ಕೆಕೆಆರ್-ಮುಂಬೈ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

By Naveen Kodase  |  First Published May 11, 2024, 9:07 PM IST

ಮುಂಬೈ ಹಾಗೂ ಕೆಕೆಆರ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದಿದೆ.


ಕೋಲ್ಕತಾ(ಮೇ.11): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 60ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದರಿಂದ ಈ ಪಂದ್ಯವನ್ನು 16 ಓವರ್‌ಗಳಿಗೆ ಸೀಮಿತ ಮಾಡಲಾಗಿದೆ

ಮುಂಬೈ ಹಾಗೂ ಕೆಕೆಆರ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದಿದೆ. ಇನ್ನೊಂದೆಡೆ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಘುವಂಶಿ ಬದಲಿಗೆ ನಿತೀಶ್ ರಾಣಾ ತಂಡ ಕೂಡಿಕೊಂಡಿದ್ದಾರೆ.

🚨 Toss Update 🚨

Mumbai Indians elect to bowl against Kolkata Knight Riders.

Follow the Match ▶️ https://t.co/4BkBwLMkq0 | pic.twitter.com/TYcl4kXeks

— IndianPremierLeague (@IPL)

Tap to resize

Latest Videos

16 ಓವರ್‌ಗಳ ಪಂದ್ಯದ ನಿಯಮಾವಳಿಗಳು:

* ಒಬ್ಬ ಬೌಲರ್ ಗರಿಷ್ಠ 4 ಓವರ್ ಬೌಲಿಂಗ್ ಮಾಡಲು ಅವಕಾಶ
* ನಾಲ್ಕು ಬೌಲರ್‌ಗಳು ಗರಿಷ್ಠ 3 ಓವರ್ ಬೌಲಿಂಗ್ ಮಾಡಲು ಅವಕಾಶ
* ಪವರ್‌ ಪ್ಲೇ ಮೊದಲ ಓವರ್‌ನಿಂದ ಐದನೇ ಓವರ್‌ವರೆಗೂ ಇರಲಿದೆ

ಕೋಲ್ಕತಾ ಈ ವರೆಗೆ 11 ಪಂದ್ಯಗಳನ್ನಾಡಿದ್ದು, 8ರಲ್ಲಿ ಗೆಲುವು ಸಾಧಿಸಿದೆ. 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ತಂಡ ಉತ್ತಮ ನೆಟ್‌ರನ್‌ ರೇಟ್‌ ಕೂಡಾ ಹೊಂದಿದ್ದು, ಪ್ಲೇ-ಆಫ್‌ಗೇರುವುದು ಬಹುತೇಕ ಖಚಿತ. ಈ ಪಂದ್ಯ ಜಯಿಸಿದರೆ ಮೊದಲ ತಂಡವಾಗಿ ಅಧಿಕೃತವಾಗಿ ಕೆಕೆಆರ್ ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ.

ಅತ್ತ 5 ಬಾರಿ ಚಾಂಪಿಯನ್‌ ಮುಂಬೈ 12ರಲ್ಲಿ ಕೇವಲ 4 ಪಂದ್ಯಗಳನ್ನು ಗೆದ್ದಿದ್ದು, ನಾಕೌಟ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಕೋಲ್ಕತಾ ವಿರುದ್ಧದ ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಇನ್ನುಳಿದ 2 ಪಂದ್ಯಗಳನ್ನೂ ಗೆದ್ದು ಅಂಕಪಟ್ಟಿಯಲ್ಲಿ ಮೇಲೇರುವುದು ತಂಡದ ಮುಂದಿರುವ ಗುರಿ. 

ಉಭಯ ತಂಡಗಳ ಆಟಗಾರರ ಪಟ್ಟಿ

ಕೋಲ್ಕತಾ: ಫಿಲ್ ಸಾಲ್ಟ್‌, ಸುನಿಲ್ ನರೈನ್‌, ನಿತೀಶ್ ರಾಣಾ, ಶ್ರೇಯಸ್‌ ಅಯ್ಯರ್(ನಾಯಕ), ವೆಂಕಟೇಶ್‌ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್‌, ರಮನ್‌ದೀಪ್‌ ಸಿಂಗ್, ಮಿಚೆಲ್ ಸ್ಟಾರ್ಕ್‌, ವರುಣ್‌ ಚಕ್ರವರ್ತಿ, ಹರ್ಷಿತ್‌ ರಾಣಾ.

ಮುಂಬೈ: ಇಶಾನ್‌ ಕಿಶನ್, ರೋಹಿತ್‌ ಶರ್ಮಾ, ನಮನ್‌, ಸೂರ್ಯಕುಮಾರ್ ಯಾದವ್, ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ(ನಾಯಕ), ಟಿಮ್ ಡೇವಿಡ್‌, ಅನ್ಶುಲ್‌, ಪೀಯೂಸ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

ಪಂದ್ಯ: ರಾತ್ರಿ 9.15 ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
 

click me!