ಸದ್ಯ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ ಎರಡು ಗೆಲುವು ಹಾಗೂ ಒಂದು ಸೋಲಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ತಂಡವು ಮೂರು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಎರಡು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಅಹಮದಾಬಾದ್(ಏ.04): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 17ನೇ ಪಂದ್ಯದಲ್ಲಿಂದು ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಪಂಜಾಬ್ ಕಿಂಗ್ಸ್ ತಂಡದಿಂದ ಅನುಭವಿ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಗಾಯದ ಸಮಸ್ಯೆಯಿಂದ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಸಿಖಂದರ್ ರಾಜಾ ತಂಡ ಕೂಡಿಕೊಂಡಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ತಂಡದಲ್ಲೂ ಕೂಡಾ ಒಂದು ಬದಲಾವಣೆ ಮಾಡಲಾಗಿದ್ದು, ಡೇವಿಡ್ ಮಿಲ್ಲರ್ ಬದಲಿಗೆ ಕೇನ್ ವಿಲಿಯಮ್ಸನ್ ತಂಡ ಕೂಡಿಕೊಂಡಿದ್ದಾರೆ.
ಸದ್ಯ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ ಎರಡು ಗೆಲುವು ಹಾಗೂ ಒಂದು ಸೋಲಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ತಂಡವು ಮೂರು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಎರಡು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ
ಗುಜರಾತ್ ಟೈಟಾನ್ಸ್:
ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್(ನಾಯಕ), ಅಜ್ಮುತುಲ್ಲಾ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ನೂರ್ ಅಹಮದ್, ಮೋಹಿತ್ ಶರ್ಮಾ, ದರ್ಶನ್ ನಾಲ್ಕಂಡೆ.
ಪಂಜಾಬ್ ಕಿಂಗ್ಸ್:
ಶಿಖರ್ ಧವನ್(ನಾಯಕ), ಜಾನಿ ಬೇರ್‌ಸ್ಟೋವ್, ಸಿಖಂದರ್ ರಾಜಾ, ಸ್ಯಾಮ್ ಕರ್ರನ್, ಜಿತೇಶ್ ಶರ್ಮಾ, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೋ ರಬಾಡ, ರಾಹುಲ್ ಚಹರ್, ಆರ್ಶದೀಪ್ ಸಿಂಗ್.
ಪಂದ್ಯ ಆರಂಭ: ಸಂಜೆ 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ