ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನ ಆತಿಥ್ಯ ವಹಿಸಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕಗಿಸೋ ರಬಾಡ ಬದಲಿಗೆ ಲಿಯಾಮ್ ಲಿವಿಂಗ್‌ಸ್ಟೋನ್ ತಂಡ ಕೂಡಿಕೊಂಡಿದ್ದಾರೆ.
ಧರ್ಮಶಾಲಾ(ಮೇ.09): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 58ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರ್ರನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ಲೇ ಆಫ್ ಪ್ರವೇಶಿಸುವ ದೃಷ್ಟಿಯಿಂದ ಉಭಯ ತಂಡಗಳ ಪಾಲಿಗೆ ಮಾಡುವ ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ.
ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನ ಆತಿಥ್ಯ ವಹಿಸಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕಗಿಸೋ ರಬಾಡ ಬದಲಿಗೆ ಲಿಯಾಮ್ ಲಿವಿಂಗ್‌ಸ್ಟೋನ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಆರ್‌ಸಿಬಿ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಲಾಕಿ ಫರ್ಗ್ಯೂಸನ್ ತಂಡ ಕೂಡಿಕೊಂಡಿದ್ದಾರೆ.
undefined
ಪ್ಲೇ ಆಫ್ ಲೆಕ್ಕಾಚಾರ ತುಂಬಾ ಸುಲಭ: ಆರ್‌ಸಿಬಿ ನಾಕೌಟ್ ಹಾದಿ ಹೀಗಿದೆ ನೋಡಿ
ಎರಡು ತಂಡಕ್ಕೂ ಪ್ಲೇ-ಆಫ್ ಹಾದಿ ಕಷ್ಟವಿದ್ದರೂ, ಅಸಾಧ್ಯವೇನಲ್ಲ. ಉಳಿದ 3 ಪಂದ್ಯಗಳನ್ನೂ ಗೆದ್ದು, ಇತರ ತಂಡಗಳ ಫಲಿತಾಂಶ ತಮ್ಮ ಪರವಾಗಿ ಬಂದರೆ ಪ್ಲೇ-ಆಫ್‌ಗೇರಲೂಬಹುದು. ಆದರೆ ಈ ಪಂದ್ಯದ ಮೂಲಕ ಒಂದು ತಂಡ ಪ್ಲೇ-ಆಫ್ ರೇಸ್‌ನಲ್ಲಿ ಉಳಿದುಕೊಂಡರೆ, ಮತ್ತೊಂದು ತಂಡದ ಹಾದಿ ಬಂದ್ ಆಗುವುದು ಖಚಿತ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ವಿಲ್ ಜ್ಯಾಕ್ಸ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್, ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಸಿರಾಜ್, ದಯಾಳ್, ವೈಶಾಖ್ ವಿಜಯ್‌ಕುಮಾರ್, ಲಾಕಿ ಫರ್ಗ್ಯೂಸನ್.
ಪಂಜಾಬ್: ಜಾನಿ ಬೇರ್‌ಸ್ಟೋವ್, ಪ್ರಭ್‌ಸಿಮ್ರನ್ ಸಿಂಗ್, ರೀಲೆ ರೋಸೌ, ಶಶಾಂಕ್ ಸಿಂಗ್, ಸ್ಯಾಮ್ ಕರ್ರನ್(ನಾಯಕ), ಜಿತೇಶ್ ಶರ್ಮಾ, ಅಶುತೋಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಹರ್ಷಲ್ ಪಟೇಲ್, ರಾಹುಲ್ ಚಹರ್, ವಿದ್ವತ್ ಕಾವೇರಪ್ಪ, ಅರ್ಶ್‌ದೀಪ್ ಸಿಂಗ್.
ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ