ಚೆನ್ನೈ ಹಾಗೂ ಲಖನೌ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಲಖನೌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಚೆನ್ನೈ ಎದುರು ಕಣಕ್ಕಿಳಿದಿದೆ.
ಚೆನ್ನೈ(ಏ.23): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿಂದು ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಚೆನ್ನೈ ತಂಡ ಈ ಬಾರಿ ತವರಿನಲ್ಲಿ 3 ಪಂದ್ಯಗಳನ್ನಾಡಿದ್ದು, ಮೂರರಲ್ಲೂ ಗೆದ್ದಿದೆ. ಇದೀಗ ತವರಿನಲ್ಲಿ ಋತುರಾಜ್ ಗಾಯಕ್ವಾಡ್ ಪಡೆ ತಮ್ಮ ಗೆಲುವಿನ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.
ಚೆನ್ನೈ ಹಾಗೂ ಲಖನೌ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಲಖನೌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಚೆನ್ನೈ ಎದುರು ಕಣಕ್ಕಿಳಿದಿದೆ. ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಚಿನ್ ರವೀಂದ್ರ ಬದಲಿಗೆ ಡ್ಯಾರೆಲ್ ಮಿಚೆಲ್ ತಂಡ ಕೂಡಿಕೊಂಡಿದ್ದಾರೆ.
🚨 Toss Update 🚨
Lucknow Super Giants elect to bowl against Chennai Super Kings.
Follow the Match ▶️ https://t.co/MWcsF5F8yE | pic.twitter.com/hJNWN7OzOV
T20 World Cup 2024: ಟೀಂ ಇಂಡಿಯಾದಲ್ಲಿ ಒಂದು ಸ್ಥಾನಕ್ಕಾಗಿ 6 ವಿಕೆಟ್ ಕೀಪರ್ ನಡುವೆ ಫೈಟ್..!
ಕಳೆದ ಪಂದ್ಯದಲ್ಲಿ ಚೆನ್ನೈ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಲಖನೌ ಈಗ ಮತ್ತೊಂದು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ ಚೆನ್ನೈ ಕ್ರೀಡಾಂಗಣದಲ್ಲಿ ಗೆಲ್ಲುವುದು ಎಷ್ಟು ಕಷ್ಟ ಎಂಬುದು ಲಖನೌಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಇಂದಿನ ಪಂದ್ಯ ಕೂಡಾ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್(ನಾಯಕ), ಅಜಿಂಕ್ಯ ರಹಾನೆ, ಡ್ಯಾರೆಲ್ ಮಿಚೆಲ್, ಮೊಯೀನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂ ಎಸ್ ಧೋನಿ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮಥೀಶ್ ಪತಿರನ.
ಲಖನೌ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆ ಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಮ್ಯಾಟ್ ಹೆನ್ರಿ, ಯಶ್ ಠಾಕೂರ್.
ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ