
ಅಹಮದಾಬಾದ್(ಮಾ.25): 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಈಗಾಗಲೇ ಭರ್ಜರಿ ಚಾಲನೆ ಸಿಕ್ಕಿದೆ. ಸೂಪರ್ ಸಂಡೆಯ ಎರಡನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡವು 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ರೋಚಕವಾಗಿ ಮಣಿಸುವ ಮೂಲಕ ಶುಭಾರಂಭ ಮಾಡಿದೆ. ಇನ್ನು ಇದೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ ಫ್ಯಾನ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಫ್ಯಾನ್ಸ್‌ಗಳ ನಡುವೆ ಸ್ಟೇಡಿಯಂನಲ್ಲಿ ಬಡಿದಾಟ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಹೌದು, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿತ್ತು. 5 ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ರೋಹಿತ್ ಶರ್ಮಾ ಈ ಬಾರಿ ಕೇವಲ ಆಟಗಾರನಾಗಿ ಮಾತ್ರ ಕಣಕ್ಕಿಳಿದಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕರಾಗಿ ನೇಮಕವಾಗಿದ್ದಾರೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕ ಪಟ್ಟ ಕಟ್ಟಿದಾಗಿನಿಂದಲೂ ಮುಂಬೈ ಇಂಡಿಯನ್ಸ್ ಒಡೆದ ಮನೆಯಾಗಿತ್ತು. ಅಭಿಮಾನಿಗಳು ಕೂಡಾ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿರುದ್ದ ವಿವಿಧ ರೀತಿಯಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದೀಗ ಆ ಅಸಮಾಧಾನ ಮತ್ತೊಂದು ಹಂತಕ್ಕೇರಿದ್ದು, ಎರಡೂ ಆಟಗಾರರ ಅಭಿಮಾನಿಗಳು ಐಪಿಎಲ್ ಪಂದ್ಯ ನಡೆಯುತ್ತಿರುವಾಗಲೇ ಸ್ಟೇಡಿಯಂನಲ್ಲಿ ಬಡಿದಾಡಿಕೊಂಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಪಂಜಾಬ್ ಕಿಂಗ್ಸ್ ಕಟ್ಟಿಹಾಕುತ್ತಾ ಆರ್‌ಸಿಬಿ?
ಹೀಗಿದೆ ನೋಡಿ ಆ ವಿಡಿಯೋ:
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಬಾರಿಸಿತ್ತು. ಸಾಯಿ ಸುದರ್ಶನ್ 45 ರನ್ ಬಾರಿಸಿ ಗುಜರಾತ್ ಪಡೆಗೆ ಆಸರೆಯಾದರು. ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 6 ರನ್ ರೋಚಕ ಸೋಲು ಅನುಭವಿಸಿತು.
IPL 2024 ಗುಜರಾತ್ ಟೈಟಾನ್ಸ್ ಎದುರು ಮುಂಬೈ ಇಂಡಿಯನ್ಸ್‌ಗೆ ಮೊದಲ ಸೋಲಿನ ಶಾಕ್!
2012ರ ಬಳಿಕ ಮೊದಲ ಪಂದ್ಯ ಗೆಲ್ಲದ ಮುಂಬೈ!
ಐಪಿಎಲ್‌ನ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಕೊನೆ ಬಾರಿ ಗೆಲುವು ಕಂಡಿದ್ದು 2012ರಲ್ಲಿ. ಆ ಬಳಿಕ ಪ್ರತಿ ವರ್ಷವೂ ಮುಂಬೈ ಟೂರ್ನಿಯ ಮೊದಲ ಪಂದ್ಯದಲ್ಲಿ ಸೋತಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.