banchOKafT
ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಒಟ್ಟು 3 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಗುಜರಾತ್ ಟೈಟಾನ್ಸ್ ತಂಡವು ಎರಡು ಬಾರಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಬಾರಿ ಗೆಲುವಿನ ನಗೆ ಬೀರಿದೆ.
ಈ ತಂಡವೇ ನೋಡಿ ಆರ್‌ಸಿಬಿಯ ಅಸಲಿ ವಿಲನ್..! ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
ಉಭಯ ತಂಡಗಳ ಆಟಗಾರರ ಪಟ್ಟಿ
ಡೆಲ್ಲಿ: ಪೃಥ್ವಿ ಶಾ, ಜೇಕ್ ಫ್ರೇಸರ್, ಶಾಯ್ ಹೋಪ್, ರಿಷಭ್ ಪಂತ್(ನಾಯಕ), ಟ್ರಿಸ್ಟಿನ್ ಸ್ಟಬ್ಸ್, ಸುಮಿತ್ ಕುಮಾರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹಮದ್.
ಗುಜರಾತ್: ಶುಭ್‌ಮನ್ ಗಿಲ್(ನಾಯಕ), ಸಾಯಿ ಸುದರ್ಶನ್, ವೃದ್ದಿಮಾನ್ ಸಾಹ, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಂದೀಪ್ ವಾರಿಯರ್, ಸ್ಪೆನ್ಸರ್ ಜಾನ್ಸನ್, ನೂರ್ ಅಹಮ್ಮದ್, ಮೋಹಿತ್ ಶರ್ಮಾ.
ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ