ಟಿ20 ವಿಶ್ವಕಪ್ ದೃಷ್ಟಿಯಲ್ಲಿ ಐಪಿಎಲ್‌ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿಯೇ ಆಡುತ್ತಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ ತಮ್ಮ ಸ್ಟ್ರೈಕ್‌ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಿದೆ.
ಲಖನೌ(ಮಾ.30): ಆಲ್ರೌಂಡರ್‌ಗಳ ಬಲದೊಂದಿಗೆ 17ನೇ ಆವೃತ್ತಿ ಐಪಿಎಲ್‌ನಲ್ಲಿ ಕಣಕ್ಕಿಳಿದರೂ ಸೋಲಿನೊಂದಿಗೆ ಅಭಿಯಾನ ಆರಂಭಿಸಿರುವ ಲಖನೌ ಸೂಪರ್ ಜೈಂಟ್ಸ್ ಮೊದಲ ಗೆಲುವಿನ ಕಾತರದಲ್ಲಿದ್ದು, ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಆರಂಭಿಕ ಪಂದ್ಯದಲ್ಲಿ ಗೆದ್ದ ಹೊರತಾಗಿಯೂ ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಪರಾಭವಗೊಂಡಿರುವ ಪಂಜಾಬ್ ಕೂಡಾ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ.
ಟಿ20 ವಿಶ್ವಕಪ್ ದೃಷ್ಟಿಯಲ್ಲಿ ಐಪಿಎಲ್‌ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿಯೇ ಆಡುತ್ತಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ ತಮ್ಮ ಸ್ಟ್ರೈಕ್‌ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಿದೆ. ಮಾರ್ಕ್ ವುಡ್, ಡೇವಿಡ್ ವಿಲ್ಲಿ ಅನುಪಸ್ಥಿತಿಯಲ್ಲಿ ಲಖನೌ ಬೌಲಿಂಗ್ ವಿಭಾಗ ಸೊರಗಿದಂತೆ ಕಾಣುತ್ತಿದೆ. ದೇವದತ್ ಪಡಿಕ್ಕಲ್, ಆಯುಶ್ ಬದೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ ಮೇಲೆ ತಂಡಕ್ಕೆ ಹೆಚ್ಚಿನ ನಿರೀಕ್ಷೆಯಿದ್ದು, ಮಾರ್ಕಸ್ ಸ್ಟೋಯ್ನಿಸ್ ಅಬ್ಬರಿಸಬೇಕಾದ ಅಗತ್ಯವಿದೆ.
undefined
ಮುನಿಸು ಮರೆತು ಒಂದಾದ ಕೊಹ್ಲಿ-ಗಂಭೀರ್ ಜೋಡಿ..! ವಿಡಿಯೋ ವೈರಲ್
ಮತ್ತೊಂದೆಡೆ ಶಿಖರ್ ಧವನ್ ನಾಯಕತ್ವದ ಪಂಜಾಬ್ ವಿದೇಶಿ ತಾರೆಗಳ ಮೇಲೆ ಹೆಚ್ಚಿನ ಭರವಸೆ ಇಟ್ಟುಕೊಂಡಿದೆ. ಸ್ಯಾಮ್ ಕರ್ರನ್, ಲಿವಿಂಗ್‌ಸ್ಟೋನ್, ಕಗಿಸೊ ರಬಾಡ ಜೊತೆ ಜಾನಿ ಬೇರ್‌ಸ್ಟೋವ್ ಸುಧಾರಿತ ಪ್ರದರ್ಶನ ನೀಡಬೇಕಿದೆ. ಜಿತೇಶ್ ಶರ್ಮಾ, ಪ್ರಭ್‌ಸಿಮ್ರನ್, ಶಶಾಂಕ್ ಸಿಂಗ್ ತಂಡ ತಮ್ಮ ಮೇಲೆ ಇಟ್ಟಿರುವ ನಿರೀಕ್ಷೆ ಉಳಿಸಿಕೊಂಡರಷ್ಟೇ ಮುಂದಿನ ಪಂದ್ಯಗಳಿಗೆ ಅವಕಾಶ ಸಿಗಲಿದೆ.
ಒಟ್ಟು ಮುಖಾಮುಖಿ: 03
ಲಖನೌ: 02
ಪಂಜಾಬ್: 01
ಸಂಭವನೀಯ ಆಟಗಾರರ ಪಟ್ಟಿ
ಲಖನೌ: ಕೆ ಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ನವೀನ್ ಉಲ್ ಹಕ್, ಯಶ್ ಠಾಕೂರ್.
ಪಂಜಾಬ್: ಶಿಖರ್ ಧವನ್(ನಾಯಕ), ಜಾನಿ ಬೇರ್‌ಸ್ಟೋವ್, ಪ್ರಭ್‌ಸಿಮ್ರನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಸ್ಯಾಮ್ ಕರ್ರನ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೋ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಹಾರ್.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಸಿನಿಮಾ.