ಅಯ್ಯರ್‌ ಜುಗಲ್ಬಂದಿ; ಸನ್‌ರೈಸರ್ಸ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಕೆಕೆಆರ್..!

By Naveen Kodase  |  First Published May 21, 2024, 11:28 PM IST

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೆಲ್ಲಲು 160 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಸುನಿಲ್ ನರೈನ್ ಹಾಗೂ ರೆಹಮನುಲ್ಲಾ ಗುರ್ಬಾಜ್ ಕೇವಲ 3.2 ಓವರ್‌ಗಳಲ್ಲಿ 44 ರನ್‌ಗಳ ಜತೆಯಾಟವಾಡಿದರು. ಗುರ್ಬಾಜ್ 23 ರನ್ ಬಾರಿಸಿದರೆ, ನರೈನ್ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.


ಅಹಮದಾಬಾದ್(ಮೇ.21): ಮಿಚೆಲ್ ಸ್ಟಾರ್ಕ್ ಮಾರಕ ದಾಳಿ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಹಾಗೂ ವೆಂಕಟೇಶ್ ಅಯ್ಯರ್ ಆಕರ್ಷಕ ಅರ್ಧಶತಕಗಳ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ಎದುರು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ 8 ವಿಕೆಟ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಇನ್ನೂ 38 ಎಸೆತ ಬಾರಿ ಇರುವಂತೆಯೇ ಕೆಕೆಆರ್ 8 ವಿಕೆಟ್ ಅಂತರದ ಗೆಲುವಿನ ಕೇಕೆ ಹಾಕಿಹಾಕಿದೆ. ಇದರೊಂದಿಗೆ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೆಲ್ಲಲು 160 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಸುನಿಲ್ ನರೈನ್ ಹಾಗೂ ರೆಹಮನುಲ್ಲಾ ಗುರ್ಬಾಜ್ ಕೇವಲ 3.2 ಓವರ್‌ಗಳಲ್ಲಿ 44 ರನ್‌ಗಳ ಜತೆಯಾಟವಾಡಿದರು. ಗುರ್ಬಾಜ್ 23 ರನ್ ಬಾರಿಸಿದರೆ, ನರೈನ್ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

Tap to resize

Latest Videos

ಅಯ್ಯರ್ ಜೋಡಿ ಜುಗಲ್ಬಂದಿ: 67 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಮೂರನೇ ವಿಕೆಟ್‌ಗೆ ನಾಯಕ ಶ್ರೇಯಸ್ ಅಯ್ಯರ್ ಹಾಗೂ ವೆಂಕಟೇಶ್ ಅಯ್ಯರ್ ಮೂರನೇ ವಿಕೆಟ್‌ಗೆ ಮುರಿಯದ 97 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಅನಾಯಾಸವಾಗಿ ಗೆಲುವಿನ ದಡ ಸೇರಿಸಿದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ನಾಯಕ ಶ್ರೇಯಸ್ ಅಯ್ಯರ್ ಕೇವಲ 4 ಎಸೆತಗಳಲ್ಲಿ 58 ರನ್ ಸಿಡಿಸಿದರೆ, ಮತ್ತೊಂದು ತುದಿಯಲ್ಲಿ ವೆಂಕಟೇಶ್ ಅಯ್ಯರ್ 28 ಎಸೆತಗಳನ್ನು ಎದುರಿಸಿ ಅಜೇಯ 51 ರನ್ ಬಾರಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಮಿಚೆಲ್ ಸ್ಟಾರ್ಕ್ ಮಾರಕ ದಾಳಿಗೆ ತತ್ತರಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು 39 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತು. ಟ್ರ್ಯಾವಿಸ್ ಹೆಡ್ ಶೂನ್ಯ ಸುತ್ತಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ 3 ರನ್ ಬಾರಿಸಿ ಪೆವಿಲಿಯನ್ ಹಾದಿ ಹಿಡಿದರು. ಇನ್ನು ನಿತೀಶ್ ರೆಡ್ಡಿ 9 ಹಾಗೂ ಶಹಬಾಜ್ ಅಹಮದ್ ಶೂನ್ಯ ಸುತ್ತಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಇದಾದ ಬಳಿಕ ರಾಹುಲ್ ತ್ರಿಪಾಠಿ ಹಾಗೂ ಹೆನ್ರಿಚ್ ಕ್ಲಾಸೆನ್, ಕೆಕೆಆರ್ ಬೌಲರ್‌ಗಳೆದುರು ದಿಟ್ಟ ಹೋರಾಟ ತೋರಿದರು. ಕ್ಲಾಸೆನ್ 32 ರನ್ ಬಾರಿಸಿದರೆ, ರಾಹುಲ್ ತ್ರಿಪಾಠಿ 55 ರನ್ ಬಾರಿಸಿ ರನೌಟ್ ಆದರು. ಇನ್ನು ಕೊನೆಯಲ್ಲಿ ಪ್ಯಾಟ್ ಕಮಿನ್ಸ್‌ 30 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.

click me!