ಮೋದಿ ಸ್ಟೇಡಿಯಂನಲ್ಲಿಂದು ಚೆನ್ನೈ vs ಗುಜರಾತ್ ಫೈಟ್..! ಗಿಲ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯ

By Naveen Kodase  |  First Published May 10, 2024, 1:03 PM IST

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲಿಂಗ್ ವಿಭಾಗ ಸೊರಗಿದ್ದು, ಸ್ಪಿನ್ನರ್‌ಗಳ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಎಲ್ಲಾ ವಿಭಾಗದಲ್ಲೂ ವಿಫಲವಾಗುತ್ತಿದ್ದು, ಯಾವ ಪ್ರಯೋಗ ನಡೆಸಿದರೂ ಗೆಲುವು ಸಿಗುತ್ತಿಲ್ಲ.


ಅಹಮದಾಬಾದ್‌: ತಾರಾ ಬೌಲರ್‌ಗಳ ಅನುಪಸ್ಥಿತಿಯಲ್ಲೂ ಪ್ಲೇ-ಆಫ್ ರೇಸ್‌ನಲ್ಲಿ ಉಳಿದುಕೊಂಡಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಕ್ರವಾರ ಗುಜರಾತ್ ಟೈಟಾನ್ಸ್ ಸವಾಲು ಎದುರಾಗಲಿದೆ.

ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇದುವರೆಗೂ 11 ಪಂದ್ಯಗಳನ್ನಾಡಿ 6  ಗೆಲುವು ಹಾಗೂ 5 ಸೋಲುಗಳೊಂದಿಗೆ 12 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದು, ಪ್ಲೇ ಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.

Latest Videos

undefined

ಲಖನೌ ಸೂಪರ್ ಜೈಂಟ್ಸ್‌ ನಾಯಕತ್ವಕ್ಕೆ ರಾಹುಲ್ ಗುಡ್‌ ಬೈ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡವು ಇದುವರೆಗೂ 11 ಪಂದ್ಯಗಳನ್ನಾಡಿ ಕೇವಲ 4 ಪಂದ್ಯಗಳಲ್ಲಿ ಗೆಲುವು ಹಾಗೂ 7 ಪಂದ್ಯಗಳಲ್ಲಿ ಸೋಲು ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದುಕೊಂಡಿದೆ. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡಕ್ಕಿದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ. ಗೆದ್ದರಷ್ಟೇ ಪ್ಲೇ ಆಫ್ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಒಂದು ವೇಳೆ ಈ ಪಂದ್ಯ ಸೋತರೇ ಅಧಿಕೃತವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬೀಳಲಿದೆ. 

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲಿಂಗ್ ವಿಭಾಗ ಸೊರಗಿದ್ದು, ಸ್ಪಿನ್ನರ್‌ಗಳ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಎಲ್ಲಾ ವಿಭಾಗದಲ್ಲೂ ವಿಫಲವಾಗುತ್ತಿದ್ದು, ಯಾವ ಪ್ರಯೋಗ ನಡೆಸಿದರೂ ಗೆಲುವು ಸಿಗುತ್ತಿಲ್ಲ.

ಪಂಜಾಬ್ ಹೊರದಬ್ಬಿ ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಂಡ RCB

ಸಂಭವನೀಯ ಆಟಗಾರರ ತಂಡ ಹೀಗಿದೆ:

ಚೆನ್ನೈ ಸೂಪರ್ ಕಿಂಗ್ಸ್: ಅಜಿಂಕ್ಯ ರಹಾನೆ, ಋತುರಾಜ್ ಗಾಯಕ್ವಾಡ್(ನಾಯಕ), ಡ್ಯಾರೆಲ್ ಮಿಚೆಲ್, ಶಿವಂ ದುಬೆ, ಮೋಯಿನ್ ಅಲಿ, ರವೀಂದ್ರ ಜಡೇಜಾ, ಎಂ ಎಸ್ ಧೋನಿ(ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ರಿಚರ್ಡ್ ಗ್ಲೀಸೆನ್, ತುಷಾರ್ ದೇಶಪಾಂಡೆ.

ಗುಜರಾತ್ ಟೈಟಾನ್ಸ್: ವೃದ್ದಿಮಾನ್ ಸಾಹ(ವಿಕೆಟ್ ಕೀಪರ್), ಶುಭ್‌ಮನ್ ಗಿಲ್(ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಝ್ಮತುಲ್ಲಾ ಓವರ್‌ಝೈ, ರಾಹುಲ್ ತೆವಾಟಿಯಾ, ಶಾರುಕ್ ಖಾನ್, ರಶೀದ್ ಖಾನ್, ಆರ್‌ ಸಾಯಿ ಕಿಶೋರ್, ನೂರ್ ಅಹಮದ್, ಮೋಹಿತ್ ಶರ್ಮಾ.

ಸಮಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
 

click me!