ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅನುಕೂಲ್ ರಾಯ್ ತಂಡ ಕೂಡಿಕೊಂಡಿದ್ದಾರೆ.
ಬೆಂಗಳೂರು(ಮಾ.29): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅನುಕೂಲ್ ರಾಯ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಕೋಲ್ಕತಾ ನೈಟ್ ರೈಡರ್ಸ್ ಪರ ಅಂಗ್‌ಕ್ರಿಶ್ ರಘುವಂಶಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ರಘುವಂಶಿ ಸಬ್‌ಸ್ಟಿಟ್ಯೂಟ್ ಆಟಗಾರನಾಗಿ ಕೆಕೆಆರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
RCB ಏನನ್ನೂ ಗೆದ್ದಿಲ್ಲ ಆದ್ರೆ ಎಲ್ಲವನ್ನೂ ಗೆದ್ದಂತೆ ವರ್ತಿಸುತ್ತಾರೆ: ಗೌತಮ್ ಗಂಭೀರ್
🚨 Toss 🚨 win the toss and elect to field against
Follow the Match ▶️ https://t.co/CJLmcs7aNa | pic.twitter.com/hUcwrrKilK
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂಜಾಬ್ ಕಿಂಗ್ಸ್ ಎದುರು ಕಣಕ್ಕಿಳಿದ ತಂಡವೇ ಕೆಕೆಆರ್ ಎದುರಿನ ಪಂದ್ಯಕ್ಕೆ ಕಣಕ್ಕಿಳಿದಿದೆ
2015ರ ಬಳಿಕ ಚಿನ್ನಸ್ವಾಮಿಯಲ್ಲಿ ಕೆಕೆಆರ್ ವಿರುದ್ಧ ಗೆದ್ದಿಲ್ಲ ಆರ್‌ಸಿಬಿ!
ಆರ್‌ಸಿಬಿ ತಂಡ ಕೆಕೆಆರ್ ವಿರುದ್ಧ 2015ರ ನಂತರ ಒಂದೂ ಪಂದ್ಯದಲ್ಲಿ ಗೆದ್ದಿಲ್ಲ. 2015ರ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಕೋಲ್ಕತಾವನ್ನು ಸೋಲಿಸಿತ್ತು. 2015ರ ಬಳಿಕ 2016, 2017, 2018, 2019 ಹಾಗೂ 2023ರಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಕೆಕೆಆರ್‌ಗೆ ಆರ್‌ಸಿಬಿ ಶರಣಾಗಿದೆ. ಈ ಬಾರಿ ಸೋಲಿನ ಸರಪಳಿ ಕಳಚಳು ಕಾಯುತ್ತಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್
ಕೆಕೆಆರ್: ಫಿಲ್ ಸಾಲ್ಟ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ರಿಂಕು ಸಿಂಗ್, ರಮನ್‌ದೀಪ್ ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಅನುಕೂಲ್ ರಾಯ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಪಂದ್ಯ ಆರಂಭ: ಸಂಜೆ 7.30ಕ್ಕೆ, ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಸಿನಿಮಾ.