IPL 2024: ಡೆಲ್ಲಿ ಎದುರು ಟಾಸ್ ಗೆದ್ದ ಕೋಲ್ಕತಾ ಬ್ಯಾಟಿಂಗ್ ಆಯ್ಕೆ; ಉಭಯ ತಂಡದಲ್ಲೂ ಒಂದು ಬದಲಾವಣೆ

By Naveen Kodase  |  First Published Apr 3, 2024, 7:10 PM IST

ಐಪಿಎಲ್‌ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್, ಡೆಲ್ಲಿ ಎದುರು ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ. ಕೆಕೆಆರ್ ಪರ ಮೊದಲೆರಡು ಪಂದ್ಯಗಳಲ್ಲಿ ಮಿಚೆಲ್ ಸ್ಟಾರ್ಕ್ 100 ರನ್ ನೀಡಿದ್ದು, ಒಂದೇ ಒಂದು ವಿಕೆಟ್ ಕಬಳಿಸಲು ಕೂಡಾ ಸಾಧ್ಯವಾಗಿಲ್ಲ. ಇದು ಕೆಕೆಆರ್ ತಲೆನೋವು ಹೆಚ್ಚುವಂತೆ ಮಾಡಿದೆ. 


ವಿಶಾಖಪಟ್ಟಣಂ(ಏ.03): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಂಗ್‌ಕೃಷ್ ರಘುವಂಶಿ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಾಳು ಮುಕೇಶ್ ಕುಮಾರ್ ಬದಲಿಗೆ ಸುಮಿತ್ ತಂಡ ಕೂಡಿಕೊಂಡಿದ್ದಾರೆ.

Latest Videos

undefined

ರಿಷಭ್ ಪಂತ್ ಹೃದಯ ಕದ್ದ ಇಶಾ ನೇಗಿ..! ಇಲ್ಲಿದೆ ಕ್ಯೂಟ್ ಜೋಡಿಯ ಇಂಟ್ರೆಸ್ಟಿಂಗ್ ಲವ್ ಸ್ಟೋರಿ

ಐಪಿಎಲ್‌ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್, ಡೆಲ್ಲಿ ಎದುರು ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ. ಕೆಕೆಆರ್ ಪರ ಮೊದಲೆರಡು ಪಂದ್ಯಗಳಲ್ಲಿ ಮಿಚೆಲ್ ಸ್ಟಾರ್ಕ್ 100 ರನ್ ನೀಡಿದ್ದು, ಒಂದೇ ಒಂದು ವಿಕೆಟ್ ಕಬಳಿಸಲು ಕೂಡಾ ಸಾಧ್ಯವಾಗಿಲ್ಲ. ಇದು ಕೆಕೆಆರ್ ತಲೆನೋವು ಹೆಚ್ಚುವಂತೆ ಮಾಡಿದೆ. 

ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಭರ್ಜರಿ ಗೆಲುವು ಸಾಧಿಸಿದ್ದು, ಸದ್ಯ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇದೀಗ ಇದೇ ಮೈದಾನದಲ್ಲಿ ಕೆಕೆಆರ್‌ ಎದುರು ಸಂಘಟಿತ ಪ್ರದರ್ಶನ ನೀಡಲು ರಿಷಭ್ ಪಂತ್ ಪಡೆ ಎದುರು ನೋಡುತ್ತಿದೆ.

ಐಪಿಎಲ್‌ನಲ್ಲಿ ಮಿಂಚುತ್ತಿದ್ದಾರೆ ಅನ್‌ಕ್ಯಾಪ್ಡ್ ಪ್ಲೇಯರ್ಸ್..!

ಆಟಗಾರರ ಪಟ್ಟಿ ಹೀಗಿದೆ:

ಕೋಲ್ಕತಾ ನೈಟ್ ರೈಡರ್ಸ್:

ಫಿಲ್ ಸಾಲ್ಟ್, ಸುನಿಲ್ ನರೈನ್, ವೆಂಕಟೇಶ್‌ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್‌ ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಅನುಕೂಲ್ ರಾಯ್, ಹರ್ಷಿತ್‌ ರಾಣಾ, ಅಂಗ್ ಕೃಷ್.

ಡೆಲ್ಲಿ ಕ್ಯಾಪಿಟಲ್ಸ್:

ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಭ್ ಪಂತ್ (ನಾಯಕ), ಮಿಚೆಲ್ ಮಾರ್ಷ್, ಟ್ರಿಸ್ಟಿನ್ ಸ್ಟಬ್, ಅಕ್ಷ‌ರ್ ಪಟೇಲ್, ಅಭಿಷೇಕ್ ಪೊರೆಲ್, ಏನ್ರಿಚ್ ನೋಕಿಯ, ರಶಿಕ್ ಧರ್ , ಇಶಾಂತ್ ಶರ್ಮಾ, ಖಲೀಲ್ ಅಹಮ್ಮದ್.

ಪಂದ್ಯ: ಸಂಜೆ. 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
 

click me!