IPL 2024 ಡೆಲ್ಲಿ ಕ್ಯಾಪಿಟಲ್ಸ್ ಬಗ್ಗುಬಡಿದು ಶುಭಾರಂಭ ಮಾಡಿದ ಪಂಜಾಬ್ ಕಿಂಗ್ಸ್‌

By Naveen Kodase  |  First Published Mar 23, 2024, 7:29 PM IST

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸ್ಪೋಟಕ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 3.2 ಓವರ್‌ಗಳಲ್ಲಿ 39 ರನ್‌ಗಳ ಜತೆಯಾಟವಾಡಿತು.


ಚಂಡಿಗಢ(ಮಾ.23): ಸ್ಯಾಮ್ ಕರ್ರನ್ ಅಕರ್ಷಕ ಅರ್ಧಶತಕ ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಡೆಲ್ಲಿ ಎದುರು 4 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ.

ಇಲ್ಲಿನ ಮಹರಾಜ ಯದುವೀರ್ ಸಿಂಗ್ ಅಂತಾರಾಷ್ಟ್ರೀಯ ಮೈದಾನದಲ್ಲಿ 175 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಶಿಖರ್ ಧವನ್ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್ ಜಾನಿ ಬೇರ್‌ಸ್ಟೋವ್ 9 ರನ್ ಬಾರಿಸಿ ಪೆವಿಲಿಯನ್ ಹಾದಿ ಹಿಡಿದರು. ಇನ್ನು ಪಂಜಾಬ್ ಕಿಂಗ್ಸ್ ತಂಡದ ಇಂಪ್ಯಾಕ್ಟ್ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ 17 ಎಸೆತಗಳನ್ನು ಎದುರಿಸಿ 5  ಬೌಂಡರಿ ಸಹಿತ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಪಂಜಾಬ್ ಕಿಂಗ್ಸ್‌ ತಂಡದ ದುಬಾರಿ ಆಟಗಾರ ಸ್ಯಾಮ್ ಕರ್ರನ್ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಕರ್ರನ್ 47 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 63 ರನ್ ಬಾರಿಸಿ ಮಿಂಚಿದರು. ಇನ್ನು ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಲಿಯಾಮ್ ಲಿವಿಂಗ್‌ಸ್ಟೋನ್ 21 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 38 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

Latest Videos

undefined

CSK ಪಡೆಯನ್ನೇ ಒಂದು ಕ್ಷಣ ತಬ್ಬಿಬ್ಬು ಮಾಡಿದ ಈ ಅನೂಜ್ ರಾವತ್ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸ್ಪೋಟಕ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 3.2 ಓವರ್‌ಗಳಲ್ಲಿ 39 ರನ್‌ಗಳ ಜತೆಯಾಟವಾಡಿತು. ಮಿಚೆಲ್ ಮಾರ್ಷ್ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 20 ರನ್ ಬಾರಿಸಿ ಆರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 21 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 29 ರನ್ ಸಿಡಿಸಿ ಹರ್ಷಲ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. 

ಇನ್ನು ವಿಂಡೀಸ್ ಮೂಲದ ಶಾಯ್ ಹೋಪ್ 33 ರನ್ ಬಾರಿಸಿದರೆ, ನಾಯಕ ರಿಷಭ್ ಪಂತ್ 18 ರನ್ ಬಾರಿಸಿ ಹರ್ಷಲ್‌ ಪಟೇಲ್‌ಗೆ ಎರಡನೇ ಬಲಿಯಾದರು. ಇನ್ನು ರಿಕಿ ಬೊಯಿ ಹಾಗೂ ಟ್ರಿಸ್ಟಿನ್ ಸ್ಟಬ್ಸ್‌ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು. ಇನ್ನು ಅಕ್ಷರ್ ಪಟೇಲ್ ಸಮಯೋಚಿತ 21 ರನ್ ಬಾರಿಸಿದರೆ, ಇಂಪ್ಯಾಕ್ಟ ಆಟಗಾರನಾಗಿ ಕಣಕ್ಕಿಳಿದ ಅಭಿಷೇಕ್ ಪೋರೆಲ್ ಕೊನೆಯಲ್ಲಿ ಕೇವಲ 10 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸುವ ಮೂಲಕ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.
 

click me!