
ನವದೆಹಲಿ(ಏ.24): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 40ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ತವರಿನಲ್ಲಿ ಗೆಲುವಿನ ಲಯಕ್ಕೆ ಬರಲು ಎದುರು ನೋಡುತ್ತಿದೆ.
ಡೆಲ್ಲಿ ಹಾಗೂ ಗುಜರಾತ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಮೈದಾನ ಆತಿಥ್ಯ ವಹಿಸಿದೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ. ಇನ್ನೊಂದೆಡೆ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಡೇವಿಡ್ ವಾರ್ನರ್ ಬದಲಿಗೆ ಶಾಯ್ ಹೋಪ್, ಲಲಿತ್ ಯಾದವ್ ಬದಲಿಗೆ ಸುಮಿತ್ ಕುಮಾರ್ ಡೆಲ್ಲಿ ತಂಡ ಕೂಡಿಕೊಂಡಿದ್ದಾರೆ
ಎಂ ಎಸ್ ಧೋನಿಗೆ ಈ ವಯಸ್ಸಲ್ಲಿ ಇಷ್ಟೊಂದು ಪವರ್ ಎಲ್ಲಿಂದ..? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
100ನೇ ಐಪಿಎಲ್ ಪಂದ್ಯವನ್ನಾಡುತ್ತಿರುವ ಗಿಲ್: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಪಂದ್ಯ ಆರಂಭಕ್ಕೂ ಮುನ್ನ ಶುಭ್‌ಮನ್ ಗಿಲ್ ಅವರನ್ನು ಸನ್ಮಾನಿಸಲಾಯಿತು. 100ನೇ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳಲು ಗುಜರಾತ್ ನಾಯಕ ಎದುರು ನೋಡುತ್ತಿದ್ದಾರೆ.
ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಟೂರ್ನಿಯಲ್ಲಿ8 ಪಂದ್ಯಗಳನ್ನಾಡಿದ್ದು, ಕೇವಲ 3ರಲ್ಲಿ ಗೆದ್ದಿದೆ. ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇ ಬೇಕಿದೆ. ಇನ್ನೊಂದೆಡೆ ಡೆಲ್ಲಿ ವಿರುದ್ಧ ಮೊದಲ ಮುಖಾಮುಖಿಯಲ್ಲಿ ಸೋತಿದ್ದ ಗುಜರಾತ್ ಇದೀಗ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ. ತಂಡ 8 ಪಂದ್ಯದಲ್ಲಿ ತಲಾ 4 ಗೆಲುವು, ಸೋಲು ಕಂಡಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಡೆಲ್ಲಿ ಕ್ಯಾಪಿಟಲ್ಸ್:
ಪೃಥ್ವಿ ಶಾ, ಜೇಕ್ ಫೇಸರ್, ಶಾಯ್ ಹೋಪ್, ಅಭಿಷೇಕ್ ಪೊರೆಲ್, ರಿಷಭ್ ಪಂತ್ (ನಾಯಕ), ಟ್ರಿಸ್ಟನ್ ಸ್ಟಬ್, ಅಕ್ಷರ್ ಪಟೇಲ್, ಕುಲೀಪ್ ಯಾದವ್, ಮುಕೇಶ್ ಕುಮಾರ್, ಏನ್ರಿಚ್ ನೋಕಿಯ, ಖಲೀಲ್ ಅಹ್ಮದ್.
ಗುಜರಾತ್ ಟೈಟಾನ್ಸ್:
ಶುಭಮನ್ ಗಿಲ್(ನಾಯಕ), ವೃದ್ಧಿಮಾನ್ ಸಾಹ, ಡೇವಿಡ್ ಮಿಲ್ಲರ್, ಅಝ್ಮತುಲ್ಲಾ ಓವರ್‌ಝೈ, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ.
ಪಂದ್ಯ: ಸಂಜೆ. 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.