ಲಖನೌ ಹಾಗೂ ಮುಂಬೈ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಏಕಾನ ಸ್ಟೇಡಿಯಂ ಆತಿಥ್ಯ ವಹಿಸಿದೆ. ಲಖನೌ ತಂಡದಲ್ಲಿ ಕೆಲವು ಬದಲಾವಣೆಗಳಾಗಿದ್ದು, ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಮಾರಕ ವೇಗಿ ಮಯಾಂಕ್ ಯಾದವ್ ಹಾಗೂ ಧವಳ್ ಕುಲಕರ್ಣಿ ತಂಡ ಕೂಡಿಕೊಂಡಿದ್ದಾರೆ.
ಲಖನೌ(ಏ.30): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 48ನೇ ಪಂದ್ಯದಲ್ಲಿಂದು ಆತಿಥೇಯ ಲಖನೌ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ಲೇ ಆಫ್ ಪ್ರವೇಶಿಸುವ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಪಂದ್ಯ ಸಾಕಷ್ಟು ಮಹತ್ವದ್ದೆನಿಸಿದೆ.
ಲಖನೌ ಹಾಗೂ ಮುಂಬೈ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಏಕಾನ ಸ್ಟೇಡಿಯಂ ಆತಿಥ್ಯ ವಹಿಸಿದೆ. ಲಖನೌ ತಂಡದಲ್ಲಿ ಕೆಲವು ಬದಲಾವಣೆಗಳಾಗಿದ್ದು, ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಮಾರಕ ವೇಗಿ ಮಯಾಂಕ್ ಯಾದವ್ ಹಾಗೂ ಧವಳ್ ಕುಲಕರ್ಣಿ ತಂಡ ಕೂಡಿಕೊಂಡಿದ್ದಾರೆ.
ಮತ್ತೊಮ್ಮೆ ವಿಶ್ವಕಪ್ ಗೆಲ್ಲಲು ಇಂಗ್ಲೆಂಡ್ ಟೀಂ ರೆಡಿ; ಆಂಗ್ಲರ ಪಡೆಯಲ್ಲಿ ಇಬ್ಬರು ಆರ್‌ಸಿಬಿ ಆಟಗಾರರಿಗೆ ಸ್ಥಾನ..!
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದೆ. ಇನ್ನುಳಿದ ಎಲ್ಲಾ ಪಂದ್ಯದಲ್ಲಿ ಗೆದ್ದರಷ್ಟೇ ತಂಡ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲಿದ್ದು, ಸೋತರೆ ರೇಸ್‌ನಿಂದ ಹೊರಬೀಳುವುದು ಖಚಿತ. ಹೀಗಾಗಿ ಸುಧಾರಿತ ಪ್ರದರ್ಶನ ನೀಡಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.
ಮತ್ತೊಂದೆಡೆ ಲಖನೌ ಆಡಿರುವ 9ರಲ್ಲಿ 5 ಪಂದ್ಯ ಗೆದ್ದಿದೆ. ಈ ಪಂದ್ಯದಲ್ಲಿ ಗೆದ್ದರೆ ತಂಡದ ಪ್ಲೇ-ಆಫ್ ಹಾದಿ ಸುಲಭವಾಗಲಿದ್ದು, ಸೋತರೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಲಿದೆ.
ಉಭಯ ತಂಡಗಳ ಆಟಗಾರ ಪಟ್ಟಿ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ಪೀಯೂಸ್ ಚಾವ್ಲಾ, ಗೆರಾರ್ಲ್ಡ್ ಕೋಟ್ಜೀ, ಜಸ್ಪ್ರೀತ್ ಬುಮ್ರಾ.
ಲಖನೌ ಸೂಪರ್ ಜೈಂಟ್ಸ್: ಕೆ ಎಲ್ ರಾಹುಲ್(ನಾಯಕ), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಸ್ಟನ್ ಟರ್ನರ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ನವೀನ್ ಉಲ್ ಹಕ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.
ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ