ಸದ್ಯ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನೊಂದೆಡೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿದ 4 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮೂರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಮುಂಬೈ: ಹ್ಯಾಟ್ರಿಕ್ ಸೋಲಿನೊಂದಿಗೆ 17ನೇ ಆವೃತ್ತಿ ಐಪಿಎಲ್ ಅಭಿಯಾನ ಆರಂಭಿಸಿರುವ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮೊದಲ ಗೆಲುವಿನ ಹುಡುಕಾಟದಲ್ಲಿದ್ದು, ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದೆ. ಡೆಲ್ಲಿ ಕೂಡಾ ಸೋಲಿನ ಸುಳಿಯಲ್ಲಿ ಸಿಲುಕಿದ್ದು, ಜಯದ ಹಳಿಗೆ ಮರಳುವ ಕಾತರದಲ್ಲಿದೆ.
ಇತ್ತಂಡಗಳೂ 3 ಪಂದ್ಯಗಳಲ್ಲಿ ಸೋಲನುಭವಿಸಿವೆ. ಮುಂಬೈ ಇಂಡಿಯನ್ಸ್ ಎಲ್ಲಾ ವಿಭಾಗದಲ್ಲೂ ವಿಫಲವಾಗಿದ್ದು, ಸುಧಾರಿತ ಪ್ರದರ್ಶನ ಅಗತ್ಯವಿದೆ. ಸೂರ್ಯಕುಮಾರ್‌ತಂಡಕ್ಕೆ ಮರಳಿರುವುದು ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಲಿದೆ. ಅಭಿಮಾನಿಗಳಿಂದಲೂ ಭಾರಿ ಟೀಕೆಗೊಳಗಾಗುತ್ತಿರುವ ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ಆಟದ ಮೂಲಕ ಎಲ್ಲರ ಬಾಯಿ ಮುಚ್ಚಿಸಬೇಕಿದೆ. ರೋಹಿತ್, ಇಶಾನ್ ರಿಂದ ತಂಡ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸುತ್ತಿದೆ.
undefined
ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಕೋಲ್ಕತಾ ವಿರುದ್ಧ 106 ರನ್ ಸೋಲನುಭವಿಸಿತ್ತು. ಪಂತ್ ಸತತ 2 ಅರ್ಧಶತಕ ಬಾರಿಸಿದ್ದರೂ ಇತರರಿಂದ ಸೂಕ್ತ ಬೆಂಬಲದ ನಿರೀಕ್ಷೆಯಲ್ಲಿದ್ದಾರೆ. ಮೊನಚು ಕಳೆದುಕೊಂಡಿರುವ ಬೌಲಿಂಗ್ ವಿಭಾಗಕ್ಕೆ ಮತ್ತೆ ಭಾರಿ ಸವಾಲು ಎದುರಾಗುವುದು ಖಚಿತ.
ಸದ್ಯ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನೊಂದೆಡೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿದ 4 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮೂರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಸಂಭವನೀಯ ಆಟಗಾರರ ಪಟ್ಟಿ ಹೀಗಿದೆ:
ಮುಂಬೈ ಇಂಡಿಯನ್ಸ್:
ಹಾರ್ದಿಕ್ ಪಾಂಡ್ಯ(ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೇವಿಸ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಗೆರಾಲ್ಡ್ ಕೋಟ್ಜೀ, ಆಕಾಶ್ ಮಧ್ವಾಲ್, ಜಸ್ಪ್ರೀತ್ ಬುಮ್ರಾ, ಪೀಯೂಸ್ ಚಾವ್ಲಾ. ಕ್ವೆನಾ ಮಫಾಕಾ.
ಡೆಲ್ಲಿ ಕ್ಯಾಪಿಟಲ್ಸ್:
ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಭ್ ಪಂತ್(ನಾಯಕ & ವಿಕೆಟ್ ಕೀಪರ್), ಟ್ರಿಸ್ಟಿನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಕ್ ಧರ್ ಸಲಮ್, ಏನ್ರಿಚ್ ನೋಕಿಯ, ಇಶಾಂತ್ ಶರ್ಮಾ, ಖಲೀಲ್ ಅಹಮ್ಮದ್, ಜೇಕ್ ಪ್ರೇಸರ್ ಮೆಕ್‌ಗುರ್ಕ್.
ಪಂದ್ಯ: ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ