ಪಂಜಾಬ್ ಕಿಂಗ್ಸ್ ವಿರುದ್ಧದ ತವರಿನ ಹೋರಾಟದಲ್ಲಿ ಲಖನೌ ಸೂಪರ್ ಜೈಂಟ್ಸ್ ಟಾಸ್ ಗೆದ್ದ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಲಖನೌ(ಮಾ.30) ಐಪಿಎಲ್ ವೀಕೆಂಡ್ ಹೋರಾಟದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದೆ. ಪಂಜಾಬ್ ಸೋಲು ಗೆಲುವಿನ ಮಿಶ್ರ ಫಲಿತಾಂಶ ಅನುಭವಿಸಿದ್ದರೆ, ಲಖನೌ ಗೆಲುವಿನ ಸಿಹಿ ಕಂಡಿಲ್ಲ. ಲಖನೌದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲು ನಿಕೋಲಸ್ ಪೂರನ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಕೆಎಲ್ ರಾಹುಲ್ ಗಾಯಕ್ಕೆ ತುತ್ತಾಗಿದ್ದಾರೆ. ರಾಹುಲ್‌ನ್ನು ಇಂಪಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿದೆ. ಹೀಗಾಗಿ ನಿಕೋಲಸ್ ಪೂರನ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
1500+ ಸಿಕ್ಸರ್ ಸಿಡಿಸಿ 2ನೇ ಸ್ಥಾನದಲ್ಲಿದ್ರೂ RCB ಕಪ್ ಗೆದ್ದಿಲ್ಲ, ಫಸ್ಟ್ ಪ್ಲೇಸಲ್ಲಿರೋ ತಂಡ ಕಪ್ ಗೆದ್ದಿದ್ಯಾ?
ಲಖನೌ ಪ್ಲೇಯಿಂಗ್ 11
ಕ್ವಿಂಟನ್ ಡಿಕಾಕ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ನಿಕೋಲಸ್ ಪೂರನ್(ನಾಯಕ), ಮಾರ್ಕಸ್ ಸ್ಟೊಯ್ನಿಸ್, ಕ್ರುನಾಲ್ ಪಾಂಡ್ಯ, ರವಿ ಬಿಶ್ನೋಯ್, ಮೊಹ್ಸಿನ್ ಖಾನ್, ಮಯಾಂಗ್ ಯಾದವ್, ಮಣಿಮಾರನ್ ಸಿದ್ದಾರ್ಥ್
ಲಖನೌ ಸೂಪರ್ ಜೈಂಟ್ಸ್ ತನ್ನ ಮೊದಲ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ವಿರುದ್ದ ಆಡಿತ್ತು. ಆದರೆ ಈ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಟಾರ್ಗೆಟ್ ಚೇಸ್ ಮಾಡಲು ವಿಫಲಾಗಿತ್ತು. ನಾಯಕ ಕೆಎಲ್ ರಾಹುಲ್ ಹಾಗೂ ನಿಕೋಲಸ್ ಪೂರನ್ ಹೊರತುಪಡಿಸಿ ಇನ್ನುಳಿದ ಆಟಗಾರರಿಂದ ರನ್ ಹರಿದು ಬರಲಿಲ್ಲ. ಹೀಗಾಗಿ 20 ರನ್‌ಗಳಿಂದ ಪಂದ್ಯ ಸೋತಿತ್ತು.
ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಅಬ್ಬರಿಸಿದ್ದ ಪಂಜಾಬ್ 4 ವಿಕೆಟ್ ಗೆಲುವು ದಾಖಲಿಸಿತ್ತು ಸಂಭ್ರಮಿಸಿತ್ತು. ಮೊದಲ ಗೆಲುವಿನ ಖುಷಿಯಲ್ಲಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶಾಕ್ ನೀಡಿತ್ತು. ಬೆಂಗಳೂರಿನಲ್ಲಿ ನಡೆದ ಈ ಪಂದ್ಯದಲ್ಲಿ ಪಂಜಾಬ್ ಮುಗ್ಗರಿಸಿತ್ತು. ಆಡಿದ 2 ಪಂದ್ಯದಲ್ಲಿ 1ರಲ್ಲಿ ಗೆಲುವು ಮತ್ತೊಂದರಲ್ಲಿ ಸೋಲು ಕಂಡಿದೆ.
KKR ಎದುರು ಆರ್‌ಸಿಬಿ ಸೋಲಿಗೆ ಕಾರಣಗಳೇನು..? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ 5ನೇ ಸ್ಥಾನದಲ್ಲಿದೆ. ಇತ್ತ ಲಖನೌ ಕೊನೆಯ ಸ್ಥಾನದಲ್ಲಿದೆ. ಲಖನೌ ಮೊದಲ ಗೆಲುವಿಗೆ ಹಾತೊರೆಯುತ್ತಿದ್ದರೆ, ಪಂಜಾಬ್ ಗೆಲುವಿನ ಟ್ರಾಕ್‌ಗೆ ಮರಳಲು ಪ್ರಯತ್ನಿಸುತ್ತಿದೆ. ಹೀಗಾಗಿ ಲಖನೌ ಕ್ರೀಡಾಂಗಣದಲ್ಲಿ ರೋಚಕ ಹೋರಾಟ ನಿರೀಕ್ಷಿಸಲಾಗಿದೆ.