
ಕೋಲ್ಕತಾ(ಏ.16): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 31ನೇ ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ.
ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೋಸ್ ಬಟ್ಲರ್ ಹಾಗೂ ರವಿಚಂದ್ರನ್ ಅಶ್ವಿನ್ ತಂಡ ಕೂಡಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಆಡುವ ಹನ್ನೊಂದರ ಬಳಗದಿಂದ ಹೊರಗುಳಿದಿದ್ದರು. ಇನ್ನೊಂದೆಡೆ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
549 ರನ್, 81 ಬೌಂಡ್ರಿ: ಆರ್‌ಸಿಬಿ-ಸನ್‌ರೈಸರ್ಸ್ ನಡುವಿನ ಪಂದ್ಯದಲ್ಲಿ ಹಲವು ರೆಕಾರ್ಡ್ಸ್ ನುಚ್ಚುನೂರು..!
ಪ್ಲೇ ಆಫ್ ಪ್ರವೇಶಿಸುವ 2 ನೆಚ್ಚಿನ ತಂಡಗಳು ಎನಿಸಿಕೊಂಡಿರುವ ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ. ರಾಜಸ್ಥಾನ ರಾಯಲ್ಸ್ ಗೆದ್ದರೆ ಅಗ್ರಸ್ಥಾನ ಭದ್ರಪಡಿಸಿಕೊಳ್ಳಲಿದ್ದು, ಕೆಕೆಆರ್ ಈ ಪಂದ್ಯದ ಗೆಲುವಿನ ಮೂಲಕ ನಂ.1 ಸ್ಥಾನಕ್ಕೇರಲು ಕಾಯುತ್ತಿದೆ.
T20 ವಿಶ್ವಕಪ್ ತಂಡದಲ್ಲಿ ಸ್ಥಾನ ಬೇಕಾ..? ಪಾಂಡ್ಯಗೆ ಹೊಸ ಟಾರ್ಗೆಟ್ ಕೊಟ್ಟ ದ್ರಾವಿಡ್, ರೋಹಿತ್, ಅಗರ್‌ಕರ್..!
ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 6 ಪಂದ್ಯಗಳಲ್ಲಿ 5 ಗೆದ್ದಿದ್ದು, ಅಂಕಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ 5ರಲ್ಲಿ 4 ಪಂದ್ಯಗಳಲ್ಲಿ ಜಯಗಳಿಸಿದ್ದು, ಇಂದು ರಾಜಸ್ಥಾನಕ್ಕೆ ಶಾಕ್ ನೀಡಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಎದುರು ನೋಡುತ್ತಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ ನೋಡಿ:
ರಾಜಸ್ಥಾನ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಧೃವ್ ಜುರೆಲ್, ಶಿಮ್ರೊನ್ ಹೆಟ್ಮೇಯರ್, ರವಿಚಂದ್ರನ್ ಅಶ್ವಿನ್, ಕೇಶವ್ ಮಹರಾಜ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಯುಜುವೇಂದ್ರ ಚಹಲ್.
ಕೋಲ್ಕತಾ: ಫಿಲ್ ಸಾಲ್ಟ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ),ಅಂಗಕೃಷ್ ರಘುವಂಶಿ, ಆಂಡ್ರೆ ರಸೆಲ್, ರಮನ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರ, ವರುಣ್ ಚಕ್ರವರ್ತಿ.
ಪಂದ್ಯ: ಸಂಜೆ 7.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.