ಹ್ಯಾಟ್ರಿಕ್ ಸೋಲಿನ ಬಳಿಕ ತವರಿನಲ್ಲಿ ಕಳೆದೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ತೋರಿ ಗೆಲುವು ಸಂಪಾದಿಸಿರುವ ಮುಂಬೈ ಇಂಡಿಯನ್ಸ್, ಈಗ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಇನ್ನು ತವರಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಸಿಎಸ್‌ಕೆ, ತವರಿನಾಚೆ ಆಡಿರುವ ಎರಡೂ ಪಂದ್ಯಗಳನ್ನು ಸೋತಿದೆ. ಹೀಗಾಗಿ, ಈ ಪಂದ್ಯ ಚೆನ್ನೈಗೆ ಮಹತ್ವದೆನಿಸಿದೆ.
ಮುಂಬೈ(ಏ.14): ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಭಾನುವಾರ ವಾಂಖೇಡೆ ಕ್ರೀಡಾಂಗಣದಲ್ಲಿ ಸೆಣಸಲಿವೆ. ಬದ್ಧವೈರಿಗಳ ನಡುವಿನ ಈ ಕಾದಾಟ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದು, ಉಭಯ ತಂಡಗಳು ಮತ್ತೊಂದು ಭರ್ಜರಿ ಗೆಲುವಿಗಾಗಿ ಎದುರು ನೋಡುತ್ತಿವೆ.
ಹ್ಯಾಟ್ರಿಕ್ ಸೋಲಿನ ಬಳಿಕ ತವರಿನಲ್ಲಿ ಕಳೆದೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ತೋರಿ ಗೆಲುವು ಸಂಪಾದಿಸಿರುವ ಮುಂಬೈ ಇಂಡಿಯನ್ಸ್, ಈಗ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಇನ್ನು ತವರಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಸಿಎಸ್‌ಕೆ, ತವರಿನಾಚೆ ಆಡಿರುವ ಎರಡೂ ಪಂದ್ಯಗಳನ್ನು ಸೋತಿದೆ. ಹೀಗಾಗಿ, ಈ ಪಂದ್ಯ ಚೆನ್ನೈಗೆ ಮಹತ್ವದೆನಿಸಿದೆ.
IPL 2024: ಕೆಕೆಆರ್‌ಗೆ ತವರಲ್ಲಿಂದು ಲಖನೌ ಜೈಂಟ್ಸ್ ಸವಾಲು..!
ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಹಾರ್ದಿಕ್ ಪಾಂಡ್ಯರಂತಹ ವಿಸ್ಫೋಟಕ ಬ್ಯಾಟರ್‌ಗಳ ಎದುರು ದೀಪಕ್ ಚಹರ್, ಮುಸ್ತಾಫಿಜುರ್ ರೆಹಮಾನ್, ರವೀಂದ್ರ ಜಡೇಜಾ ಎಷ್ಟು ಪರಿಣಾಮಕಾರಿಯಾಗಬಲ್ಲರು ಎನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ.
ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಒಟ್ಟು 36 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ ಕೊಂಚ ಮೇಲುಗೈ ಸಾಧಿಸಿದೆ. 36 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ 20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 16 ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ.
2011ರ ವಿಶ್ವಕಪ್ ಟ್ರೋಫಿ ಮುಟ್ಟಿ ಭಾವುಕರಾದ ಕ್ಯಾಪ್ಟನ್ ಕೂಲ್ ಧೋನಿ!
ಸಂಭವನೀಯ ಆಟಗಾರರ ಪಟ್ಟಿ
ಮುಂಬೈ: ಇಶಾನ್ ಕಿಶನ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮ್ಯಾರಿಯೋ ಶೆಫರ್ಡ್, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಗೆರಾಲ್ಡ್ ಕೋಟ್ಝೀ, ಆಕಾಶ್ ಮಧ್ವಾಲ್.
ಚೆನ್ನೈ: ಋತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಶಿವಂ ದುಬೆ, ಡ್ಯಾರೆಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂ ಎಸ್ ಧೋನಿ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ, ಮುಸ್ತಾಫಿಜುರ್.
ಪಂದ್ಯ ಆರಂಭ: ಸಂಜೆ 7.30ಕ್ಕೆ, ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ