ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಿದ್ದರೆ ಎರಡೂ ತಂಡಗಳಿಗೆ ಗೆಲುವು ಅನಿವಾರ್ಯವಾಗಿದೆ. ಗುಜರಾತ್ ತಂಡ ರಶೀದ್ ಖಾನ್ ಮೇಲೆ ಅತಿಯಾಗಿ ಅವಲಂಬಿತಗೊಂಡಿದ್ದರೆ, ಶಶಾಂಕ್ ಸಿಂಗ್ ಹಾಗೂ ಅಶುತೋಷ್ ಶರ್ಮಾರನ್ನು ಪಂಜಾಬ್ ನೆಚ್ಚಿಕೊಂಡಿದೆ.
ಮುಲ್ಲಾನ್‌ಪುರ್(ಏ21): ಸತತ ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಭಾನುವಾರ ಪರಸ್ಪರ ಎದುರಾಗಲಿದ್ದು, ಗೆಲುವಿನ ಹಳಿಗೆ ಮರಳಲು ಹಪಹಪಿಸುತ್ತಿವೆ. ಪಂಜಾಬ್ ಸತತ 3 ಸೋಲು ಅನುಭವಿಸಿ, ಒಟ್ಟಾರೆ ಕೇವಲ 2 ಜಯಗಳೊಂದಿಗೆ 9ನೇ ಸ್ಥಾನದಲ್ಲಿದ್ದರೆ, ಕಳೆದ 4 ಪಂದ್ಯಗಳಲ್ಲಿ 3ರಲ್ಲಿ ಸೋತಿರುವ ಗುಜರಾತ್ 8ನೇ ಸ್ಥಾನದಲ್ಲಿ ಬಾಕಿಯಾಗಿದೆ.
ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಿದ್ದರೆ ಎರಡೂ ತಂಡಗಳಿಗೆ ಗೆಲುವು ಅನಿವಾರ್ಯವಾಗಿದೆ. ಗುಜರಾತ್ ತಂಡ ರಶೀದ್ ಖಾನ್ ಮೇಲೆ ಅತಿಯಾಗಿ ಅವಲಂಬಿತಗೊಂಡಿದ್ದರೆ, ಶಶಾಂಕ್ ಸಿಂಗ್ ಹಾಗೂ ಅಶುತೋಷ್ ಶರ್ಮಾರನ್ನು ಪಂಜಾಬ್ ನೆಚ್ಚಿಕೊಂಡಿದೆ.
ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಒಟ್ಟು 4 ಬಾರಿ ಮುಖಾಮುಖಿಯಾಗಿದ್ದು, ಉಭಯ ತಂಡಗಳು ತಲಾ ಎರಡು ಬಾರಿ ಗೆಲುವಿನ ನಗೆ ಬೀರಿದೆ. ಇಂದಿನ ಪಂದ್ಯದಲ್ಲಿ ಯಾವ ತಂಡದ ಕೈ ಮೇಲಾಗಲಿದೆ ಎನ್ನುವ ಕುತೂಹಲ ಜೋರಾಗಿದೆ.
ಸಂಭವನೀಯ ಆಟಗಾರರ ಪಟ್ಟಿ ಹೀಗಿದೆ ನೋಡಿ:
ಪಂಜಾಬ್ ಕಿಂಗ್ಸ್:
ಪ್ರಭಸಿಮ್ರನ್ ಸಿಂಗ್, ರಿಲೇ ರೂಸ್ಸೌ, ಸ್ಯಾಮ್ ಕರ್ರನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಆಶುತೋಷ್ ಶರ್ಮಾ, ಹಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೋ ರಬಾಡ, ಆರ್ಶದೀಪ್ ಸಿಂಗ್.
ಗುಜರಾತ್ ಟೈಟಾನ್ಸ್:
ಶುಭ್‌ಮನ್ ಗಿಲ್(ನಾಯಕ), ವೃದ್ದಿಮಾನ್ ಸಾಹ(ವಿಕೆಟ್ ಕೀಪರ್), ಸಾಯಿ ಸುದರ್ಶನ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹಮದ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ