ಐಪಿಎಲ್ ಇತಿಹಾಸದಲ್ಲಿ ಲಖನೌ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಒಟ್ಟು 4 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ರಾಜಸ್ಥಾನ ರಾಯಲ್ಸ್ ತಂಡವು 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನೊಂದೆಡೆ ಲಖನೌ ತಂಡವು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವಿನ ರುಚಿ ಕಂಡಿದೆ. ಈ ನಾಲ್ಕು ಪಂದ್ಯದಲ್ಲೂ ಮೊದಲು ಬ್ಯಾಟ್ ಮಾಡಿದ ತಂಡವೇ ಗೆಲುವಿನ ನಗೆ ಬೀರಿದೆ.
ಲಖನೌ(ಏ.27): ಈ ಆವೃತ್ತಿ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ರಾಜಸ್ಥಾನ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದು, ಶನಿವಾರ ಲಖನೌ ವಿರುದ್ದ ಸೆಣಸಾಡಲಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ಲಖನೌ ಎದುರು ರಾಜಸ್ಥಾನ ರಾಯಲ್ಸ್ ತಂಡವು ಗೆಲುವು ಸಾಧಿಸಿದರೆ ಬಹುತೇಕ ಮೊದಲ ತಂಡವಾಗಿ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.
ರಾಜಸ್ಥಾನ ರಾಯಲ್ಸ್ ಆಡಿರುವ 8 ಪಂದ್ಯಗಳಲ್ಲಿ 7ರಲ್ಲಿ ಗೆದ್ದು ಅಗ್ರಸ್ಥಾನದಲ್ಲಿದೆ. ಒಂದಿಬ್ಬರನ್ನು ನೆಚ್ಚಿಕೊಳ್ಳದೆ ಸಂಘಟಿತ ಪ್ರದರ್ಶನ ತೋರುತ್ತಿರುವುದು ತಂಡದ ಪ್ಲಸ್ ಪಾಯಿಂಟ್. ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ನಾಯಕ ಸಂಜು ಸ್ಯಾಮ್ಸನ್ ಅಬ್ಬರಿಸುತ್ತಿದ್ದು, ವೇಗಿಗಳಾದ ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್, ಆವೇಶ್ ಖಾನ್ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್ ಎದುರಾಳಿಗಳನ್ನು ಇನ್ನಿಲ್ಲದಂತೆ ಕಾಡುತ್ತಿದ್ದಾರೆ.
IPL 2024: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ನಿರ್ಣಾಯಕ ಫೈಟ್..!
ಇನ್ನೊಂದೆಡೆ ಲಖನೌ ಸೂಪರ್ ಜೈಂಟ್ಸ್ ಕೂಡಾ ಆಲ್ರೌಂಡ್ ಆಟದಿಂದ ಗಮನ ಸೆಳೆಯುತ್ತಿದ್ದು, ಆಡಿರುವ 8ರಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಜಸ್ಥಾನ ವಿರುದ್ಧ ಸೋಲುವ ಮೂಲಕ ಟೂರ್ನಿಗೆ ಕಾಲಿರಿಸಿದ್ದ ತಂಡ ಈಗ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ ಲಖನೌ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಒಟ್ಟು 4 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ರಾಜಸ್ಥಾನ ರಾಯಲ್ಸ್ ತಂಡವು 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನೊಂದೆಡೆ ಲಖನೌ ತಂಡವು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವಿನ ರುಚಿ ಕಂಡಿದೆ. ಈ ನಾಲ್ಕು ಪಂದ್ಯದಲ್ಲೂ ಮೊದಲು ಬ್ಯಾಟ್ ಮಾಡಿದ ತಂಡವೇ ಗೆಲುವಿನ ನಗೆ ಬೀರಿದೆ.
ಕೆಕೆಆರ್ ಎದುರು 262 ರನ್ ಚೇಸ್: ಪಂಜಾಬ್ ಟಿ20 ವಿಶ್ವದಾಖಲೆ!
ಸಂಭವನೀಯ ಆಟಗಾರರ ಪಟ್ಟಿ
ರಾಜಸ್ಥಾನ ರಾಯಲ್ಸ್:
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಧೃವ್ ಜುರೆಲ್, ಶಿಮ್ರೊನ್ ಹೆಟ್ಮೇಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜುವೇಂದ್ರ ಚಹಲ್.
ಲಖನೌ ಸೂಪರ್ ಜೈಂಟ್ಸ್:
ಕ್ವಿಂಟನ್ ಡಿ ಕಾಕ್, ಕೆ ಎಲ್ ರಾಹುಲ್(ನಾಯಕ), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯಿ, ಮೊಹ್ಸಿನ್ ಖಾನ್, ಯಶ್ ಠಾಕೂರ್.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ