ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೇ ರಿಚರ್ಡ್‌ಸನ್ ಹಾಗೂ ಲಲಿತ್ ಯಾದವ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಕ್ವೆನಾ ಮಫಾಕಾ ಬದಲಿಗೆ ಮೊಹಮ್ಮದ್ ನಬಿ, ಡೆವಾಲ್ಡ್ ಬ್ರೆವೀಸ್ ಬದಲಿಗೆ ರೊಮಾರಿಯೋ ಶೆಫರ್ಡ್ ಹಾಗೂ ನಮನ್ ಧೀರ್ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡಕೂಡಿಕೊಂಡಿದ್ದಾರೆ.
ಮುಂಬೈ(ಏ.7): ಸೂಪರ್ ಸಂಡೆಯ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೇ ರಿಚರ್ಡ್‌ಸನ್ ಹಾಗೂ ಲಲಿತ್ ಯಾದವ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಕ್ವೆನಾ ಮಫಾಕಾ ಬದಲಿಗೆ ಮೊಹಮ್ಮದ್ ನಬಿ, ಡೆವಾಲ್ಡ್ ಬ್ರೆವೀಸ್ ಬದಲಿಗೆ ರೊಮಾರಿಯೋ ಶೆಫರ್ಡ್ ಹಾಗೂ ನಮನ್ ಧೀರ್ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡಕೂಡಿಕೊಂಡಿದ್ದಾರೆ
ಸದ್ಯ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನೊಂದೆಡೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿದ 4 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮೂರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ
ಮುಂಬೈ ಇಂಡಿಯನ್ಸ್:
ಹಾರ್ದಿಕ್ ಪಾಂಡ್ಯ(ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೇವಿಸ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಗೆರಾಲ್ಡ್ ಕೋಟ್ಜೀ, ಆಕಾಶ್ ಮಧ್ವಾಲ್, ಜಸ್ಪ್ರೀತ್ ಬುಮ್ರಾ, ಪೀಯೂಸ್ ಚಾವ್ಲಾ.
ಡೆಲ್ಲಿ ಕ್ಯಾಪಿಟಲ್ಸ್:
ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಭ್ ಪಂತ್(ನಾಯಕ & ವಿಕೆಟ್ ಕೀಪರ್), ಟ್ರಿಸ್ಟಿನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಅಭಿಷೇಕ್ ಪೋರೆಲ್, ಏನ್ರಿಚ್ ನೋಕಿಯ, ಇಶಾಂತ್ ಶರ್ಮಾ, ಖಲೀಲ್ ಅಹಮ್ಮದ್, ಜೇ ರಿಚರ್ಡ್‌ಸನ್.
ಪಂದ್ಯ: ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ