ಇಲ್ಲಿವ ವಾಂಖೇಡೆ ಮೈದಾನದಲ್ಲಿ ಗೆಲ್ಲಲು ಕೇವಲ 126 ರನ್ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಓವರ್‌ನಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಜೈಸ್ವಾಲ್ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಸಂಜು ಸ್ಯಾಮ್ಸನ್ 12 ರನ್ ಬಾರಿಸಿ ಆಕಾಶ್ ಮಧ್ವಾಲ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಜೋಸ್ ಬಟ್ಲರ್ 13 ರನ್ ಗಳಿಸಿ ಆಕಾಶ್‌ಗೆ ಎರಡನೇ ಬಲಿಯಾದರು.
ಮುಂಬೈ(ಏ.01): ಯುಜುವೇಂದ್ರ ಚಹಲ್, ಟ್ರೆಂಟ್ ಬೌಲ್ಟ್ ಮಾರಕ ಬೌಲಿಂಗ್ ಹಾಗೂ ರಿಯಾನ್ ಪರಾಗ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ಎದುರು ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ತವರಿನಲ್ಲೂ ಹೀನಾಯ ಸೋಲು ಅನುಭವಿಸುವ ಮೂಲಕ ಹ್ಯಾಟ್ರಿಕ್ ಸೋಲಿನ ಮುಖಭಂಗ ಅನುಭವಿಸಿದೆ.
ಇಲ್ಲಿವ ವಾಂಖೇಡೆ ಮೈದಾನದಲ್ಲಿ ಗೆಲ್ಲಲು ಕೇವಲ 126 ರನ್ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಓವರ್‌ನಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಜೈಸ್ವಾಲ್ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಸಂಜು ಸ್ಯಾಮ್ಸನ್ 12 ರನ್ ಬಾರಿಸಿ ಆಕಾಶ್ ಮಧ್ವಾಲ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಜೋಸ್ ಬಟ್ಲರ್ 13 ರನ್ ಗಳಿಸಿ ಆಕಾಶ್‌ಗೆ ಎರಡನೇ ಬಲಿಯಾದರು.
ಚಹಲ್-ಬೌಲ್ಟ್ ಬಿರುಗಾಳಿ; ರಾಜಸ್ಥಾನಕ್ಕೆ ಸಾಧಾರಣ ಗುರಿ ನೀಡಿದ ಮುಂಬೈ ಇಂಡಿಯನ್ಸ್
ಇದಾದ ಬಳಿಕ 4ನೇ ವಿಕೆಟ್‌ಗೆ ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ 40 ರನ್‌ಗಳ ಜತೆಯಾಟವಾಡಿದರು. ಅಶ್ವಿನ್ 16 ರನ್ ಗಳಿಸಿ ಆಕಾಶ್ ಮಧ್ವಾಲ್‌ಗೆ ಮೂರನೇ ಬಲಿಯಾದರು. ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರಿಯಾನ್ ಪರಾಗ್ ಕೇವಲ 39 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಅಜೇಯ 54 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
🔙 to🔙 half-centuries for Riyan Parag
He continues his good form with the bat 👏👏
Watch the match LIVE on and 💻📱 | | pic.twitter.com/tAnDaCghYm
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲ ಓವರ್‌ನಲ್ಲೇ ಟ್ರೆಂಟ್ ಬೌಲ್ಟ್ ಶಾಕ್ ನೀಡಿದರು. ಪರಿಣಾಮ ರೋಹಿತ್ ಶರ್ಮಾ ಹಾಗೂ ನಮನ್ ಧೀರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೆ ಡೆವಾಲ್ಡ್ ಬ್ರೆವೀಸ್ ಕೂಡಾ ಟ್ರೆಂಟ್ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪೆರೇಡ್ ನಡೆಸಿದರು. ಇನ್ನು ಇಶಾನ್ ಕಿಶನ್ 16 ರನ್ ಗಳಿಸಿ ನಂದ್ರೆ ಬರ್ಗರ್‌ಗೆ ವಿಕೆಟ್ ಒಪ್ಪಿಸಿದರು. ಆಗ ಮುಂಬೈ ಇಂಡಿಯನ್ಸ್ ಸ್ಕೋರ್ 4 ವಿಕೆಟ್ ನಷ್ಟಕ್ಕೆ 20 ರನ್.
ಪತಿ ಧೋನಿಯನ್ನೇ ಟ್ರೋಲ್ ಮಾಡಿದ ಸಾಕ್ಷಿ..! ಏನಂದ್ರು ನೀವೇ ನೋಡಿ
ಇದಾದ ಬಳಿಕ ತಿಲಕ್ ವರ್ಮಾ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 5ನೇ ವಿಕೆಟ್‌ಗೆ 56 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯುಜುವೇಂದ್ರ ಚಹಲ್ ಯಶಸ್ವಿಯಾದರು. ನಾಯಕ ಹಾರ್ದಿಕ್ ಪಾಂಡ್ಯ 34 ರನ್ ಹಾಗೂ ತಿಲಕ್ ವರ್ಮಾ 34 ರನ್ ಬಾರಿಸಿ ಚಹಲ್‌ಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ 9 ವಿಕೆಟ್ ಕಳೆದುಕೊಂಡು 125 ರನ್ ಗಳಿಸಲಷ್ಟೇ ಶಕ್ತವಾಯಿತು.