ಸತತ ಎರಡು ಪಂದ್ಯಗಳನ್ನು ಸೋತು ಕಂಗಾಲಾಗಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಶತಾಯಗತಾಯ ತವರಿನಲ್ಲಿ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಮುಂಬೈ(ಏ.01): 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿಂದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ.
ಸತತ ಎರಡು ಪಂದ್ಯಗಳನ್ನು ಸೋತು ಕಂಗಾಲಾಗಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಶತಾಯಗತಾಯ ತವರಿನಲ್ಲಿ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
🚨 Toss 🚨 win the toss and elect to bowl against | pic.twitter.com/pziDfHNIci
— IndianPremierLeague (@IPL)ಇನ್ನೊಂದೆಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಆರಂಭವನ್ನು ಪಡೆದಿದೆ. ಆಡಿದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ಸ್ ಪಡೆ ಇದೀಗ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದೆ. ಸಂದೀಪ್ ಶರ್ಮಾ ತಂಡದಿಂದ ಹೊರಬಿದ್ದಿದ್ದು, ಬರ್ಗರ್ ತಂಡ ಕೂಡಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಗೆಲುವಿನ ಬೆನ್ನಲ್ಲೇ ರಿಷಭ್ ಪಂತ್‌ಗೆ ಬಿಗ್ ಶಾಕ್..!
ರಾಜಸ್ಥಾನ ರಾಯಲ್ಸ್ ತಂಡದ ಪರ ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಭರ್ಜರಿ ಲಯದಲ್ಲಿದ್ದಾರೆ. ಇನ್ನು ಯುಜುವೇಂದ್ರ ಚಹಲ್ ಹಾಗೂ ರವಿಚಂದ್ರನ್ ಅಶ್ವಿನ್ ಜೋಡಿ ಸ್ಪಿನ್ ದಾಳಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದೆ. ಆದರೆ ಜೋಸ್ ಬಟ್ಲರ್ ಫಾರ್ಮ್ ಸಮಸ್ಯೆ ರಾಜಸ್ಥಾನ ರಾಯಲ್ಸ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇನ್ನೊಂದೆಡೆ ಸತತ ಎರಡು ಪಂದ್ಯಗಳನ್ನು ಸೋತು ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಇದೀಗ ತವರಿನಲ್ಲಿ ಗೆಲುವಿನ ಲಯಕ್ಕೆ ಮರಳಲು ಹಾತೊರೆಯುತ್ತಿದೆ. ರೋಹಿತ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ.
ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿರುವ ಮುಂಬೈಗಿಂದು ರಾಜಸ್ಥಾನ ರಾಯಲ್ಸ್ ಸವಾಲು..!
ಉಭಯ ತಂಡಗಳ ಆಟಗಾರರ ಪಟ್ಟಿ
ಮುಂಬೈ ಇಂಡಿಯನ್ಸ್: ಇಶಾನ್ ಕಿಶಾನ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ನಮನ್, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಗೆರಾಲ್ಡ್ ಕೋಟ್ಜಿ, ಶಮ್ಸ್ ಮುಲಾನಿ, ಪೀಯೂಸ್ ಚಾವ್ಹಾ, ಜಸ್ಪ್ರೀತ್ ಬುಮ್ರಾ, ಮಫಾಕ.
ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮನ್ (ನಾಯಕ), ರಿಯಾನ್ ಪರಾಗ್, ಶಿಮ್ರೋನ್ ಹೆಟೇಯರ್, ಧೃವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಡ್, ಯುಜುವೇಂದ್ರ ಚಹಲ್, ಆಂಡ್ರೆ ಬರ್ಗರ್ , ಆವೇಶ್ ಖಾನ್.
ಪಂದ್ಯ: ಸಂಜೆ. 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ