2024ರ ಐಪಿಎಲ್ ಕ್ರಿಕೆಟ್ ಟೂರ್ನಿಗೆ ಡೇಟ್ ಫಿಕ್ಸ್..?

Published : Dec 19, 2023, 09:20 AM ISTUpdated : Dec 19, 2023, 01:06 PM IST
2024ರ ಐಪಿಎಲ್ ಕ್ರಿಕೆಟ್ ಟೂರ್ನಿಗೆ ಡೇಟ್ ಫಿಕ್ಸ್..?

ಸಾರಾಂಶ

ಸೋಮವಾರ ಬಿಸಿಸಿಐ ಹಾಗೂ ಐಪಿಎಲ್‌ ಆಡಳಿತ ಮಂಡಳಿಯು ಫ್ರಾಂಚೈಸಿಗಳ ಜೊತೆ ಸಭೆ ನಡೆಸಿದ್ದು, ಟೂರ್ನಿ ಆಯೋಜನೆ ಸಮಯದ ಬಗ್ಗೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಮಾರ್ಚ್‌ ಅಂತ್ಯಕ್ಕೆ ಅಥವಾ ಏಪ್ರಿಲ್‌ ಆರಂಭದಲ್ಲಿ ಟೂರ್ನಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ಒಂದು ವಾರ ಮೊದಲೇ ಟೂರ್ನಿ ಆರಂಭಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

ನವದೆಹಲಿ(ಡಿ.19): 17ನೇ ಆವೃತ್ತಿ ಐಪಿಎಲ್‌ 2024ರ ಮಾರ್ಚ್ 22ರಿಂದ ಆರಂಭಗೊಳ್ಳುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ 2024ರ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ಬಳಿಕವೇ ಟೂರ್ನಿಯ ಅಂತಿಮ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ.

ಸೋಮವಾರ ಬಿಸಿಸಿಐ ಹಾಗೂ ಐಪಿಎಲ್‌ ಆಡಳಿತ ಮಂಡಳಿಯು ಫ್ರಾಂಚೈಸಿಗಳ ಜೊತೆ ಸಭೆ ನಡೆಸಿದ್ದು, ಟೂರ್ನಿ ಆಯೋಜನೆ ಸಮಯದ ಬಗ್ಗೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಮಾರ್ಚ್‌ ಅಂತ್ಯಕ್ಕೆ ಅಥವಾ ಏಪ್ರಿಲ್‌ ಆರಂಭದಲ್ಲಿ ಟೂರ್ನಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ಒಂದು ವಾರ ಮೊದಲೇ ಟೂರ್ನಿ ಆರಂಭಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

IPL Auction 2024: RCBಯಿಂದ CSKವರೆಗೆ, ಯಾವ ಫ್ರಾಂಚೈಸಿ ಯಾವ ಆಟಗಾರನ ಮೇಲೆ ಕಣ್ಣಿಟ್ಟಿದೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಹಲವು ಪಂದ್ಯಗಳಿಗೆ ಹೇಜಲ್‌ವುಡ್ ಗೈರು

ಆಸೀಸ್‌ ವೇಗಿ ಜೋಶ್‌ ಹೇಜಲ್‌ವುಡ್‌ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಟೂರ್ನಿಯ ಹಲವು ಪಂದ್ಯಗಳಿಗೆ ಗೈರಾಗಲಿದ್ದಾರೆ. ಅವರು ಮೇ ತಿಂಗಳಲ್ಲಿ ಟೂರ್ನಿಗೆ ಮರಳಬಹುದು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇನ್ನು, ಆಸ್ಟ್ರೇಲಿಯಾ, ದ.ಆಫ್ರಿಕಾ, ಶ್ರೀಲಂಕಾ, ವೆಸ್ಟ್‌ಇಂಡೀಸ್‌ ಆಟಗಾರರು ಸಂಪೂರ್ಣ ಟೂರ್ನಿಗೆ ಲಭ್ಯವಿರುವುದಾಗಿಯೂ ಫ್ರಾಂಚೈಸಿಗಳಿಗೆ ಬಿಸಿಸಿಐ ಮಾಹಿತಿ ನೀಡಲಾಗಿದೆ. ಆದರೆ ಇಂಗ್ಲೆಂಡ್‌ ಆಟಗಾರರು ಸಂಪೂರ್ಣ ಐಪಿಎಲ್‌ಗೆ ಲಭ್ಯವಿರುವ ಬಗ್ಗೆ ಇನ್ನಷ್ಟೇ ಖಚಿತಗೊಳ್ಳಬೇಕಿದೆ.

ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ನಾಯಕರಾಗಿದ್ದು ಯಾರಿಗೂ ಇಷ್ಟವಿಲ್ವಾ..?

ಇಂದು ದುಬೈನಲ್ಲಿ ಐಪಿಎಲ್ ಆಟಗಾರರ ಹರಾಜು:

ಮಂಗಳವಾರವಾದ ಇಂದು ದುಬೈನಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1 ರಿಂದ ಐಪಿಎಲ್‌ ಆಟಗಾರರ ಹರಾಜು ನಡೆಯಲಿದೆ. ಈ ಹರಾಜಿನಲ್ಲಿ 214 ಭಾರತೀಯ ಆಟಗಾರರು ಸೇರಿದಂತೆ ಒಟ್ಟು 333 ಮಂದಿ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ. ಈ ಪೈಕಿ ಗರಿಷ್ಠ 77 ಮಂದಿ ಮಾತ್ರ ಬಿಕರಿಯಾಗಲಿದ್ದಾರೆ. ಇನ್ನು ಈ ಬಾರಿಯ ಹರಾಜಿನಲ್ಲಿ ಕರ್ನಾಟಕದ 11 ಮಂದಿ ಪಾಲ್ಗೊಂಡಿದ್ದಾರೆ.

ಈ ಬಾರಿಯ ಹರಾಜಿನಲ್ಲಿ ಪಾಲ್ಗೊಂಡಿರುವ ಕರ್ನಾಟಕದ ಆಟಗಾರರು ಇವರೇ ನೋಡಿ:

ಮನೀಶ್‌ ಪಾಂಡೆ

ಶುಭಾಂಗ್‌ ಹೆಗ್ಡೆ

ಚೇತನ್‌

ಬಿ.ಆರ್‌.ಶರತ್‌

ಕೆ.ಎಲ್‌.ಶ್ರೀಜಿತ್‌

ನಿಹಾಲ್‌ ಉಳ್ಳಾಲ

ವೆಂಕಟೇಶ್‌

ಮನ್ವಂತ್‌ ಕುಮಾರ್‌

ಮೋನಿಶ್‌

ಅಭಿಲಾಶ್‌ ಶೆಟ್ಟಿ

ಜೆ.ಸುಚಿತ್‌  
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು