ಟೂರ್ನಿ ಆರಂಭಕ್ಕೂ ಮುನ್ನ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ, ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದರು. ಇನ್ನು ಈ ಶಾಕ್‌ನಿಂದ ಹೊರಬರುವ ಮುನ್ನವೇ ಟೈಟಾನ್ಸ್‌ಗೆ ಮತ್ತೊಂದು ಶಾಕ್ ಕಾದಿದ್ದು. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ, ಗಾಯದ ಸಮಸ್ಯೆಯಿಂದಾಗಿ ಸರ್ಜರಿಗೆ ಒಳಗಾಗಿ ಸಂಪೂರ್ಣ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ
ಬೆಂಗಳೂರು(ಮಾ.08): ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಮಾರ್ಚ್ 22ರಿಂದ ಆರಂಭವಾಗಲಿದೆ. ಈ ಹೈವೋಲ್ಟೇಜ್ ಟೂರ್ನಿಯನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಗುಜರಾತ್ ಟೈಟಾನ್ಸ್ ಪಾಲಿಗೆ ಪದೇ ಪದೇ ಶಾಕ್ ಎದುರಾಗುತ್ತಿದೆ.
ಟೂರ್ನಿ ಆರಂಭಕ್ಕೂ ಮುನ್ನ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ, ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದರು. ಇನ್ನು ಈ ಶಾಕ್‌ನಿಂದ ಹೊರಬರುವ ಮುನ್ನವೇ ಟೈಟಾನ್ಸ್‌ಗೆ ಮತ್ತೊಂದು ಶಾಕ್ ಕಾದಿದ್ದು. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ, ಗಾಯದ ಸಮಸ್ಯೆಯಿಂದಾಗಿ ಸರ್ಜರಿಗೆ ಒಳಗಾಗಿ ಸಂಪೂರ್ಣ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದೆಲ್ಲದರ ನಡುವೆ ಗಾಯದ ಮೇಲೆ ಬರೆ ಎಳೆದಂತೆ ಟೈಟಾನ್ಸ್‌ನ ಪ್ರತಿಭಾನ್ವಿತ ಕ್ರಿಕೆಟಿಗ ರಾಬಿನ್ ಮಿನ್ಜು ಕೂಡಾ ಇತ್ತೀಚೆಗಷ್ಟೇ ರಸ್ತೆ ಅಪಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ರಾಬಿನ್ ಮಿನ್ಜು ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಹರಾಜಿನಲ್ಲಿ 3.6 ಕೋಟಿ ರುಪಾಯಿ ನೀಡಿ ಖರೀದಿಸಿತ್ತು.
undefined
Dharamsala Test: ಸಚಿನ್ ತೆಂಡುಲ್ಕರ್ ಅಪರೂಪದ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ..!
ಟೂರ್ನಿ ಆರಂಭಕ್ಕೂ ಮುನ್ನ ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾ ಬಂದಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ತಂಡದ ಸ್ಪೋಟಕ ಬ್ಯಾಟರ್ ಮ್ಯಾಥ್ಯೂ ವೇಡ್ ಆರಂಭಿಕ ಐಪಿಎಲ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೌದು, ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್, ಗುಜರಾತ್ ಟೈಟಾನ್ಸ್ ಆಡಲಿರುವ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಮಾರ್ಚ್ 21ರಿಂದ 25ರ ವರೆಗೆ ವೇಡ್ ಶೆಫೀಲ್ಡ್ ಶೀಲ್ಡ್ ಫೈನಲ್ ಪಂದ್ಯ ನಡೆಯಲಿದ್ದ, ವೇಡ್ ಟಾಸ್ಮೇನಿಯಾ ತಂಡದ ಪರ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 22ರಿಂದ ಆರಂಭವಾಗಲಿದ್ದು, ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
ಶಿವಮೊಗ್ಗದ ಹಳ್ಳಿ ಹುಡುಗ ಗಗನ್ ಗೌಡ ಯುಪಿ ಯೋಧಾಸ್ ಫ್ರಾಂಚೈಸಿ ಕಣ್ಣಿಗೆ ಬಿದ್ದಿದ್ದು ಹೇಗೆ?
ಇನ್ನು ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮಾರ್ಚ್ 24ರಂದು ತವರಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ವೇಡ್ ಅನುಪಸ್ಥಿತಿ ಟೈಟಾನ್ಸ್ ತಂಡವನ್ನು ಕಾಡುವ ಸಾಧ್ಯತೆ ಕಡಿಮೆ. ಯಾಕೆಂದರೆ ಟೈಟಾನ್ಸ್ ತಂಡದಲ್ಲಿ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ವೃದ್ದಿಮಾನ್ ಸಾಹ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. 2022ರ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ಆವೃತ್ತಿಯಲ್ಲಿ ವೇಡ್ 10 ಪಂದ್ಯಗಳನ್ನಾಡಿದ್ದರು. ಆದರೆ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವೇಡ್, ಟೈಟಾನ್ಸ್ ಪರ ಒಂದೇ ಒಂದು ಪಂದ್ಯವನ್ನಾಡಿರಲಿಲ್ಲ.