
ಕೋಲ್ಕತಾ(ಮಾ.23): ಬಂಪರ್ ಮೊತ್ತಕ್ಕೆ ಹರಾಜಾಗಿ ಎಲ್ಲರ ಹುಬ್ಬೇರಿಸಿದ್ದ ಆಸ್ಟ್ರೇಲಿಯಾ ವೇಗಿಗಳಾದ ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಈ ಬಾರಿ ಐಪಿಎಲ್‌ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಶನಿವಾರ ಕೋಲ್ಕತಾ ಹಾಗೂ ಹೈದರಾಬಾದ್ ಮುಖಾಮುಖಿಯಾಗಲಿದ್ದು, ಆಸೀಸ್ ತಾರೆಗಳ ಜೊತೆ ಕೋಲ್ಕತಾ ನಾಯಕ ಶ್ರೇಯಸ್ ಅಯ್ಯರ್ ಮೇಲೆ ಭಾರಿ ನಿರೀಕ್ಷೆ ಇದೆ.
ಕೋಲ್ಕತಾದಲ್ಲಿ ತಾರಾ ಆಟಗಾರರ ದಂಡೇ ಇದ್ದು, ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಕೀಬ್ ಅಲ್ ಹಸನ್ ಜೊತೆ ದೇಸಿ ಪ್ರತಿಭೆಗಳಾದ ಮನೀಶ್ ಪಾಂಡೆ, ರಿಂಕು ಸಿಂಗ್, ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ವರುಣ್ ಚಕ್ರವರ್ತಿ ಮೇಲೆ ನಿರೀಕ್ಷೆ ಇದೆ.
ಅತ್ತ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಐಪಿಎಲ್‌ನಲ್ಲಿ ಮೊದಲ ಬಾರಿ ನಾಯಕತ್ವ ವಹಿಸಲಿದ್ದಾರೆ. ಏಡನ್ ಮಾರ್ಕ್‌ರಮ್, ಟ್ರಾವಿಸ್ ಹೆಡ್, ಮಾರ್ಕೊ ಯಾನ್ಸನ್, ಗ್ಲೆನ್ ಫಿಲಿಪ್ಸ್, ಹೆನ್ರಿಚ್ ಕ್ಲಾಸೆನ್ ಜೊತೆ ಭಾರತದ ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್‌ವಾಲ್, ಅಭಿಶೇಕ್ ಶರ್ಮಾ, ಟಿ ನಟರಾಜನ್, ಉಮ್ರಾನ್ ಮಲಿಕ್ ಕೂಡಾ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದ್ದಾರೆ.
ಸಂಭವನೀಯ ಆಟಗಾರರ ಪಟ್ಟಿ
ಕೋಲ್ಕತಾ ನೈಟ್ ರೈಸರ್ಸ್:
ರೆಹಮನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್, ಶ್ರೇಯಸ್ ಅಯ್ಯರ್(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್, ಚೇತನ್ ಸಕಾರಿಯಾ, ವರುಣ್ ಚಕ್ರವರ್ತಿ, ವೈಭವ್.
ಸನ್‌ರೈಸರ್ಸ್ ಹೈದರಾಬಾದ್:
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಯ್ಡನ್ ಮಾರ್ಕ್‌ರಮ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ ಕಮಿನ್ಸ್(ನಾಯಕ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಶಾಬಾಜ್, ಟಿ ನಟರಾಜನ್, ಉಮ್ರಾನ್ ಮಲಿಕ್.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.