ಲಖನೌ ಹಾಗೂ ಕೆಕೆಆರ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಿಂಕು ಸಿಂಗ್ ಬದಲಿಗೆ ಹರ್ಷಿತ್ ರಾಣಾ ತಂಡ ಕೂಡಿಕೊಂಡಿದ್ದು, ಚೇಸಿಂಗ್ ವೇಳೆಗೆ ರಿಂಕು ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಕೋಲ್ಕತಾ(ಏ.14): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 28ನೇ ಪಂದ್ಯದಲ್ಲಿಂದು ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಲಖನೌ ಹಾಗೂ ಕೆಕೆಆರ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಿಂಕು ಸಿಂಗ್ ಬದಲಿಗೆ ಹರ್ಷಿತ್ ರಾಣಾ ತಂಡ ಕೂಡಿಕೊಂಡಿದ್ದು, ಚೇಸಿಂಗ್ ವೇಳೆಗೆ ರಿಂಕು ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
IPL 2024: ಲಖನೌ ಎದುರು ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ, ಉಭಯ ತಂಡದಲ್ಲಿ ಮೇಜರ್ ಚೇಂಜ್
ಇನ್ನು ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿದ್ದು, ಕಳೆದ ಕೆಲ ಪಂದ್ಯಗಳಲ್ಲಿ ಫಾರ್ಮ್ ಸಮಸ್ಯೆ ಎದುರಿಸಿದ್ದ ದೇವದತ್ ಪಡಿಕ್ಕಲ್ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ನವೀನ್ ಉಲ್ ಹಕ್ ಕೂಡಾ ಹೊರಬಿದ್ದಿದ್ದಾರೆ. ಇನ್ನು ಕೆರಿಬಿಯನ್ ವೇಗಿ ಶಮಾರ್ ಜೋಸೆಫ್, ದೀಪಕ್ ಹೂಡಾ ಹಾಗೂ ಮೊಯ್ಸಿನ್ ಖಾನ್ ತಂಡ ಕೂಡಿಕೊಂಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಒಟ್ಟು ಮೂರು ಬಾರಿ ಮುಖಾಮುಖಿಯಾಗಿದ್ದು, ಮೂರು ಪಂದ್ಯದಲ್ಲೂ ಲಖನೌ ಗೆಲುವಿನ ನಗೆ ಬೀರಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲುವಿನ ನಗೆ ಬೀರಲಿದೆ ಎನ್ನುವ ಕುತೂಹಲ ಜೋರಾಗಿದೆ.
2011ರ ವಿಶ್ವಕಪ್ ಟ್ರೋಫಿ ಮುಟ್ಟಿ ಭಾವುಕರಾದ ಕ್ಯಾಪ್ಟನ್ ಕೂಲ್ ಧೋನಿ!
ಉಭಯ ತಂಡಗಳ ಆಟಗಾರರ ಪಟ್ಟಿ
ಕೆಕೆಆರ್: ಫಿಲ್ ಸಾಲ್ಟ್, ಸುನಿಲ್ ನರೈನ್, ಅಂಗ್‌ಕೃಷ್ ರಘುವಂಶಿ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಆಂಡ್ರೆ ರಸೆಲ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ವೈಭವ್ ಅರೋರ.
ಲಖನೌ: ಕ್ವಿಂಟನ್ ಡಿ ಕಾಕ್, ಕೆ ಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಅರ್ಷದ್ ಖಾನ್, ಶಮಾರ್ ಜೋಸೆಫ್, ಯಶ್ ಠಾಕೂರ್, ಮೊಯ್ಸಿನ್ ಖಾನ್.
ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ